ಹೊಸನಗರ

ಹೊಸನಗರ: ಮೂರು ಎಕರೆ ಭತ್ತದ ಗದ್ದೆಗೆ ಕಳೆನಾಶಕ ಸಿಂಪಡಿಸಿದ ಶಂಕೆ; ಪೈರು ಸುಟ್ಟು ಹಾನಿ

ಹೊಸನಗರ ತಾಲೂಕಿನ ಬೈಸೆ ಗ್ರಾಮದ ಬಂಗ್ಲೆಗದ್ದೆಯಲ್ಲಿ ಮೂರು ಎಕರೆ ಭತ್ತದ ಪೈರು ಸುಟ್ಟುಹೋಗಿದ್ದು, ಯಾರೋ ಕಳೆನಾಶಕ ಸಿಂಪಡಿಸಿರುವ ಶಂಕೆ ವ್ಯಕ್ತವಾಗಿದೆ. ಗದ್ದೆ ಮಾಲೀಕರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಶಾಸಕ ಆರಗ ಜ್ಞಾನೇಂದ್ರ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಹೊಸನಗರ: ಮೂರು ಎಕರೆ ಭತ್ತದ ಗದ್ದೆಗೆ ಕಳೆನಾಶಕ ಸಿಂಪಡಿಸಿದ ಶಂಕೆ; ಪೈರು ಸುಟ್ಟು ಹಾನಿ – janendra

ಹೊಸನಗರ: ಹೊಸನಗರ ತಾಲೂಕಿನ ಬೈಸೆ ಗ್ರಾಮದ ಬಂಗ್ಲೆಗದ್ದೆಯಲ್ಲಿ ಸುಮಾರು ಮೂರು ಎಕರೆ ಭತ್ತದ ಪೈರು ಸುಟ್ಟುಹೋಗಿರುವ ಘಟನೆ ನಡೆದಿದೆ. ಗದ್ದೆಗೆ ಯಾರೋ ಕಳೆನಾಶಕ ಸಿಂಪಡಿಸಿರುವ ಶಂಕೆ ವ್ಯಕ್ತವಾಗಿದ್ದು, ಈ ಸಂಬಂಧ ಗದ್ದೆ ಮಾಲೀಕರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಗದ್ದೆ ಮಾಲೀಕ ಬ್ಲಾನಿ ಸಿಕ್ವೇರಾ ನೀಡಿರುವ ದೂರಿನ ಪ್ರಕಾರ, ಸುಮಾರು ಎರಡು ತಿಂಗಳ ಹಿಂದೆ ಜಮೀನಿನಲ್ಲಿ ಭತ್ತದ ನಾಟಿ ಮಾಡಲಾಗಿತ್ತು. ಬೆಳೆಗಾಗಿ ಅಂದಾಜು ₹2 ಲಕ್ಷ ವೆಚ್ಚ ಮಾಡಲಾಗಿತ್ತು ಎನ್ನಲಾಗಿದೆ.

ಅಕ್ಟೋಬರ್ 11ರಂದು ಜಮೀನಿಗೆ ತೆರಳಿ ಪರಿಶೀಲಿಸಿದಾಗ ಭತ್ತದ ಪೈರು ಸುಟ್ಟುಹೋಗಿರುವುದು ಗಮನಕ್ಕೆ ಬಂದಿದೆ. ಬಳಿಕ ಗದ್ದೆ ಕಾಯುವ ದಿನೇಶ್ ಅವರನ್ನು ವಿಚಾರಿಸಿದಾಗ, ಅಕ್ಟೋಬರ್ 9ರ ರಾತ್ರಿ ಬ್ಯಾಟರಿ ಬೆಳಕು ಹಿಡಿದು ಕೆಲವರು ಗದ್ದೆಯಲ್ಲಿ ಓಡಾಡುತ್ತಿರುವುದು ಕಂಡುಬಂದಿತ್ತು ಎಂದು ತಿಳಿಸಿರುವುದಾಗಿ ದೂರಿನಲ್ಲಿ ಉಲ್ಲೇಖಿಸಲಾಗಿದೆ.

ಈ ಹಿನ್ನೆಲೆಯಲ್ಲಿ ಯಾರೋ ಉದ್ದೇಶಪೂರ್ವಕವಾಗಿ ಗದ್ದೆಗೆ ಕಳೆನಾಶಕ ಸಿಂಪಡಿಸಿ ಬೆಳೆ ಹಾನಿಗೊಳಿಸಿರುವ ಸಾಧ್ಯತೆ ಇದೆ ಎಂದು ಮಾಲೀಕರು ಶಂಕೆ ವ್ಯಕ್ತಪಡಿಸಿದ್ದಾರೆ.

ಘಟನೆ ಸಂಬಂಧ ನಗರ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದ್ದು, ಪ್ರಕರಣದ ಕುರಿತು ತನಿಖೆ ನಡೆಯುತ್ತಿದೆ.

ಗದ್ದೆಗೆ ಶಾಸಕ ಆರಗ ಜ್ಞಾನೇಂದ್ರ ಭೇಟಿ

ವಿಷಯ ತಿಳಿದ ತೀರ್ಥಹಳ್ಳಿ ಶಾಸಕ ಆರಗ ಜ್ಞಾನೇಂದ್ರ ಗದ್ದೆಗೆ ಭೇಟಿ ನೀಡಿ ಹಾನಿಗೊಳಗಾದ ಭತ್ತದ ಪೈರನ್ನು ಪರಿಶೀಲಿಸಿದರು.

ಘಟನೆಗೆ ಕಾರಣರಾದವರನ್ನು ಪತ್ತೆಹಚ್ಚಿ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಬೆಳೆ ಹಾನಿಗೊಳಗಾದ ರೈತನಿಗೆ ಸೂಕ್ತ ಪರಿಹಾರ ದೊರಕಿಸಲು ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.

ಮೂರು ಎಕರೆ ಪ್ರದೇಶದಲ್ಲಿದ್ದ ಭತ್ತದ ಪೈರು ಹಾನಿಗೊಳಗಾಗಿರುವುದರಿಂದ ರೈತ ಕುಟುಂಬಕ್ಕೆ ಆರ್ಥಿಕ ನಷ್ಟ ಉಂಟಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್

error: Content is protected !!