ಹೊಸನಗರ ; ಮನೆ ಅಂಗಳಕ್ಕೆ ಉರುಳಿ ಬಿದ್ದ ಕಾರು !

Written by Mahesha Hindlemane

Published on:

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ರಸ್ತೆ ಪಕ್ಕದ ಮನೆಯ ಅಂಗಳಕ್ಕೆ ಉರುಳಿ ಬಿದ್ದ ಘಟನೆ ರಾಣೆಬೆನ್ನೂರು-ಬೈಂದೂರು ರಾಷ್ಟ್ರೀಯ ಹೆದ್ದಾರಿಯ ಜಯನಗರ ಸಮೀಪ ನಡೆದಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗುರುವಾರ ಸಂಜೆ ಗೋವಾದಿಂದ ಬಂದ ಕಾರು ಜಯನಗರದ ನದಿ ತಿರುವಿನಲ್ಲಿ ನಿಯಂತ್ರಣ ತಪ್ಪಿ, ಮರಕ್ಕೆ ತಾಗಿದೆ. ನಂತರ ಪಕ್ಕದಲ್ಲಿದ್ದ ಮನೆ ಅಂಗಳಕ್ಕೆ ಪಲ್ಟಿಯಾಗಿದೆ.

ಕಾರಿನಲ್ಲಿ ಮೂರು ಮಂದಿ ಪ್ರಯಾಣಿಸುತ್ತಿದ್ದು, ಅವರಿಗೆ ಸಣ್ಣ-ಪುಟ್ಟ ಗಾಯವಾಗಿದೆ. ಅವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಲಾಗಿದೆ.

ಹೊಸನಗರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Comment