Accident

ಹೊಸನಗರ ; ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ

ಹೊಸನಗರ ; ಎರಡು ಕಾರುಗಳ‌ ನಡುವೆ ಸಂಭವಿಸಿದ ಮುಖಾಮುಖಿ ಡಿಕ್ಕಿಯಲ್ಲಿ ಐವರು ಗಾಯಗೊಂಡಿದ್ದು ಓರ್ವನ ಸ್ಥಿತಿ ಗಂಭೀರವಾದ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಹೆರಟೆ ಸೇತುವೆ ಸಮೀಪ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಶಿವಮೊಗ್ಗ ಕಡೆಯಿಂದ ಕುಂದಾಪುರ ಕಡೆ ಹೋಗುತ್ತಿದ್ದ ಕಾರು ಮತ್ತು ಮಾಸ್ತಿಕಟ್ಟೆಯಿಂದ ಕೊಡಚಾದ್ರಿ ಕಡೆ ಹೋಗುತ್ತಿದ್ದ ಮತ್ತೊಂದು ಕಾರಿನ ನಡುವೆ ಈ ಅಪಘಾತ ಸಂಭವಿಸಿದೆ.

ಕುಂದಾಪುರ ಕಡೆ ಹೊರಟಿದ್ದ ಕಾರಿನಲ್ಲಿ ಅಲ್ಪಾಜ್, ಇರ್ಫಾನ್ ಇಬ್ಬರು ಇದ್ದು ಅಲ್ಫಾಜ್ ಗೆ ಹೊಟ್ಟೆಭಾಗಕ್ಕೆ ಬಲವಾದ ಪೆಟ್ಟು ಬಿದ್ದು ಗಂಭೀರ ಗಾಯವಾಗಿದೆ. ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿದೆ. ಇರ್ಫಾನ್ ಕೂಡ ಗಾಯಗೊಂಡಿದ್ದಾನೆ.

ಕೊಡಚಾದ್ರಿ ಕಡೆ ಹೊರಟಿದ್ದ ಕಾರಿನಲ್ಲಿ ಮಂಜುನಾಥ್, ಯಶ್, ಮೋಹನ್ ಸೇರಿದಂತೆ ಮೂವರು ಇದ್ದು ಮೋಹನ್ ಎಂಬುವವರ ತಲೆಗೆ ಪೆಟ್ಟಾಗಿದ್ದು, ನಗರ ಆಸ್ಪತ್ರೆಯಲ್ಲಿ ಚಿಕಿತ್ಸೆ ಬಳಿಕ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಲಾಗಿದೆ. ಉಳಿದ ಇಬ್ಬರ ಕೈಗಳಿಗೆ ಗಾಯಗಳಾಗಿವೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಇವರು ಬಳ್ಳಾರಿಯ ಕಂಪ್ಲಿ, ಕರಟಗಿ ಕಡೆಯವರಾಗಿದ್ದು ಶಿಕ್ಷಣ ಇಲಾಖೆಯಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಶಿವಮೊಗ್ಗದಲ್ಲಿ ನಡೆದ ನೌಕರರ ಕ್ರೀಡಾಕೂಟದಲ್ಲಿ ಭಾಗವಹಿಸಿ ಬಳಿಕ ಕೊಡಚಾದ್ರಿಗೆ ಹೋಗುತ್ತಿದ್ದರು. ನಗರದಲ್ಲಿ ರಸ್ತೆ ಮಿಸ್ ಆಗಿ ಮಾಸ್ತಿಕಟ್ಟೆ ಹೋಗಿದ್ದರು. ಬಳಿಕ ವಾಪಸ್ ಬರುವ ವೇಳೆ ಈ ಅಪಘಾತವಾಗಿದೆ.

ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]