Accident

ಹೊಸನಗರ ; ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿ !

ಹೊಸನಗರ ; ಹೊರವಲಯ ರಾಜ್ಯ ಹೆದ್ದಾರಿ 766ಸಿ ಜಯನಗರ ಚಾಮುಂಡಿ ಬೆಟ್ಟದ ತಿರುವಿನಲ್ಲಿ ಇಂದು ಬೆಳಿಗ್ಗೆ 5:15ರ ಸಮಯದಲ್ಲಿ ಬೆಂಗಳೂರಿನಿಂದ ಕುಂದಾಪುರಕ್ಕೆ ತೆರಳುತ್ತಿದ್ದ ಸಾಗರ್ ಹೆಸರಿನ ಖಾಸಗಿ ಬಸ್ ಚಾಲಕರ ನಿಯಂತ್ರಣ ತಪ್ಪಿ ತಿರುವಿನ ಎಡಭಾಗಕ್ಕೆ ಮಗುಚಿ ಬಿದ್ದ ಕಾರಣ ಬಸ್‌ನಲ್ಲಿದ್ದ 11 ಪ್ರಯಾಣಿಕರಿಗೆ ಸಣ್ಣ-ಪುಟ್ಟ ಗಾಯಗಳಾಗಿದ್ದು ಅವರನ್ನು ಹೊಸನಗರ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ತುರ್ತು ಚಿಕಿತ್ಸೆ ನೀಡಲಾಗಿದೆ‌.

WhatsApp Group Join Now
Telegram Group Join Now
Instagram Group Join Now

ವಿಡಿಯೋ ವೀಕ್ಷಿಸಲು ಈ ಲಿಂಕ್ ಕ್ಲಿಕ್ ಮಾಡಿ https://www.facebook.com/share/v/14fuGukQouC/

ಬಸ್‌ನಲ್ಲಿರುವ ಪ್ರಯಾಣಿಕರು ಕೊಲ್ಲೂರು ದೇವಸ್ಥಾನ, ಗೃಹಪ್ರವೇಶ, ಮದುವೆ ಮನೆಗಳಿಗೆ ತೆರಳುತ್ತಿದ್ದು ಈ ಶುಭ ಸಮಾರಂಭಗಳಿಗೆ ತೆರಳುವ ಮುನ್ನ ಆಸ್ಪತ್ರೆ ದರ್ಶನ ಮಾಡುವ ಸಂದರ್ಭ ಒದಗಿ ಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಹೊಸನಗರ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!