HOSANAGARA ; ಇಲ್ಲಿನ ಹಳೇ ಸಾಗರ ರಸ್ತೆಯ ನಿವಾಸಿ ಹೆಚ್.ಆರ್ ಪ್ರಕಾಶ್ (64) ಹೃದಯಘಾತದಿಂದ ತಮ್ಮ ಸ್ವಗೃಹದಲ್ಲಿ ಸೋಮವಾರ ಮಧ್ಯಾಹ್ನ ನಿಧನರಾದರು.
ಇವರು ಹೊಸನಗರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್‌ನ ಹಿರಿಯ ಸದಸ್ಯ ಹಾಗೂ ಮಾಜಿ ಕಾರ್ಯದರ್ಶಿಯಾಗಿ ಹಾಗೂ ವಿವಿಧ ಸಂಘ-ಸಂಸ್ಥೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದರು.
ಸಂತಾಪ :
ಇವರ ನಿಧನಕ್ಕೆ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ತ.ಮ.ನರಸಿಂಹ ಹಾಗೂ ಸಂಘದ ಎಲ್ಲಾ ನಿರ್ದೇಶಕರು, ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷ ವೆಂಕಟೇಶ್‌ಮೂರ್ತಿ ಹಾಗೂ ಎಲ್ಲ ಸದಸ್ಯರು, ಶಿಕ್ಷಕರ ಸಂಘದ ಅಧ್ಯಕ್ಷ ಹೆಚ್.ಆರ್ ಸುರೇಶ್, ಕೋಟೆಗಾರ್ ಸಂಘದ ಅಧ್ಯಕ್ಷ ಶಶಿಧರ್‌ನಾಯ್ಕ್, ಕಾರ್ಯದರ್ಶಿ ಶ್ರೀನಿವಾಸ್ ಹೆಚ್ ಹಾಗೂ ಕೋಟೆಗಾರ್ ಸಂಘದ ಎಲ್ಲ ನಿರ್ದೇಶಕರು, ವಿದ್ಯಾ ಸಂಘದ ಅಧ್ಯಕ್ಷ ಬಿ.ಎಸ್.ಸುರೇಶ್ ಹಾಗೂ ಎಲ್ಲ ಸದಸ್ಯರು, ಡಿಸಿಸಿ ಬ್ಯಾಂಕ್ ನಿರ್ದೇಶಕ ಎಂ.ಎಂ. ಪರಮೇಶ್, ವರ್ತಕರ ಸಂಘದ ಅಧ್ಯಕ್ಷ ವಿಜೇಂದ್ರ ಶೇಟ್ ಹಾಗೂ ಸಂಘದ ಎಲ್ಲ ನಿರ್ದೇಶಕರು ತೀವ್ರ ಸಂತಾಪ ಸೂಚಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.