ಹೊಸನಗರ ; ತಾಲೂಕಿನಾದ್ಯಂತ ಭಾರಿ ಮಳೆ ಮುಂದುವರೆದಿದ್ದು ಅರಮನೆಕೊಪ್ಪ ಗ್ರಾಪಂ ವ್ಯಾಪ್ತಿಯ ಕುಂದಗಲ್ ಗ್ರಾಮದಲ್ಲಿ ಭಾರೀ ಪ್ರಮಾಣದ ಭೂಕುಸಿತ ಕಂಡು ಬಂದಿದ್ದು ಆತಂಕ ಸೃಷ್ಟಿಸಿದೆ.
ಸುಮಾರು 200 ಮೀ ನಷ್ಟು ಉದ್ದ, ಒಂದೂವರೆ ಅಡಿಯಷ್ಟು ಕೆಳಗೆ ಭೂಮಿ ಕುಸಿತ ಕಂಡು ಬಂದಿದೆ. ಕಳೆದ ವರ್ಷ ಇದೇ ಜಾಗದಲ್ಲಿ ಭೂಮಿ ಕುಸಿತ ಕಂಡು ಬಂದಿದ್ದು ಸಾಗರ ಎಸಿ, ಗಣಿ ಮತ್ತು ಭೂಜ್ಞಾನ ಇಲಾಖೆ ಮತ್ತು ಕಂದಾಯ ಇಲಾಖೆ ಅಧಿಕಾರಿಗಳು ದೌಡಾಯಿಸಿ ಪರಿಶೀಲಿಸಿದ್ದರು.

ಕಳೆದ ವರ್ಷದ ಮಾದರಿಯಲ್ಲೇ ಕುಸಿತ ಕಂಡುಬಂದಿದ್ದು, ಈ ವರ್ಷ ಸ್ವಲ್ಪ ಹೆಚ್ಚೇ ಭೂಮಿ ಕುಸಿದಿದೆ. ಕಳೆದ ಬಾರಿ ಆಗಮಿಸಿದ್ದ ಅಧಿಕಾರಿಗಳು ಸ್ವಲ್ಪ ಕಾದು ನೋಡೋಣ ಎಂದಿದ್ದರು. ಈಗ ಮತ್ತೆ ಕುಸಿತ ಕಂಡು ಬಂದಿದ್ದು ಗ್ರಾಮಸ್ಥರು ಭಯಪಡುವಂತಾಗಿದೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.