ಹೊಸನಗರ ; ಖಚಿತ ಮಾಹಿತಿ ಮೇರೆಗೆ ಪೊಲೀಸರು ದಾಳಿ ನಡೆಸಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳು ವಶಕ್ಕೆ ಪಡೆದ ಘಟನೆ ಗೊರಗೋಡು ಗ್ರಾಮದ ಗೊರದಳ್ಳಿ ಶರಾವತಿ ಹಿನ್ನೀರು ಪ್ರದೇಶದಲ್ಲಿ ನಡೆದಿದೆ.
ಹೊಸನಗರ ವೃತ್ತ ನಿರೀಕ್ಷಕ ಗುರಣ್ಣ ಎಸ್ ಹೆಬ್ಬಾಳ್, ಪಿಎಸ್ಐ ಶಂಕರಗೌಡ ಪಾಟೀಲ್ ಮತ್ತು ಸಿಬ್ಬಂದಿಯವರೊಂದಿಗೆ ದಾಳಿ ಮಾಡಿ ಅಕ್ರಮವಾಗಿ ದಾಸ್ತಾನು ಮಾಡಿದ್ದ ಮರಳನ್ನು ವಶಕ್ಕೆ ಪಡೆದುಕೊಂಡು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.