‘ಕಾಂತಾರ-1’ ಚಿತ್ರ ತಂಡಕ್ಕೆ ಹೊಸನಗರ ತಹಸೀಲ್ದಾರ್ ನೋಟಿಸ್ !

Written by Mahesh Hindlemane

Updated on:

ಹೊಸನಗರ ; ಜೂ.15 ರಂದು ವಿವಿಧ ದೃಶ್ಯ ಮಾಧ್ಯಮಗಳಲ್ಲಿ ಕಾಂತಾರ ದಿ ಲೆಜೆಂಡ್‌ ಭಾಗ-1 ಚಲನಚಿತ್ರದ ಚಿತ್ರೀಕರಣದ ಸಮಯದಲ್ಲಿ ಮಾಣಿ ಜಲಾಶಯದಲ್ಲಿ ದೋಣಿ ಮುಗುಚಿ 30 ಜನ ನೀರಿನಲ್ಲಿ ಈಜಿ ದಡ ಸೇರಿರುತ್ತಾರೆ ಹಾಗೆಯೇ ಒಂದು ಅಂಬುಲೆನ್ಸ್‌ ಚಿತ್ರೀಕರಣದ ಸ್ಥಳದಿಂದ ತೀರ್ಥಹಳ್ಳಿ ಕಡೆ ಹೋಗಿರುವ ಬಗ್ಗೆ ಪ್ರಕಟವಾಗಿರುತ್ತದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಈ ಚಿತ್ರೀಕರಣ ನಡೆಯುತ್ತಿರುವ ಬಗ್ಗೆ ವಿವಿಧ ಇಲಾಖೆಗಳಿಂದ ಅನುಮತಿ ಪಡೆದಿರುವ ಬಗ್ಗೆ ತಾಲ್ಲೂಕು ಆಡಳಿತಕ್ಕಾಗಲಿ, ಜಿಲ್ಲಾಡಳಿತಕ್ಕಾಗಲಿ ಯಾವುದೇ ಮಾಹಿತಿಯನ್ನು ತಾವು ನೀಡಿರುವುದಿಲ್ಲ ಎಂದು ಹೊಸನಗರದ ತಹಸೀಲ್ದಾರ್ ರಶ್ಮಿ ಹಾಲೇಶ್‌ ಚಿತ್ರ ತಂಡಕ್ಕೆ ನೋಟಿಸ್ ನೀಡಿದ್ದು ಮೂರು ದಿನಗಳ ಒಳಗೆ ಉತ್ತರಿಸುವಂತೆ ತಿಳಿಸಲಾಗಿದೆ.

ಘಟನೆ ಬಗ್ಗೆ ಮಾಧ್ಯಮಗಳಲ್ಲಿ ಸುದ್ದಿ ಪ್ರಕಟವಾದ ನಂತಹ ಹೊಂಬಾಳೆ ಫಿಲ್ಮ್ಸ್‌ ವತಿಯಿಂದ ಸ್ಪಷ್ಟಿಕರಣ ನೀಡಿರುವುದು ಸರಿಯಷ್ಠೇ, ಆದರೆ ಈ ಸುದ್ದಿಯಿಂದ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಚರ್ಚೆಯಾಗುತ್ತಿದ್ದು, ಜಿಲ್ಲಾಧಿಕಾರಿಯವರು ಈ ಬಗ್ಗೆ ವರದಿ ಕೇಳಿದ್ದು, ನಗರ ಹೋಬಳಿ ರಾಜಸ್ವ ನಿರೀಕ್ಷಕರು ನಿಮ್ಮ ಸಂಸ್ಥೆಯ ಮ್ಯಾನೇಜರ್‌ ಅವರಿಗೆ ಅನುಮತಿ ಪತ್ರಗಳನ್ನು ಹಾಜರುಪಡಿಸಲು ದೂರವಾಣಿ ಮೂಲಕ ಸಂಪರ್ಕಿಸಿದ್ದರೂ ಸಹಾ ನೀವುಗಳು ಯಾವುದೇ ಸ್ಪಂದನೆ ನೀಡಿರುವುದಿಲ್ಲ.

ಜೂ‌.15 ರಂದು ನಡೆದ ಘಟನೆಯ ಬಗ್ಗೆ ಸಂಪೂರ್ಣ ಮಾಹಿತಿ ಅವಶ್ಯವಿರುವುದರಿಂದ ಸಮರ್ಪಕ ದಾಖಲೆಗಳೊಂದಿಗೆ ನೋಟಿಸ್ ತಲುಪಿದ 03 ದಿನಗಳೊಳಗಾಗಿ ಸಮಜಾಯಿಷಿ ನೀಡಲು ಸೂಚಿಸಲಾಗಿದೆ, ತಪ್ಪಿದ್ದಲ್ಲಿ ನಿಮ್ಮ ಸಮಜಾಯಿಷಿ ಏನು ಇಲ್ಲವೆಂದು ಭಾವಿಸಿ ಚಿತ್ರೀಕರಣಕ್ಕೆ ನೀಡಿರುವ ಅನುಮತಿಯನ್ನು ರದ್ದುಪಡಿಸಲು ಮೇಲಾಧಿಕಾರಿಗಳಿಗೆ ಶಿಫಾರಸ್ಸು ಮಾಡುವುದಾಗಿಯೂ ನೋಟಿಸ್ ನಲ್ಲಿ ತಿಳಿಸಲಾಗಿದೆ.

Leave a Comment