Accident

ನಿಂತಿದ್ದ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಬಸ್ !

ಹೊಸನಗರ : ನಿಂತಿದ್ದ ಲಾರಿಗೆ ಬಸ್‌ವೊಂದು ಹಿಂಬದಿಯಿಂದ ಡಿಕ್ಕಿ ಹೊಡೆದ ಘಟನೆ ತುಮಕೂರು ಜಿಲ್ಲೆಯ ಶಿರಾ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಹೊಸನಗರದಿಂದ ಬೆಂಗಳೂರಿಗೆ ತೆರಳುತ್ತಿದ್ದ ಖಾಸಗಿ (ಗುರುಶಕ್ತಿ) ಸ್ಲೀಪರ್ ಬಸ್ ರಸ್ತೆ ಬದಿಯಲ್ಲಿ ನಿಲ್ಲಿಸಲಾಗಿದ್ದ ಈರುಳ್ಳಿ ಲೋಡ್ ಹೊತ್ತ ಲಾರಿಗೆ ಹಿಂಬದಿಯಿಂದ ಡಿಕ್ಕಿ ಹೊಡೆದ ಪರಿಣಾಮ ಈ ಅವಘಡ ಸಂಭವಿಸಿದೆ.

ಅಪಘಾತ ಸಂಭವಿಸಿದ ವೇಳೆ ಬಸ್‌ನಲ್ಲಿ ಸುಮಾರು 30 ಮಂದಿ ಪ್ರಯಾಣಿಕರಿದ್ದರೆಂದು ತಿಳಿದುಬಂದಿದೆ. ಡಿಕ್ಕಿಯ ತೀವ್ರತೆಗೆ ಬಸ್‌ನ ಮುಂಭಾಗ ಭಾಗಶಃ ಜಖಂಗೊಂಡಿದ್ದು, ಕೆಲಕಾಲ ಹೆದ್ದಾರಿಯಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಸ್ಥಳೀಯರು ಹಾಗೂ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಗಾಯಾಳುಗಳಿಗೆ ನೆರವು ನೀಡಿದರು.

ಘಟನೆಯಲ್ಲಿ ಬಸ್ ಚಾಲಕನ ಕಾಲಿಗೆ ಗಾಯಗಳಾಗಿದ್ದು, ಇತರ ಕೆಲ ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿದೆ. ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಅಪಘಾತದ ನಂತರ ಕೆಲಕಾಲ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿದ್ದು, ಪೊಲೀಸರು ಸಂಚಾರವನ್ನು ಸುಗಮಗೊಳಿಸಿದ್ದು ಶಿರಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>