ಹೊಸನಗರ

ಹೊಸನಗರ: ಪಿಎಸ್‌ಐ ಶಂಕರ್ ಗೌಡ ಪಾಟೀಲ್ ವರ್ಗಾವಣೆ; ಸಂತೋಷ್ ಬಾಗೋಜಿ ನೂತನ ಪಿಎಸ್‌ಐ ಆಗಿ ಅಧಿಕಾರ ಸ್ವೀಕಾರ

ಹೊಸನಗರ ಪೊಲೀಸ್ ಠಾಣೆಯಲ್ಲಿ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು, ಶಂಕರ್ ಗೌಡ ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ. ಅವರ ಸ್ಥಾನಕ್ಕೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಸಂತೋಷ್ ಬಾಗೋಜಿ ನೂತನ ಪಿಎಸ್‌ಐ ಆಗಿ ಅಧಿಕಾರ ಸ್ವೀಕರಿಸಿದ್ದಾರೆ.

ಹೊಸನಗರ: ಶಂಕರ್ ಗೌಡ ಪಾಟೀಲ್ ವರ್ಗಾವಣೆ; ಸಂತೋಷ್ ಬಾಗೋಜಿ ನೂತನ ಪಿಎಸ್‌ಐ ಆಗಿ ಅಧಿಕಾರ ಸ್ವೀಕಾರ – santhosh bagoji psi

ಹೊಸನಗರ: ಹೊಸನಗರ ಪೊಲೀಸ್ ಠಾಣೆಯ ಪಿಎಸ್‌ಐ ಹುದ್ದೆಯಲ್ಲಿ ಬದಲಾವಣೆಯಾಗಿದ್ದು, ಕಳೆದ ಎರಡು ವರ್ಷಗಳಿಂದ ಕರ್ತವ್ಯ ನಿರ್ವಹಿಸುತ್ತಿದ್ದ ಪಿಎಸ್‌ಐ ಶಂಕರ್ ಗೌಡ ಪಾಟೀಲ್ ಅವರನ್ನು ವರ್ಗಾವಣೆ ಮಾಡಲಾಗಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಪೂರ್ವ ವಲಯ ಪೊಲೀಸ್ ಮಹಾನಿರೀಕ್ಷಕ ಬಿ.ಆರ್. ರವಿಕಾಂತೇ ಗೌಡ ಅವರು ಈ ಸಂಬಂಧ ಆದೇಶ ಹೊರಡಿಸಿದ್ದಾರೆ. ತಕ್ಷಣದಿಂದ ಜಾರಿಗೆ ಬರುವಂತೆ ಶಂಕರ್ ಗೌಡ ಪಾಟೀಲ್ ಅವರ ವರ್ಗಾವಣೆ ನಡೆದಿದ್ದು, ಅವರ ಸ್ಥಾನಕ್ಕೆ ನೂತನ ಪಿಎಸ್‌ಐ ಆಗಿ ಸಂತೋಷ್ ಬಾಗೋಜಿ ಅಧಿಕಾರ ಸ್ವೀಕರಿಸಿದ್ದಾರೆ.

ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಸುಮಾರು ಎರಡು ವರ್ಷಗಳ ಕಾಲ ಸೇವೆ ಸಲ್ಲಿಸಿದ್ದ ಶಂಕರ್ ಗೌಡ ಪಾಟೀಲ್ ಅವರು ಜನಸ್ನೇಹಿ ಪೊಲೀಸ್ ಅಧಿಕಾರಿಯಾಗಿ ಗುರುತಿಸಿಕೊಂಡಿದ್ದರು. ಸಾರ್ವಜನಿಕರೊಂದಿಗೆ ಉತ್ತಮ ಬಾಂಧವ್ಯ ಹೊಂದಿದ್ದ ಅವರು, ಜನರ ಸಮಸ್ಯೆಗಳಿಗೆ ಸ್ಪಂದಿಸುವುದು ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವಲ್ಲಿ ಗಮನಾರ್ಹ ಸೇವೆ ಸಲ್ಲಿಸಿದ್ದರು ಎಂದು ಸ್ಥಳೀಯರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಇದೀಗ ಹೊಸನಗರ ಪೊಲೀಸ್ ಠಾಣೆಯ ನೂತನ ಸಬ್ ಇನ್ಸ್‌ಪೆಕ್ಟರ್ ಆಗಿ ಸಂತೋಷ್ ಬಾಗೋಜಿ ಅಧಿಕಾರ ವಹಿಸಿಕೊಂಡಿದ್ದಾರೆ. ಅವರು ಈ ಹಿಂದೆ ಕಾರ್ಗಲ್ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮೂಲತಃ ಬೆಳಗಾವಿ ಜಿಲ್ಲೆಯವರಾದ ಸಂತೋಷ್ ಬಾಗೋಜಿ ಅವರು ಪೊಲೀಸ್ ಇಲಾಖೆಯಲ್ಲಿ ಹಲವು ಠಾಣೆಗಳಲ್ಲಿ ಸೇವೆ ಸಲ್ಲಿಸಿದ ಅನುಭವ ಹೊಂದಿದ್ದಾರೆ. ಜಗಳೂರು, ಕುಮಾರಪಟ್ಟಣ, ಸಾಗರ ಹಾಗೂ ಶಿವಮೊಗ್ಗ ನಗರದ ಕೋಟೆ ಪೊಲೀಸ್ ಠಾಣೆಗಳಲ್ಲಿ ಕರ್ತವ್ಯ ನಿರ್ವಹಿಸಿರುವ ಅವರು, ಇದೀಗ ಹೊಸನಗರ ಪೊಲೀಸ್ ಠಾಣೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ.

ಹೊಸ ಪಿಎಸ್‌ಐ ನೇಮಕದಿಂದ ಹೊಸನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪೊಲೀಸ್ ಆಡಳಿತಕ್ಕೆ ಮತ್ತಷ್ಟು ಚುರುಕು ಬರಲಿದೆ ಎಂಬ ನಿರೀಕ್ಷೆ ವ್ಯಕ್ತವಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Koushik G K

MalnadTimes.com ವೆಬ್‌ಸೈಟ್‌ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 3 2019 ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ. Malnad Times ಮೂಲಕ  ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ.ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.Contact No -7022818650