HOSANAGARA | ಎರಡು ಮಕ್ಕಳೊಂದಿಗೆ ಬಾವಿಗೆ ಹಾರಿ ಮಹಿಳೆಯೋರ್ವಳು ಆತ್ಮಹತ್ಯೆ ಮಾಡಿಕೊಂಡ ಹೃದಯ ವಿದ್ರಾವಕ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮತ್ತಿಕೈ ವ್ಯಾಪ್ತಿಯಲ್ಲಿ ಗುರುವಾರ ರಾತ್ರಿ ನಡೆದಿದೆ.
ಗೃಹರಕ್ಷಕ ದಳದ 189 ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ !

ಚಂಪಕಾಪುರ ನಿವಾಸಿ ರಾಜೇಶ್ ಎಂಬವರ ಪತ್ನಿ ವಾಣಿ (32), ಮಕ್ಕಳಾದ ಸಮರ್ಥ(12) ಮತ್ತು ಸಂಪದ (6) ಮೃತರು.
ಪಹಣಿಯಲ್ಲಿ ತಪ್ಪಾದ ಹೆಸರನ್ನು ಸರಿಪಡಿಸುವುದು ಹೇಗೆ ? ಅರ್ಜಿ ಸಲ್ಲಿಸಲು ಯಾವ ದಾಖಲೆಗಳು ಬೇಕಾಗುತ್ತವೆ ?

ಈಗಾಗಲೇ ಮೃತದೇಹವನ್ನು ಬಾವಿಯಿಂದ ಎತ್ತಲಾಗಿದ್ದು, ನಗರ ಆಸ್ಪತ್ರೆಯ ಶವಾಗಾರಕ್ಕೆ ಮರಣೋತ್ತರ ಪರೀಕ್ಷೆ ನಡೆಸಲು ಸಿದ್ದತೆ ನಡೆಸಲಾಗಿದ್ದು ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.ಈ ಘಟನೆಯಿಂದ ಚಂಪಕಾಪುರ ಗ್ರಾಮದಲ್ಲಿ ನೀರವ ಮೌನ ಆವರಿಸಿದೆ.ನಗರ ಠಾಣೆ ಪಿಎಸ್‌ಐ ರಮೇಶ್ ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಗೃಹರಕ್ಷಕ ದಳದ 189 ಹುದ್ದೆಗಳ ಭರ್ತಿಗೆ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ !

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.