HOSANAGARA | ರಾಜ್ಯದಲ್ಲಿ ಡೆಂಗ್ಯೂ (Dengue) ಪ್ರಕರಣಗಳು ವಿಪರೀತವಾಗಿ ಹಬ್ಬುತ್ತಿದ್ದು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿಗಳು ಜಾಗೃತಿಯಿಂದ ಕೆಲಸ ಮಾಡಬೇಕು ಮತ್ತು ಡೆಂಗ್ಯೂ ಕಾಯಿಲೆ ಹೋಗುವವರೆಗೆ ಒಂದು ದಿನವೂ ರಜೆ ಹಾಕದೆ ಆಸ್ಪತ್ರೆ ಸಿಬ್ಬಂದಿಗಳು ಕೆಲಸ ಮಾಡಬೇಕೆಂದು ಹೊಸನಗರ-ಸಾಗರ ಕ್ಷೇತ್ರದ ಶಾಸಕ ಬೇಳೂರು ಗೋಪಾಲಕೃಷ್ಣ (Beluru Gopalakrishna) ಆಸ್ಪತ್ರೆ ಅಧಿಕಾರಿಗಳಿಗೆ ಸೂಚಿಸಿದರು.
Malenadu Rain | ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ ಮತ್ತು ಚಿಕ್ಕಮಗಳೂರು ಜಿಲ್ಲೆಯ ಯಾವೆಲ್ಲ ಪ್ರದೇಶದಲ್ಲಿ ಎಷ್ಟು ಮಳೆಯಾಗಿದೆ ಗೊತ್ತಾ ?
ಇಲ್ಲಿನ ತಾಲ್ಲೂಕು ಪಂಚಾಯತಿ ಆವರಣದಲ್ಲಿ ಶುಕ್ರವಾರ ಪ್ರಗತಿ ಪರಿಶೀಲನ ಸಭೆಯನ್ನು ಆಯೋಗಿಸಲಾಗಿದ್ದು ಈ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹೊಸನಗರ ತಾಲ್ಲೂಕಿನಲ್ಲಿ ಒಂದು ತಿಂಗಳಲ್ಲಿ 43 ಡೆಂಗ್ಯೂ ಪ್ರಕರಣಗಳು ದಾಖಲಾಗಿದ್ದು ಅವರು ಗುಣಮುಖರಾಗಿ ಮನೆಗೆ ಹೋಗಿದ್ದಾರೆ. ತಾಲ್ಲೂಕಿನಲ್ಲಿ ವಾರಕ್ಕೆ ಒಮ್ಮೆ ಗ್ರಾಮ ಪಂಚಾಯತಿಯವರ ಸಹಾಯದಿಂದ ಔಷಧಿ ಸಿಂಡಿಸುತ್ತಿದ್ದಾರೆ ಆದ್ದರಿಂದ ನಮ್ಮ ತಾಲ್ಲೂಕಿನಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಕ್ಷೀಣಿಸುತ್ತಿದೆ ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಸುರೇಶ್ ಹಾಗೂ ಸಾರ್ವಜನಿಕ ಆಸ್ಪತ್ರೆಯ ವೈದ್ಯಾಧಿಕಾರಿ ಗುರುಮೂರ್ತಿ ಸಭೆಗೆ ತಿಳಿಸಿದರು.
ಮಳೆಗಾಲ ಮತ್ತು ಡೆಂಗ್ಯೂ ವಿರುದ್ಧ ಎಲ್ಲ ಅಧಿಕಾರಿಗಳು ಹೋರಾಟ ನಡೆಸಿ ಸಾರ್ವಜನಿಕರಿಂದ ಪ್ರಶಂಸೆ ಪಡೆಯಿರಿ ನೀವು ಮೂರು ತಿಂಗಳು ಹಗಲಿರುಳು ಸೇವೆ ಸಲ್ಲಿಸುವುದರಿಂದ ನಮ್ಮ ಸರ್ಕಾರಕ್ಕೆ ಮತ್ತು ನಮಗೆ ಹೆಮ್ಮೆ ಎನಿಸುತ್ತದೆ. ನೀವು ಮಾಡುತ್ತಿರುವ ಕೆಲಸ ಸಾರ್ವಜನಿಕರಿಗೆ ತೃಪ್ತಿ ಪಡಿಸುವಂತಿರಬೇಕು ಅದನ್ನು ಬಿಟ್ಟು ಜನರನ್ನು ಅಲೆದಾಡಿಸುವುದು ಮಾಡಿದರೆ ಸಾರ್ವಜನಿಕರಿಂದ ದೂರು ಬಂದರೆ ತಕ್ಷಣ ಅಂಥಹ ಅಧಿಕಾರಿಗಳ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ ಎಂದು ಅಧಿಕಾರಿಗಳಿಗೆ ಖಡಕ್ ಎಚ್ಚರಿಕೆ ಬೇಳೂರು ನೀಡಿದರು.
ಆಸ್ಪತ್ರೆ ಇರುವುದು ಅಲಂಕಾರಕ್ಕಾಗಿ ಅಲ್ಲ, ಸಾರ್ವಜನಿಕ ರೋಗಿಗಳ ಸೇವೆಗೆ : ಆರಗ ಜ್ಞಾನೇಂದ್ರ
ಸುಮಾರು ಅಂದಾಜು ನೂರು ಕೋಟಿಯಷ್ಟು ಹಣವನ್ನು ವ್ಯಯ ಮಾಡಿ ಆಸ್ಪತ್ರೆ ಕಟ್ಟಿರುವುದು ಅಲಂಕಾರಕ್ಕಾಗಿ ಅಲ್ಲ, ಸಾರ್ವಜನಿಕ ರೋಗಿಗಳಿಗೆ ಚಿಕಿತ್ಸೆ ನೀಡಲು ಕಟ್ಟಿರುವುದು. ಸರ್ಕಾರಿ ಆಸ್ಪತ್ರೆಗೆ ಬಂದರೇ ರೋಗಿಗಳ ಚಿಕಿತ್ಸೆ ಸರಿಯಾಗಿ ನೀಡುತ್ತಿಲ್ಲ ಎಂದು ದೂರುಗಳು ಆಗಾಗ ಬರುತ್ತಿದೆ ಎಂದು ಕೆ.ಡಿ.ಪಿ ಸಭೆಯಲ್ಲಿ ಶಾಸಕ ಆರಗ ಜ್ಞಾನೇಂದ್ರ ಗುಡುಗಿದರು.
ಕೆಡಿಪಿ ಸಭೆಯಲ್ಲಿ ಹೊಸನಗರ ತಾಲ್ಲೂಕಿನ ಕಾರ್ಮಿಕ ಇಲಾಖೆಯ ವತಿಯಿಂದ 81 ಜನ ಫಲಾನುಭವಿಗಳಿಗೆ ಹೊಲಿಗೆ ಯಂತ್ರ ಸಲಕರಣೆಗಳನ್ನು ವಿತರಿಸಿ ಮಾತನಾಡಿದರು.
ಕಾಲುಸಂಕ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿ ಮಹಿಳೆ ಸಾವು !
ಹೊಸನಗರ ತಾಲ್ಲೂಕಿನಲ್ಲಿ ನಾಲ್ಕು ಅಂಬ್ಯುಲೆನ್ಸ್ ಅವುಗಳನ್ನು ಸಾರ್ವಜನಿಕರ ಉಪಯೋಗಕ್ಕಾಗಿ ಇಟ್ಟಿರುವುದು ತುರ್ತು ರೋಗಿಗಳನ್ನು ಕರೆದುಕೊಂಡು ಹೋಗುವಾಗ ನಗರದಿಂದ ರಿಪ್ಪನ್‌ಪೆಟೆಯವರೆಗೆ ಒಂದು ಅಂಬ್ಯುಲೆನ್ಸ್ ರಿಪ್ಪನ್‌ಪೇಟೆಯಿಂದ ಇನ್ನೊಂದು ಅಂಬ್ಯುಲೆನ್ಸ್ ಬದಲಾವಣೆಗೆ ಆದೇಶ ನೀಡಿದವರು ಯಾರು ? ರೋಗಿಯ ಜೀವ ಉಳಿಸುವುದು ನಿಮ್ಮ ಕೈಯಲ್ಲಿದ್ದು ಅವರನ್ನು ಉಳಿಸುವ ಪ್ರಯತ್ನ ಮಾಡಬೇಕು ಇಂದಿನಿಂದಲೇ ಯಾವ ಅಂಬ್ಯುಲೆನ್ಸ್ ತುರ್ತು ಇದ್ದಾಗ ಯಾವ ಆಸ್ಪತ್ರೆಗೆ ತಲುಪಿಸಬೇಕೋ ಅಲ್ಲಿಯವರೆಗೆ ರೋಗಿಯನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ತಲುಪಿಸಿ ರೋಗಿಯ ಜೀವ ಉಳಿಸಿ ಎಂದು ತಾಲ್ಲೂಕು ವೈದ್ಯಾಧಿಕಾರಿಗಳು ಅಂಬ್ಯುಲೆನ್ಸ್ ಡ್ರೈವರ್‌ಗಳಿಗೆ ಆದೇಶಿಸಿ ಎಂದು ಸುರೇಶ್‌ರವರಿಗೆ ತಿಳಿಸಿದರು.
ಈ ಸಭೆಯಲ್ಲಿ ತಹಶೀಲ್ದಾರ್ ರಶ್ಮಿ ಹಾಲೇಶ್, ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್, ತಾ.ಪಂ. ವ್ಯವಸ್ಥಾಪಕರಾದ ಸಂತೋಷ್ ಕುಮಾರ್, ಅಬಕಾರಿ ಇನ್ಸ್‌ಪೆಕ್ಟರ್ ನಾಗರಾಜ್, ಬಿಇಓ ಕೃಷ್ಣಮೂರ್ತಿ ಶಾಸಕರ ಆಪ್ತ ಕಾರ್ಯದರ್ಶಿ ಸಣ್ಣಕ್ಕಿ ಮಂಜು ಹಾಗೂ ಬಸವರಾಜ್, ರೆವಿನ್ಯೂ ಇನ್ಸ್‌ಪೆಕ್ಟರ್ ರೇಣುಕಯ್ಯ, ಕೌಶಿಕ್, ತಾಲ್ಲೂಕಿನ ಎಲ್ಲಾ ಗ್ರಾಮ ಲೆಕ್ಕಾಧಿಕಾರಿಗಳು ತಾಲ್ಲೂಕಿನ ಎಲ್ಲ ಅಧಿಕಾರಿಗಳ ವರ್ಗದವರು ಉಪಸ್ಥಿತರಿದ್ದರು.