ಹೊಸನಗರ ; ಅಕ್ರಮವಾಗಿ ಶ್ರೀಗಂಧದ ಮರಗಳನ್ನು ಕಡಿದಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯ ಸಂಚಾರಿ ದಳದ ಪೊಲೀಸರು ಓರ್ವ ಆರೋಪಿಯನ್ನು ಬಂಧಿಸಿದ್ದು ತಲೆಮರೆಸಿಕೊಂಡ ಮತ್ತೋರ್ವ ಆರೋಪಿಯ ಪತ್ತೆಗೆ ಬಲೆ ಬೀಸಿದ್ದಾರೆ.
ಅರಣ್ಯ ಸಂಚಾರಿ ದಳದ ಪೊಲೀಸರು ನಿಖರ ಮಾಹಿತಿಯನ್ನಾದರಿಸಿ ಈ ಕಾರ್ಯಾಚರಣೆ ನಡೆಸಿದ್ದು 39.300 ಕೆ.ಜಿ. ಶ್ರೀಗಂಧವನ್ನು ವಶಪಡಿಸಿಕೊಳ್ಳಲಾಗಿದೆ.
ಹೊಸನಗರ ತಾಲೂಕಿನ ಚಿಕ್ಕಜೇನಿ ಗ್ರಾಪಂ ವ್ಯಾಪ್ತಿಯ ಹೊಸಳ್ಳಿ ಗ್ರಾಮದ ನೆಲ್ಲಿಸರದ ವಾಸಿ ದಯಾಕುಮಾರ್ @ ದಯಾನಂದ ಬಂಧಿತ ಆರೋಪಿ. ಕೋಡೂರು ಗ್ರಾಪಂ ವ್ಯಾಪ್ತಿಯ ಕಾರಕ್ಕಿ ಗ್ರಾಮದ ಕೌಶಿಕ್ ನಾಪತ್ತೆಯಾಗಿದ್ದು ಈತನ ಪತ್ತೆಗೆ ಶೋಧ ಕಾರ್ಯ ನಡೆಯುತ್ತಿದೆ.

ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಅರಣ್ಯ ಸಂಚಾರಿದಳದ ಪಿಎಸ್ಐ ವಿನಾಯಕ ಕೆ ಮತ್ತು ಸಿಬ್ಬಂದಿ ಹಾಗೂ ಹೊಸನಗರ ವಲಯದ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್, ಉಪ ವಲಯ ಅರಣ್ಯಾಧಿಕಾರಿ ಮಂಜುನಾಥ್, ಗಸ್ತು ಅರಣ್ಯ ಪಾಲಕ ಭರತ್ ಕುಮಾರ್ ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.