ಹೊಸನಗರ

HOSANAGARA | ಕಸಬಾ ಹೋಬಳಿಯಲ್ಲಿ ಅರಣ್ಯ ಒತ್ತುವರಿ ತೆರವು !

Hosanagara Forest Department

HOSANAGARA | ಅರಣ್ಯ ಪ್ರದೇಶ ಒತ್ತುವರಿ ಕುರಿತಂತೆ ತಾಲೂಕಿನ ಕಸಬಾ ಹೋಬಳಿಗೆ ಸಂಬಂಧಿಸಿದ ಎರಡು ಪ್ರಕರಣಗಳಲ್ಲಿ ಶುಕ್ರವಾರ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಅವರ ನೇತೃತ್ವದಲ್ಲಿ ಇಲಾಖೆಯ ಸಿಬ್ಬಂದಿಗಳು ಸುಮಾರು ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿ ಇಲಾಖೆಯ ವಶಕ್ಕೆ ಪಡೆದು ವಿವಿಧ ಕಾಡು ಜಾತಿಯ ಸಸಿಗಳನ್ನು ನೆಟ್ಟಿದ್ದಾರೆ.

WhatsApp Group Join Now
Telegram Group Join Now
Instagram Group Join Now

ನೀವು ಕೂಡ ಸ್ವಂತ ಉದ್ದಿಮೆ ಶುರುಮಾಡಬೇಕೆ? ಇಲ್ಲಿವೆ ಕರ್ನಾಟಕ ಸರ್ಕಾರ ನೀಡುವ ಸ್ವಯಂ ಉದ್ಯೋಗ ಸಾಲ ಯೋಜನೆಗಳು !

ತಾಲೂಕಿನ ಕಸಬಾ ಹೋಬಳಿ ಹರಿದ್ರಾವತಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದೊಂಬೆಕೊಪ್ಪ ಗ್ರಾಮದ ಸ.ನಂ. 39, ಶುಂಠಿಕೊಪ್ಪ ಗ್ರಾಮದ ಸ.ನಂ.33ರ ಅಲಗೇರಿಮಂಡ್ರಿ ಮೀಸಲು ಅರಣ್ಯದಲ್ಲಿ ಎರಡು ಎಕರೆ ಹಾಗೂ ಹಿರೇಮೈಥೆ ಗ್ರಾಮದ ಸ.ನಂ.01ರ ಹರಿದ್ರಾವತಿ ರಾಜ್ಯ ಅರಣ್ಯ ಪ್ರದೇಶದ ಎರಡು ಎಕರೆ ಅರಣ್ಯ ಭೂ ಪ್ರದೇಶದ ಒತ್ತುವರಿ ತೆರವುಗೊಳಿಸಿ ಸಸಿ ನೆಟ್ಟು ಸಿಬ್ಬಂದಿಗಳು ಹಸಿರೀಕರಣ ಮಾಡಿದ್ದಾರೆ.

ಒಟ್ಟಾರೆ ನಾಲ್ಕು ಎಕರೆ ಅರಣ್ಯ ಪ್ರದೇಶದ ಒತ್ತುವರಿ ತೆರವುಗೊಳಿಸಿದ್ದಾರೆ‌. ರಾಜ್ಯ ಸರ್ಕಾರ ಅರಣ್ಯ ಭೂಮಿ ಅಕ್ರಮ ಒತ್ತುವರಿ ತೆರವುಗೊಳಿಸಲು ಸೂಚಿಸಿದ ಬೆನ್ನಲ್ಲೆ ತೆರವು ಕಾರ್ಯವನ್ನು ಇಲಾಖೆ ಚುರುಕಿಗೊಳಿಸಿದೆ.‌

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಬೈಕ್ ಮತ್ತು ಟಿಪ್ಪರ್ ಲಾರಿ ನಡುವೆ ಭೀಕರ ಅಪಘಾತ, ಓರ್ವ ಸಾವು, ಮತ್ತೊಬ್ಬನ ಸ್ಥಿತಿ ಗಂಭೀರ !

ಸಾಗರ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಹೊಸನಗರ ಉಪ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಅವರ ಮಾರ್ಗದರ್ಶನದಲ್ಲಿ ಈ ಒತ್ತುವರಿ ತೆರವು ಕಾರ್ಯ ನಡೆದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!