ಹೊಸನಗರ

ಹೊಸನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ

ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಕೀಳಂಬಿ ರಸ್ತೆ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಸಂಜೀವ ಅಲಿಯಾಸ್ ಗಾರೆ ಸಂಜು ಅವರ ಮನೆಗೆ ಬೆಂಕಿ ತಗುಲಿದ್ದು, ಮನೆಯೊಳಗಿದ್ದ ವಸ್ತುಗಳು ಸುಟ್ಟು ಲಕ್ಷಾಂತರ ರೂಪಾಯಿ ನಷ್ಟ ಸಂಭವಿಸಿರುವ ಸಾಧ್ಯತೆ ಇದೆ. ಘಟನೆ ವೇಳೆ ಮನೆಯವರು ಗಣೇಶೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರು.

ಹೊಸನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ – fire2

ಶಿವಮೊಗ್ಗ: ಹೊಸನಗರ ತಾಲೂಕಿನ ಕೋಡೂರು ಗ್ರಾಮದ ಕೀಳಂಬಿ ರಸ್ತೆ ಬಳಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ ತಗುಲಿದ ಘಟನೆ ಮಂಗಳವಾರ ರಾತ್ರಿ ಸಂಭವಿಸಿದೆ.

WhatsApp Group Join Now
Telegram Group Join Now
Instagram Group Join Now
ಹೊಸನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ – fire4

ಸ್ಥಳೀಯ ಸಂಜೀವ ಅಲಿಯಾಸ್ ಗಾರೆ ಸಂಜು ಅವರಿಗೆ ಸೇರಿದ ಸ್ಲ್ಯಾಬ್ ಮನೆಗೆ ರಾತ್ರಿ ಸುಮಾರು 8 ಗಂಟೆ ವೇಳೆಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ತಿಳಿದುಬಂದಿದೆ. ಘಟನೆ ವೇಳೆ ಮನೆಯವರು ಗಣೇಶೋತ್ಸವ ಕಾರ್ಯಕ್ರಮಕ್ಕೆ ತೆರಳಿದ್ದರಿಂದ ಮನೆಯಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.

ಹೊಸನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ – fire3

ಬೆಂಕಿ ವೇಗವಾಗಿ ವ್ಯಾಪಿಸಿದ ಪರಿಣಾಮ ಮನೆಯೊಳಗಿದ್ದ ಹಲವು ವಸ್ತುಗಳು ಸಂಪೂರ್ಣವಾಗಿ ಸುಟ್ಟು ಹೋಗಿದ್ದು, ಮನೆಗೂ ಹೆಚ್ಚಿನ ಪ್ರಮಾಣದಲ್ಲಿ ಹಾನಿಯಾಗಿದೆ. ಪ್ರಾಥಮಿಕ ಮಾಹಿತಿಯಂತೆ ಲಕ್ಷಾಂತರ ರೂಪಾಯಿ ಮೌಲ್ಯದ ನಷ್ಟ ಸಂಭವಿಸಿರುವ ಸಾಧ್ಯತೆ ಇದೆ.

ಘಟನೆಯ ಮಾಹಿತಿ ತಿಳಿದ ತಕ್ಷಣ ಹೊಸನಗರ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವ ಕಾರ್ಯ ಕೈಗೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಹೊಸನಗರ: ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ; ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿ – fire1

ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದಲೇ ಬೆಂಕಿ ಕಾಣಿಸಿಕೊಂಡಿರುವ ಶಂಕೆ ವ್ಯಕ್ತವಾಗಿದ್ದು, ಘಟನೆ ಬಳಿಕ ಕೋಡೂರು ವ್ಯಾಪ್ತಿಯಲ್ಲಿ ಕೆಲಕಾಲ ವಿದ್ಯುತ್ ಪೂರೈಕೆ ಸ್ಥಗಿತಗೊಂಡಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬೆಂಕಿ ಅವಘಡದಿಂದ ಸಂಭವಿಸಿರುವ ನಿಖರ ನಷ್ಟ ಹಾಗೂ ಘಟನೆಯ ಕಾರಣದ ಕುರಿತು ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650