ಹೊಸನಗರ

ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 15 ಸೆಂ.ಮೀ. ಮಳೆ, ಶೇ. 26 ಭಾಗ ತುಂಬಿದ ಲಿಂಗನಮಕ್ಕಿ ಜಲಾಶಯ !

HOSANAGARA | ಮಳೆ(ಲೆ)ನಾಡಿನ ತವರೂರು ಹೊಸನಗರ ತಾಲೂಕಿನಾದ್ಯಂತ ಪುನರ್ವಸು ಮಳೆ (Rain) ಮುಂದುವರೆದಿದ್ದು ಸೋಮವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಶಿವಮೊಗ್ಗ (Shivamogga) ಜಿಲ್ಲೆಯ ಹೊಸನಗರ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ಅತ್ಯಧಿಕ 148 ಮಿ.ಮೀ. ಮಳೆ ದಾಖಲಾಗಿದೆ.

WhatsApp Group Join Now
Telegram Group Join Now
Instagram Group Join Now

ಕಾಣೆಯಾಗಿದ್ದ ಯುವತಿ ಕೊಳೆತ ಸ್ಥಿತಿಯಲ್ಲಿ ಶವವಾಗಿ ಪತ್ತೆ !

ಮತ್ತೆಲ್ಲೆಲ್ಲಿ ಎಷ್ಟು ಮಳೆಯಾಗಿದೆ ?

  • ಹುಲಿಕಲ್ : 146.4 mm
  • ಕಾರ್ಗಲ್ (ಸಾಗರ) 138.6 mm
  • ಸಾವೇಹಕ್ಲು : 120 mm
  • ಮಾಣಿ : 81 mm
  • ಯಡೂರು : 80 mm
  • ಚಕ್ರಾನಗರದಲ್ಲಿ : 75 mm
  • ಬಿದನೂರುನಗರ : 64 mm
  • ಹೊಸನಗರ : 56.2 mm
  • ಹುಂಚ : 22.2 mm
  • ಅರಸಾಳು : 20.4 mm

ಶೇ. 26 ಭಾಗ ತುಂಬಿದ ಲಿಂಗನಮಕ್ಕಿ ಜಲಾಶಯ :

ಇಂದು ಬೆಳಗ್ಗೆ 8:00 ಗಂಟೆಗೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ಜಲಾಶಯಕ್ಕೆ 2.7 ಅಡಿ ನೀರು ಸಂಗ್ರಹವಾಗಿದ್ದು1819 ಅಡಿ ಗರಿಷ್ಟ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ 1769.40 ಅಡಿ ತಲುಪಿದ್ದು ಜಲಾಶಯಕ್ಕೆ 41048 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಗೆ ಜಲಾಶಯದ ನೀರಿನ ಮಟ್ಟ 1749.35 ಅಡಿ ದಾಖಲಾಗಿತ್ತು.

HOSANAGARA | ಭಾರಿ ಮಳೆಗೆ ಮನೆ ಗೋಡೆ ಕುಸಿತ !

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!