ಹೊಸನಗರ

ಹೊಸನಗರ ; ವೈದ್ಯರ ನಿರ್ಲಕ್ಷ್ಯಕ್ಕೆ ಒಂದೂವರೆ ತಿಂಗಳ ಗರ್ಭಿಣಿ ಬಲಿ !

ಹೊಸನಗರ ; ರಾಜ್ಯದಲ್ಲಿ ಗರ್ಭಿಣಿಯರ ಸಾವಿನ ಪ್ರಕರಣಗಳು ಹೆಚ್ಚಾಗುತ್ತಿವೆ. ಸಿಜರಿಯನ್ ಬಳಿಕ ಕೆಲ ದಿನಗಳಲ್ಲೇ ಗರ್ಭಿಣಿಯರು ಸಾವನ್ನಪ್ಪಿರುವುದು ಆತಂಕಕ್ಕೆ ಕಾರಣವಾಗಿದೆ. ಆದರೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಮಹಿಳೆ ಮಗುವಿಗೆ ಜನ್ಮ ನೀಡುವ ಮೊದಲೇ ಮೃತಪಟ್ಟಿದ್ದಾರೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಒಂದೂವರೆ ವರ್ಷದ ಹಿಂದೆ ವಿವಾಹವಾಗಿದ್ದ ಒಂದೂವರೆ ತಿಂಗಳ ಗರ್ಭಿಣಿ ಅಶ್ವಿನಿ (28) ಸಾಗರದ ಸರ್ಕಾರಿ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಸಿಗದೆ ಮೃತಪಟ್ಟಿದ್ದಾರೆ. ಇದರಿಂದ ಸಾಗರ ಸರ್ಕಾರಿ ಆಸ್ಪತ್ರೆ ವೈದ್ಯರ ವಿರುದ್ಧ ಕುಟುಂಬಸ್ಥರು ಆಕ್ರೋಶಗೊಂಡಿದ್ದಾರೆ.

ಅಶ್ವಿನಿ ತೀರ್ಥಹಳ್ಳಿ ತಾಲೂಕಿನ ತವರುಮನೆ ಹೊಸನಗರ ತಾಲೂಕಿನ ನಗರ ಸಮೀಪದ ದುಬಾರತಟ್ಟಿ ಗ್ರಾಮದ ಕೃಷಿಕ ಪ್ರಕಾಶ್ ಎಂಬುವರೊಂದಿಗೆ ವಿವಾಹವಾಗಿದ್ದರು. ಒಂದೂವರೆ ತಿಂಗಳ ಗರ್ಭಿಣಿಯಾಗಿದ್ದ ಅಶ್ವಿನಿ ಆರೋಗ್ಯದಲ್ಲಿ ಏರುಪೇರು ಹಿನ್ನೆಲೆಯಲ್ಲಿ ನಿನ್ನೆ ಸಾಗರದ ತಾಲೂಕು ಆಸ್ಪತ್ರೆಗೆ ಹೋಗಿದ್ದಳು. ಈ ವೇಳೆ ಅಸ್ವಸ್ಥಗೊಂಡ ಅಶ್ವಿನಿಗೆ ವೈದ್ಯರು ಗರ್ಭಪಾತ ಮಾಡಿಸಿದ್ದಾರೆ. ಬಳಿಕವೂ ಆರೋಗ್ಯದಲ್ಲಿ ಚೇತರಿಕೆ ಕಾಣಲಿಲ್ಲ. ಈ ಹಿನ್ನಲೆಯಲ್ಲಿ ಗಂಭೀರ ಸ್ಥಿತಿಯಲ್ಲಿದ್ದ ಅಶ್ವಿನಿಯನ್ನು ಶಿವಮೊಗ್ಗ ಆಸ್ಪತ್ರೆಗೆ ಕರೆದುಕೊಂಡು ಹೋಗಲು ಸಾಗರ ಸರ್ಕಾರಿ ವೈದ್ಯರ ಸೂಚಿಸಿದ್ದಾರೆ. ಅದರಂತೆ ಕುಟುಂಬಸ್ಥರು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಕೆಲವೇ ಕ್ಷಣದಲ್ಲಿ ಅಶ್ವಿನಿ ಕೊನೆಯುಸಿರೆಳೆದಿದ್ದಾಳೆ.

ಸಾಗರದಿಂದ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲು ಸಮಯ ವ್ಯರ್ಥವಾಗಿದೆ. ಆರೋಗ್ಯವಾಗಿದ್ದ 28 ವಯಸ್ಸಿನ ಒಂದೂವರೆ ತಿಂಗಳ ಗರ್ಭಿಣಿ ಸಾವಿಗೆ ಸಾಗರ ವೈದ್ಯರ ನಿರ್ಲಕ್ಷ್ಯವೇ ಕಾರಣವೆಂದು ಮೃತಳ ಕುಟುಂಬಸ್ಥರು ಆಕ್ರೋಶ ಹೊರಹಾಕಿದ್ದಾರೆ.

ಮಗು ಸರಿಯಾಗಿ ಬೆಳೆದಿರಲಿಲ್ಲ. ಈ ಹಿನ್ನಲೆಯಲ್ಲಿ ಆಶ್ವಿನಿಗೆ ವೈದ್ಯರು ಗರ್ಭಪಾತ ಮಾಡಿದ್ದಾರಂತೆ. ಗರ್ಭಪಾತ ಮಾಡಿದ ಬಳಿಕ ನಿರಂತರವಾಗಿ ಅಶ್ವಿನಿಗೆ ರಕ್ತಸ್ರಾವವಾಗಿದೆ. ಹಂತ ಹಂತವಾಗಿ ಅಶ್ವಿನಿ ಆರೋಗ್ಯವು ಹದಗೆಡುತ್ತಾ ಹೋಗುತ್ತಿತ್ತು. ಇದನ್ನು ಗಮನಿಸಿ ವೈದ್ಯರು ತುರ್ತು ಮತ್ತು ಹೆಚ್ಚಿನ ಚಿಕಿತ್ಸೆ ಅಗತ್ಯವಿದೆ ಎಂದು ಶಿವಮೊಗ್ಗಕ್ಕೆ ಹೋಗಲು ಸೂಚಿಸಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸಾಗರ ಆಸ್ಪತ್ರೆಯಲ್ಲಿ ಸೂಕ್ತ ಚಿಕಿತ್ಸೆ ಕೊಟ್ಟಿದ್ದರೆ ಅಶ್ವಿನಿ ಬದುಕಬಹುದಿತ್ತು. ಆದರೆ ವೈದ್ಯರು ಯಾವುದೇ ರೀಸ್ಕ್ ತೆಗೆದುಕೊಳ್ಳದೇ ಅಶ್ವಿನಿಯನ್ನು ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ರವಾನಿಸಿದ್ದಾರೆ. ದಾರಿಯೂದ್ದಕ್ಕೂ ವಿಲ ವಿಲ ಒದ್ದಾಡಿದ್ದ ಅಶ್ವಿನಿ ಶಿವಮೊಗ್ಗ ಖಾಸಗಿ ಆಸ್ಪತ್ರೆಗೆ ದಾಖಲು ಮಾಡುತ್ತಿದ್ದಂತೆ ಪ್ರಾಣ ಹೋಗಿದೆ ಎಂದು ಕುಟುಂಬಸ್ಥರು ಅಳಲು ತೋಡಿಕೊಂಡಿದ್ದಾರೆ.

ಅಶ್ವಿನಿ ಅವರು ಕುವೆಂಪು ವಿಶ್ವವಿದ್ಯಾಲಯದಲ್ಲಿ ಎಂಸಿಎ ವಿದ್ಯಾಭ್ಯಾಸ ಮುಗಿಸಿ ಚಿನ್ನದ ಪದಕ ಪಡೆದಿದ್ದ ಪ್ರತಿಭಾವಂತೆಯಾಗಿದ್ದು, ಹೊಸನಗರದ ಅಮೃತಾನಂದ ಮಯಿ ಶಾಲೆಯಲ್ಲಿ ಶಿಕ್ಷಕಿಯಾಗಿ ಕೆಲಸ ಮಾಡುತ್ತಿದ್ದರು.

ಇನ್ನು ನೂರಾರು ಕನಸುಗಳೊಂದಿಗೆ ಜೊತೆಗೆ ಒಂದೂವರೆ ವರ್ಷದ ಹಿಂದಷ್ಟೇ ಹೊಸನಗರದ ಅರಳಿ ಪ್ರಕಾಶ್ ಎಂಬುವರ ಜೊತೆಗೆ ಮದುವೆಯಾಗಿದ್ದ ಅಶ್ವಿನಿ ಇದೀಗ ದುರಂತ ಅಂತ್ಯ ಕಂಡಿದ್ದಾಳೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>