HOSANAGARA ; ತಾಲೂಕಿನ ಮಾರುತಿಪುರ ಗ್ರಾಮ ಪಂಚಾಯಿತಿಯ ಹಳೆಬಾಣೆಗ ರಸ್ತೆಯ ಪೊದೆಯೊಂದರ ಬಳಿ ಇಸ್ಪೀಟ್ ಆಟದಲ್ಲಿ ತೊಡಗಿದ್ದ ಬಗ್ಗೆ ಮಾಹಿತಿ ದೊರೆತ ಹೊಸನಗರ ಪೊಲೀಸ್ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ತಮ್ಮ ಸಿಬ್ಬಂದಿಗಳಾದ ಪಿಎಸ್ಐ ಎಸ್ ಜಿ ಪಾಟೀಲ್, ಈರೇಶ್, ಮಾಯಪ್ಪ, ರಂಜಿತ್ ಸುನಿಲ್, ಮಹೇಶ್, ಗಂಗಪ್ಪ ಬಟೋಲಿ ರವರೊಂದಿಗೆ ದಾಳಿ ನಡೆಸಿ ಇಸ್ಪೀಟ್ ಆಟದಲ್ಲಿ ತೊಡಗಿಸಿಕೊಂಡಿದ್ದ ಇಸ್ಪೀಟ್ ಎಲೆಗಳನ್ನು ಹಾಗೂ 17,640 ರೂ. ನಗದನ್ನು ವಶಕ್ಕೆ ಪಡೆದು ಇಸ್ಪೀಟ್ ಆಟದಲ್ಲಿ ತೊಡಗಿದ್ದ 11 ಜನರನ್ನು ವಶಕ್ಕೆ ಪಡೆದು ಮುಂದಿನ ಕ್ರಮ ಕೈಗೊಂಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.