ಹೊಸನಗರ

ಹೊಸನಗರ ; 1625 ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 7 ಪರೀಕ್ಷಾ ಕೇಂದ್ರಗಳ ಸ್ಥಾಪನೆ – ಬಿಇಒ ಹೆಚ್.ಆರ್. ಕೃಷ್ಣಮೂರ್ತಿ

ಹೊಸನಗರ ; ಕರ್ನಾಟಕ ರಾಜ್ಯದಲ್ಲಿ ಮಾರ್ಚ್ 21ರಿಂದ ಎಸ್‌ಎಸ್‌ಎಲ್‌ಸಿ ಪಬ್ಲಿಕ್ ಪರೀಕ್ಷೆ ಆರಂಭವಾಗಿದ್ದು ಹೊಸನಗರ ತಾಲ್ಲೂಕಿನಲ್ಲಿ 1625 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸುತ್ತಿದ್ದು ಏಳು ಪರೀಕ್ಷಾ ಕೇಂದ್ರಗಳನ್ನು ತೆರೆಯಲಾಗಿದೆ ಎಂದು ಹೊಸನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ ತಿಳಿಸಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿಯ ಆವರಣದಲ್ಲಿ ಸುದ್ಧಿಗಾರರೊಂದಿಗೆ ಮಾತನಾಡಿ, ಹೊಸನಗರ ತಾಲ್ಲೂಕಿನಲ್ಲಿ 825 ಬಾಲಕರು ಹಾಗೂ 800 ಬಾಲಕಿಯರು 2024-25ನೇ ಸಾಲಿನಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯುತ್ತಿದ್ದು, ತಾಲ್ಲೂಕಿನ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಿ ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಅದರಂತೆ ಹೊಸನಗರ ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇಜ್ ಆವರಣದ ಹೈಸ್ಕೂಲ್ ಶಾಲೆಯ ಆವರಣದಲ್ಲಿ ಖಾಸಗಿ ಶಾಲೆಯಾದ ಹೋಲಿ ರೆಡಿಮರ್ ಶಾಲೆಯ ಆವರಣದಲ್ಲಿ ರಿಪ್ಪನ್‌ಪೇಟೆ ಭಾಗಕ್ಕೆ ಅನುಕೂಲಕರವಾಗಿ ಪದವಿ ಕಾಲೇಜ್ ಆವರಣ ಹಾಗೂ ಸರ್ಕಾರಿ ಹೈಸ್ಕೂಲ್‌ನಲ್ಲಿ ನಗರದ ಸರ್ಕಾರಿ ಪ್ರೌಢ ಶಾಲೆಯ ಆವರಣದಲ್ಲಿ ಹಾಗೂ ನಿಟ್ಟೂರು ಜೆ.ಎಂ.ಎಫ್.ಸಿ ಶಾಲೆಯ ಆವರಣದಲ್ಲಿ ಪರೀಕ್ಷಾ ಕೇಂದ್ರಗಳಾಗಿ ಗುರುತಿಸಲಾಗಿದೆ.


ವಿದ್ಯಾರ್ಥಿಗಳು ಸಮಯಕ್ಕೆ ಸರಿಯಾಗಿ ಪರೀಕ್ಷಾ ಕೇಂದ್ರಕ್ಕೆ ಪ್ರವೇಶಿಸಿ ತಮ್ಮ ಹಾಲ್ ಟಿಕೆಟ್ ನಂಬರ್‌ನಲ್ಲಿರುವ ತಮ್ಮ ಸ್ಥಳದಲ್ಲಿ ಕುಳಿತು ಪರೀಕ್ಷೆ ಬರೆಯಬೇಕೆಂದು ಹಾಗೂ ಈ ಶಾಲೆಯ ಸುತ್ತ-ಮುತ್ತ 100 ಮೀಟರ್‌ನಷ್ಟು ನಿಷೇಧಾಜ್ಞೆ ಇರುವುದರಿಂದ ಪೋಷಕರು ಹಾಗೂ ಇತರರು ಈ ಆವರಣದ ಒಳಗೆ ಪ್ರವೇಶಿಸಬಾರದೆಂದು ಈ ಮೂಲಕ ಕೇಳಿಕೊಂಡರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!