ಹೊಸನಗರ

HOSANAGARA | ತೈಲಬೆಲೆ ಏರಿಕೆ ಖಂಡಿಸಿ ರಸ್ತೆ ತಡೆ ನಡೆಸಿ ಬಿಜೆಪಿ ಬೃಹತ್ ಪ್ರತಿಭಟನೆ

HOSANAGARA | ರಾಜ್ಯ ಕಾಂಗ್ರೆಸ್ ಸರ್ಕಾರ (Congress Government) ಪೆಟ್ರೋಲ್ (Petrol) ಹಾಗೂ ಡಿಸೇಲ್ (Diesel) ಬೆಲೆಯನ್ನು ಏರಿಸಿದ್ದು ಇದರಿಂದ ಬಡವರು, ಮಧ್ಯಮ ವರ್ಗದವರು ಬದುಕಲು ಕಷ್ಟ ಎಂದು ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲ್ಲೂಕು ಬಿಜೆಪಿ (BJP) ಮಂಡಲದ ಅಧ್ಯಕ್ಷ ನಿಟ್ಟೂರು ಸುಬ್ರಹ್ಮಣ್ಯರವರ ನೇತೃತ್ವದಲ್ಲಿ ರಸ್ತೆ ತಡೆ ನಡೆಸಿ ಬೃಹತ್ ಪ್ರತಿಭಟನೆ ನಡೆಸಿದರು.

WhatsApp Group Join Now
Telegram Group Join Now
Instagram Group Join Now

ವಿಡಿಯೋ ನೋಡಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ 👇 https://bit.ly/3VyzBLv

ಪಟ್ಟಣದ ಚೌಡಮ್ಮ ರಸ್ತೆಯಲ್ಲಿರುವ ಬಿಜೆಪಿ ಕಛೇರಿಯಿಂದ ಕೋರ್ಟ್ ಸರ್ಕಲ್ ವರೆಗೆ ಪ್ರತಿಭಟನೆ ನಡೆಸಿ ನಂತರ ಕೋರ್ಟ್ ಸರ್ಕಲ್‌ನಲ್ಲಿ ರಸ್ತೆ ತಡೆ ನಡೆಸಿದರು. ನಂತರ ತಾಲ್ಲೂಕು ಕಛೇರಿಯವರೆಗೆ ಮೆರವಣಿಗೆ ನಡೆಸಿ ರಾಜ್ಯ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ತಾಲ್ಲೂಕು ಕಛೇರಿಯ ಮುಂಭಾಗ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ಗೆ ಮನವಿ ಪತ್ರ ಸಲ್ಲಿಸಿ ತಕ್ಷಣ ತೈಲಬೆಲೆ ಇಳಿಸದಿದ್ದರೆ ಉಗ್ರ ಹೋರಾಟ ನಡೆಸುವುದಾಗಿ ಸರ್ಕಾರಕ್ಕೆ ಎಚ್ಚರಿಸಿದರು.

ತಾಲ್ಲೂಕು ಮಂಡಲದ ಅಧ್ಯಕ್ಷ ನಿಟ್ಟೂರು ಸುಬ್ರಹ್ಮಣ್ಯ, ಎನ್.ಆರ್. ದೇವಾನಂದ್, ಉಮೇಶ್ ಕಂಚುಗಾರ್, ಎ.ವಿ. ಮಲ್ಲಿಕಾರ್ಜುನ, ಎನ್ ಶೀಧರ ಉಡುಪ, ಕೆ.ವಿ. ಕೃಷ್ಣಮೂರ್ತಿ, ಕಾಲಸಸಿ ಸತೀಶ, ನಾಗರ್ಜುನ, ಮಂಡಾನಿ ಮೋಹನ್, ಸತ್ಯನಾರಾಯಣ ವಿ, ವಿಜಯಕುಮಾರ್, ಎಂ.ಎನ್ ಸುದಾಕರ್, ಶ್ರೀಪತಿರಾವ್, ಕೋಣೆಮನೆ ಶಿವಕುಮಾರ್, ಮಂಜುನಾಥ್ ಸಂಜೀವ, ಹಾಲಗದ್ದೆ ಉಮೇಶ್, ಕೃಷ್ಣವೇಣಿ, ಗಾಯತ್ರಿ ನಾಗರಾಜ್, ಕೋಳಿ ಗೌತಮ್, ನಾಗರತ್ನ ರಮಾನಂದ ಇನ್ನೂ ಮುಂತಾದವರು ಈ ಪ್ರತಿಭಟನೆಯಲ್ಲಿ ಬಾಗವಹಿಸಿದ್ದರು.

Read more

Ration card:ನೀವು ಈ ರೀತಿಯ ತಪ್ಪುಗಳನ್ನ ಮಾಡಿದರೆ ರದ್ದಾಗಲಿದೆ ನಿಮ್ಮ ಪಡಿತರ ಚೀಟಿ

Gruha lakshmi:ಈ ರೂಲ್ಸ್ ಪಾಲಿಸಿದರೆ ಮಾತ್ರ ನಿಮ್ಮ ಖಾತೆ ಸೇರಲಿದೆ ಗೃಹಲಕ್ಷ್ಮಿ 11 ನೇ ಕಂತಿನ ಹಣ

ವಿದ್ಯುತ್‌ ಮಾರ್ಗ ದುರಸ್ಥಿ ವೇಳೆ ಕರೆಂಟ್ ಶಾಕ್, ಕಾರ್ಮಿಕನ ಸ್ಥಿತಿ ಗಂಭೀರ !

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!