HOSANAGARA | ಕಳೆದ ಮೂರ್ನಾಲ್ಕು ದಿನಗಳಿಂದ ತಾಲೂಕಿನಾದ್ಯಂತ ಭಾರಿ ಮಳೆ ಸುರಿಯುತ್ತಿದ್ದು ಅಲ್ಲಲ್ಲಿ ಅನಾಹುತಗಳು ಸಂಭವಿಸುತ್ತಿವೆ.
ಮಾಸ್ತಿಕಟ್ಟೆಯಲ್ಲಿ ದಾಖಲಾಯ್ತು ಅತೀ ಹೆಚ್ಚು ಮಳೆ, ಮತ್ತೆಲ್ಲೆಲ್ಲಿ ಎಷ್ಟಾಗಿದೆ ?
ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಅರಗೋಡಿ ನಾಗರಾಜ್ ಎಂಬುವವರ ವಾಸದ ಮನೆ ಮೇಲೆ ಮಂಗಳವಾರ ಮಧ್ಯಾಹ್ನ ತೆಂಗಿನಮರ ಬಿದ್ದು ಮನೆ ಸಂಪೂರ್ಣ ಜಖಂಗೊಂಡಿದೆ.

ಭಾರಿ ಗಾಳಿಯೊಂದಿಗೆ ಸುರಿದ ಮಳೆಗೆ ಮನೆ ಮುಂದೆ ಇದ್ದ ತೆಂಗಿನಮರ ಬುಡ ಸಮೇತವಾಗಿ ಮನೆಯ ಮೇಲೆ ಬಿದ್ದು ಲಕ್ಷಾಂತರ ರೂ. ನಷ್ಟ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಕೋಡೂರು ಗ್ರಾಪಂ ಸದಸ್ಯ ಯೋಗೇಂದ್ರಪ್ಪ, ಪಿಡಿಒ ನಾಗರಾಜ್, ಕಂದಾಯ ಇಲಾಖೆಯ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ ಸೂಕ್ತ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ.
Rains | ಕಳೆದ 12 ಗಂಟೆಗಳಲ್ಲಿ ಚಿಕ್ಕಮಗಳೂರು ಜಿಲ್ಲೆಯ ಎಲ್ಲೆಲ್ಲಿ ಎಷ್ಟಾಗಿದೆ ಮಳೆ ?

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.