ಹೊಸನಗರ

ಹೊಸನಗರ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ; ಬಸ್ಸನ್ನೇ ಆಸ್ಪತ್ರೆಗೆ ಚಲಾಯಿಸಿ ಪ್ರಯಾಣಿಕನ ಪ್ರಾಣ ಉಳಿಸಲು ನೆರವು

ಸಾಗರದಿಂದ ಹೊಸನಗರಕ್ಕೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಪ್ರಯಾಣಿಕನಿಗೆ ದಿಢೀರ್ ಎದೆನೋವು ಕಾಣಿಸಿಕೊಂಡಾಗ ಚಾಲಕ ಮೋಹನ್ ಮತ್ತು ನಿರ್ವಾಹಕ ಪರಮೇಶ್ವರ್ ಟಿ. ನಾಯ್ಕ ಅವರು ಬಸ್ಸನ್ನೇ ನೇರವಾಗಿ ಹೊಸನಗರದ ಸರ್ಕಾರಿ ಆಸ್ಪತ್ರೆಗೆ ಚಲಾಯಿಸಿ ತುರ್ತು ಚಿಕಿತ್ಸೆಗೆ ನೆರವಾದರು.

ಹೊಸನಗರ: ಮಾನವೀಯತೆ ಮೆರೆದ ಕೆಎಸ್‌ಆರ್‌ಟಿಸಿ ಸಿಬ್ಬಂದಿ; ಬಸ್ಸನ್ನೇ ಆಸ್ಪತ್ರೆಗೆ ಚಲಾಯಿಸಿ ಪ್ರಯಾಣಿಕನ ಪ್ರಾಣ ಉಳಿಸಲು ನೆರವು – 1350de3d ee9a 4ba…

ಶಿವಮೊಗ್ಗ: ಬಸ್‌ನಲ್ಲಿ ಪ್ರಯಾಣಿಸುತ್ತಿದ್ದ ವೇಳೆ ದಿಢೀರ್ ಎದೆನೋವಿನಿಂದ ಅಸ್ವಸ್ಥಗೊಂಡ ಪ್ರಯಾಣಿಕನಿಗೆ ತಕ್ಷಣ ನೆರವಾಗುವ ಮೂಲಕ ಕೆಎಸ್‌ಆರ್‌ಟಿಸಿ ಚಾಲಕ ಮತ್ತು ನಿರ್ವಾಹಕ ಸಮಯಪ್ರಜ್ಞೆ ಹಾಗೂ ಮಾನವೀಯತೆ ಮೆರೆದ ಘಟನೆ ಹೊಸನಗರದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಸಾಗರದಿಂದ ಹೊಸನಗರದತ್ತ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿ ಸೋನಲೆ ಗ್ರಾಮೀಣ ಬ್ಯಾಂಕ್‌ನ ಉದ್ಯೋಗಿ ವಿಶ್ವನಾಥ್ ಪ್ರಯಾಣಿಸುತ್ತಿದ್ದರು. ಪ್ರಯಾಣದ ಮಧ್ಯೆ ಅವರಿಗೆ ಏಕಾಏಕಿ ತೀವ್ರ ಎದೆನೋವು ಕಾಣಿಸಿಕೊಂಡಿದ್ದು, ಆರೋಗ್ಯ ಸ್ಥಿತಿ ಹದಗೆಟ್ಟಿದೆ ಎನ್ನಲಾಗಿದೆ.

ಪರಿಸ್ಥಿತಿಯ ಗಂಭೀರತೆಯನ್ನು ಗಮನಿಸಿದ ಬಸ್ ಚಾಲಕ ಮೋಹನ್ ಹಾಗೂ ನಿರ್ವಾಹಕ ಪರಮೇಶ್ವರ್ ಟಿ. ನಾಯ್ಕ ಅವರು ಆಂಬ್ಯುಲೆನ್ಸ್ ಬರುವವರೆಗೆ ಕಾಯದೆ, ಸಮಯ ವ್ಯರ್ಥ ಮಾಡದೆ ಪ್ರಯಾಣಿಕನನ್ನು ಕರೆದೊಯ್ಯುತ್ತಿದ್ದ ಬಸ್ಸನ್ನೇ ನೇರವಾಗಿ ಹೊಸನಗರದ ಸರ್ಕಾರಿ ಆಸ್ಪತ್ರೆಗೆ ಚಲಾಯಿಸಿದ್ದಾರೆ.

ಸಮಯಕ್ಕೆ ಸರಿಯಾಗಿ ಆಸ್ಪತ್ರೆಗೆ ತಲುಪಿದ್ದರಿಂದ ವಿಶ್ವನಾಥ್ ಅವರಿಗೆ ತಕ್ಷಣ ಪ್ರಾಥಮಿಕ ಚಿಕಿತ್ಸೆ ನೀಡಲು ಸಾಧ್ಯವಾಗಿದೆ. ಬಳಿಕ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದ ಹಿನ್ನೆಲೆಯಲ್ಲಿ ಅವರನ್ನು ಶಿವಮೊಗ್ಗದ ಆಸ್ಪತ್ರೆಗೆ ರವಾನಿಸಲಾಗಿದೆ.

ಆರೋಗ್ಯ ತುರ್ತು ಪರಿಸ್ಥಿತಿಯಲ್ಲಿ ತಕ್ಷಣ ನಿರ್ಧಾರ ತೆಗೆದುಕೊಂಡ ಚಾಲಕ ಮತ್ತು ನಿರ್ವಾಹಕರ ಕಾರ್ಯಕ್ಕೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ.

ಪ್ರಯಾಣಿಕನ ಜೀವ ಉಳಿಸಲು ತಮ್ಮ ಕರ್ತವ್ಯಕ್ಕಿಂತಲೂ ಮುಂದೆ ಹೋಗಿ ಸ್ಪಂದಿಸಿದ ಕೆಎಸ್‌ಆರ್‌ಟಿಸಿ ಸಿಬ್ಬಂದಿಯ ಮಾನವೀಯ ನಡೆ ಸಾಮಾಜಿಕ ಜಾಲತಾಣಗಳಲ್ಲಿಯೂ ಪ್ರಶಂಸೆಗೆ ಪಾತ್ರವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Koushik Kaapi

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.

Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650

ವೆಬ್‌ಸೈಟ್