ಹೊಸನಗರ: ಇಲ್ಲಿನ ಸರ್ಕಾರಿ ಪದವಿಪೂರ್ವ ಕಾಲೇಜಿನ ಮೇಲ್ಮಹಡಿ ಕಟ್ಟಡಕ್ಕೆ ನಿರ್ಮಾಣ ಮಾಡುತ್ತಿರುವ ಕಡ್ಡಿಣದ ಟ್ರೆಸ್ ಅಳವಡಿಕೆ ಕಾಮಗಾರಿ ಅವೈಜ್ಞಾನಿಕವಾಗಿದ್ದು ಇದರಿಂದ ವಿದ್ಯಾರ್ಥಿಗಳಿಗೆ ಭಾರೀ ಅನಾನುಕೂಲ ಆಗಲಿದೆ ಎಂಬ ಮಾತುಗಳು ಸಾರ್ವಜನಿಕ ವಲಯದಿಂದ ಕೇಳಿಬರುತ್ತಿದೆ.
ಕಾಲೇಜಿನ ಕಟ್ಟಡದ ಎರಡನೇ ಮಹಡಿಗೆ ಅಳವಡಿಸ ಬೇಕಿದ್ದ ಕಬ್ಬಿಣದ ಟ್ರೆಸ್ ಅನ್ನು ಮೊದಲ ಮಹಡಿ ಸಮಾನಂತರವಾಗಿ ಅಳವಡಿಸುತ್ತಿರುವುದು ಅವೈಜ್ಞಾನಿಕವಾಗಿದೆ. ಇದರಿಂದ ಮಳೆಗಾಲದಲ್ಲಿ ಭಾರೀ ಶಬ್ದ ಉಂಟಾಗಿ ವಿದ್ಯಾರ್ಥಿಗಳ ವ್ಯಾಸಂಗಕ್ಕೆ ಅನಾನುಕೂಲವಾಗಲಿದೆ. ಅಲ್ಲದೇ ಮಳೆ ನೀರು ತಡೆಯುವ ಮೂಲ ಉದ್ದೇಶಕ್ಕೆ ಧಕ್ಕೆ ಉಂಟಾಗಲಿದೆ.
ಲಕ್ಷಾಂತರ ಅನುದಾನದಲ್ಲಿ ನಿರ್ಮಿಸುತ್ತಿರುವ ಈ ಕಾಮಗಾರಿಯನ್ನು ತಕ್ಷಣ ತಡೆದು, ಎರಡನೇ ಮೇಲ್ಚಾವಣಿಗೆ ಸ್ಥಳಾಂತರ ಮಾಡುವಂತೆ ಜನತೆ ಕೋರಿದೆ. ಅಧಿಕಾರಿಗಳ ಜಾಣ್ಮ ಹಾಗೂ ಕಾಲೇಜಿನ ಸಿಡಿಸಿ ಕಮಿಟಿ ತಾಳ್ಮೆಗೆ ಹಿಡಿದ ಕೈಗನ್ನಡಿಯಾಗಿದೆ ಈ ಕಾಮಗಾರಿ ಎಂಬ ಮಾತು ಸಾರ್ವಜನಿಕರದ್ದಾಗಿದೆ.
ಅವರು MalnadTimes.com ವೆಬ್ಸೈಟ್ನ ಸ್ಥಾಪಕ ಮತ್ತು ನಿರ್ವಾಹಕರಾಗಿದ್ದಾರೆ. ಅಕ್ಟೋಬರ್ 2019ರಲ್ಲಿ ಈ ತಾಣವನ್ನು ಆರಂಭಿಸಿದ ಅವರು, ಮೊದಲಿಗೆ ಐಟಿ ಕ್ಷೇತ್ರದಲ್ಲಿ ಕೆಲಸ ಮಾಡಿದ ಅನುಭವ ಹೊಂದಿದ್ದಾರೆ. ತಮ್ಮ ತಾಂತ್ರಿಕ ಪರಿಣತಿಯನ್ನು ಮತ್ತು ಸ್ಥಳೀಯ ಸುದ್ದಿಗಳ ಪ್ರೀತಿಯನ್ನು ಒಂದಾಗಿಸಿ, ಮಲ್ನಾಡಿನ ಜನತೆಗೆ ನಿಖರವಾದ, ವಿಶ್ವಾಸಾರ್ಹ ಹಾಗೂ ಸಮಗ್ರ ಸುದ್ದಿಗಳನ್ನು ತಲುಪಿಸುವ ನಿಟ್ಟಿನಲ್ಲಿ ಈ ತಾಣವನ್ನು ರೂಪಿಸಿದ್ದಾರೆ.
Malnad Times ಮೂಲಕ ಅವರು ಶಿವಮೊಗ್ಗ ಮತ್ತು ಮಲ್ನಾಡು ಭಾಗದ ಸಮುದಾಯದ ಧ್ವನಿಯಾಗಿ, ಗ್ರಾಮೀಣ ಬದುಕು, ಪರಿಸರ, ಕೃಷಿ, ಶಿಕ್ಷಣ, ಮತ್ತು ಸಾರ್ವಜನಿಕ ವಿಚಾರಗಳನ್ನು ತಲುಪಿಸುವ ಪ್ರಯತ್ನದಲ್ಲಿ ತೊಡಗಿದ್ದಾರೆ. ಅವರು ಈ ತಾಣದ ನಿರ್ವಹಣೆ, ತಾಂತ್ರಿಕ ಹಾಗೂ ಸಂಪಾದಕೀಯ ಕಾರ್ಯಗಳಲ್ಲಿ ನಿತ್ಯ ಭಾಗವಹಿಸುತ್ತಿದ್ದಾರೆ.