HOSANAGARA ; ಪಟ್ಟಣದ ಕೊಡಚಾದ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆಶ್ರಯದಲ್ಲಿ ನ್ಯಾಕ್ ಐಕ್ಯೂಎಸಿ ಸಹಯೋಗದೊಂದಿಗೆ ಕುವೆಂಪು ವಿಶ್ವವಿದ್ಯಾಲಯ ಅಂತರ ಕಾಲೇಜು ಪುರುಷ ಹಾಗೂ ಮಹಿಳೆಯರ ಗುಡ್ಡಗಾಡು ಓಟ ಸ್ಪರ್ಧೆಗೆ ಇಂದು ಬೆಳಗ್ಗೆ ಅದ್ದೂರಿಯ ಚಾಲನೆ ನೀಡಲಾಯಿತು.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/1BLmXfXxLK/
ಗುಡ್ಡಗಾಡು ಓಟ ಸ್ಪರ್ಧೆಯ ಮಹಿಳೆಯರ ತಂಡಕ್ಕೆ ದಂತ ವೈದ್ಯೆ ಡಾ. ಕವಿತಾ ಪ್ರವೀಣ್ ಹಾಗೂ ಪುರುಷರ ತಂಡಕ್ಕೆ ಕೊಡಚಾದ್ರಿ ಕಾಲೇಜಿನ ವಿಶ್ರಾಂತ ಪ್ರಾಂಶುಪಾಲ ಡಾ. ಮಾರ್ಷಲ್ ಶರಾಮ್ ಹಸಿರು ನಿಶಾನೆ ತೋರಿಸಿ ಚಾಲನೆ ನೀಡಿದರು.
ಈ ಸಂದರ್ಭದಲ್ಲಿ ಕೊಡಚಾದ್ರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ. ಕೆ ಉಮೇಶ್ ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು, ಎಂ ಗುಡ್ಡೆಕೊಪ್ಪ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು, ಕಾಲೇಜು ಅಭಿವೃದ್ಧಿ ಸಮಿತಿಯ ಸದಸ್ಯರುಗಳು, ಬೋಧಕ ಹಾಗೂ ಬೋಧಕೇತರ ಸಿಬ್ಬಂದಿಗಳು, ವಿವಿಧ ಕಾಲೇಜುಗಳ ದೈಹಿಕ ಶಿಕ್ಷಣ ವಿಭಾಗದ ನಿರ್ದೇಶಕರು ಸಹಾಯಕ ನಿರ್ದೇಶಕರು ಗ್ರಾಮಸ್ಥರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.
ಹೊಸನಗರ, ಸಾಗರ, ಶಿವಮೊಗ್ಗ, ಭದ್ರಾವತಿ, ಹೊಳೆಹೊನ್ನೂರು, ತರೀಕೆರೆ, ಎನ್.ಆರ್. ಪುರ, ಕೊಪ್ಪ, ಶೃಂಗೇರಿ, ಚಿಕ್ಕಮಗಳೂರು, ಕಡೂರು, ಬೀರೂರು, ಮೂಡಿಗೆರೆ, ಸೊರಬ, ಶಿಕಾರಿಪುರ, ಶಿರಾಳಕೊಪ್ಪ, ಆನವಟ್ಟಿ ಸೇರಿದಂತೆ ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಯ ಸುಮಾರು 30 ಕಾಲೇಜಿನ 150 ವಿದ್ಯಾರ್ಥಿಗಳು ಗುಡ್ಡಗಾಡು ಓಟದಲ್ಲಿ ಪಾಲ್ಗೊಂಡಿದ್ದರು.