Hosanagara

ಹೊಸನಗರ ತಾಲ್ಲೂಕು ಒಕ್ಕಲಿಗರ ಸಂಘದಿಂದ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ ; ಹಾಲಗದ್ದೆ ಉಮೇಶ್

ಹೊಸನಗರ : ತಾಲ್ಲೂಕಿನ ಒಕ್ಕಲಿಗರ ಸಂಘದ ವತಿಯಿಂದ 2025-2026ನೇ ಸಾಲಿನಲ್ಲಿ ಹೊಸನಗರ ತಾಲ್ಲೂಕಿನಲ್ಲಿ ಎಸ್‌ಎಸ್‌ಎಲ್‌ಸಿ, ಪಿಯುಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳನ್ನು ಒಕ್ಕಲಿಗರ ಸಂಘದ ವತಿಯಿಂದ ಪ್ರತಿಭಾವಂತ ಮಕ್ಕಳನ್ನು ಗುರುತಿಸುವ ಕಾರ್ಯ ಕೈಗೊಳ್ಳಲಾಗಿದೆ ಎಂದು ಒಕ್ಕಲಿಗರ ಸಂಘದ ಅಧ್ಯಕ್ಷ ಹಾಲಗದ್ದೆ ಉಮೇಶ್‌ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಒಕ್ಕಲಿಗರ ಸಂಘದ ಸದಸ್ಯರ ಮಕ್ಕಳನ್ನು ಉತ್ತೇಜಿಸುವ ಉದ್ದೇಶದಿಂದ ಈ ಬಾರಿ ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿಯಲ್ಲಿ 95% ಗಿಂತ ಹೆಚ್ಚು ಅಂಕಗಳನ್ನು ಪಡೆದಿರುವ ಮಕ್ಕಳ ಹೆಸರನ್ನು ಮೇ 25ರ ಒಳಗೆ ನೊಂದಾಯಿಸಿಕೊಂಡು ಪ್ರತಿಭಾ ಪುರಸ್ಕಾರಕ್ಕೆ ಒಳಪಡಬೇಕೆಂದು ಕೇಳಿಕೊಂಡಿದ್ದು, ನೋಂದಣಿಗೆ ಮೊಬೈಲ್ ಸಂಖ್ಯೆ 9900406360 ಸಂಪರ್ಕಿಸುವುದು ಅಥವಾ ಸಂಘದ ಕಾರ್ಯದರ್ಶಿಯವರಿಗೆ ಮೂಲ ದಾಖಲೆಗಳನ್ನು ನೀಡಬೇಕೆಂದು ತಿಳಿಸಿದ ಅವರು, ಪ್ರತಿಭಾ ಪುರಸ್ಕಾರದ ದಿನಾಂಕ ಮುಂದಿನ ದಿನದಲ್ಲಿ ತಿಳಿಸಲಾಗುವುದು ಎಂದಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>