ಹೊಸನಗರ

HOSANAGARA RAIN | ಕಳೆದ 24 ಗಂಟೆಗಳಲ್ಲಿ ಹುಲಿಕಲ್ಲಿನಲ್ಲಿ ರಾಜ್ಯದಲ್ಲೇ ಅತ್ಯಧಿಕ ಮಳೆ !

HOSANAGARA | ಲಿಂಗನಮಕ್ಕಿ ಜಲಾಶಯಕ್ಕೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹಾಗೂ ಮಲೆನಾಡಿನ ಹೃದಯ ಭಾಗವಾದ ಹೊಸನಗರ ತಾಲೂಕಿನಾದ್ಯಂತ ಆರಿದ್ರಾ ಮಳೆ ಹರ್ಷದಾಯಕವಾಗಿ ಸುರಿಯುತ್ತಿದ್ದು ಅನ್ನದಾತರ ಮೊಗದಲ್ಲಿ ಮಂದಹಾಸ ಮೂಡಿಸಿದೆ.

WhatsApp Group Join Now
Telegram Group Join Now
Instagram Group Join Now

ರಾಜ್ಯದ ಪ್ರಮುಖ ವಿದ್ಯುತ್ ಉತ್ಪಾದನಾ ಕೇಂದ್ರವಾದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಕಳೆದ ವರ್ಷ ಇದೇ ದಿನಕ್ಕಿಂತ 13 ಅಡಿಗಳಷ್ಟು ಹೆಚ್ಚಿನ ನೀರು ಸಂಗ್ರಹವಾಗಿದ್ದು ಜಲಾಶಯಕ್ಕೆ 2095 ಕ್ಯೂಸೆಕ್ ನೀರು ಹರಿದು ಬರುತ್ತಿದೆ.

ಮಂಗಳವಾರ ಬೆಳಿಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಹುಲಿಕಲ್ಲಿನಲ್ಲಿ ರಾಜ್ಯದಲ್ಲೇ ಅತ್ಯಧಿಕ 138 ಮಿಲಿಮೀಟರ್ ಮಳೆ ದಾಖಲಾಗಿದೆ.

HOSANAGARA RAIN

ಮತ್ತೆಲ್ಲೆಲ್ಲಿ ಎಷ್ಟು ಮಿ.ಮೀ. ಮಳೆಯಾಗಿದೆ ?

  • ಮಾಸ್ತಿಕಟ್ಟೆ : 133
  • ಮಾಣಿ : 114
  • ಯಡೂರು : 108
  • ಹೊಸನಗರ : 68.5
  • ಕಾರ್ಗಲ್ (ಸಾಗರ) 64.5
  • ಹುಂಚ : 39.4
  • ಅರಸಾಳು : 21.6

1753.20 ಅಡಿ ತಲುಪಿದ ಲಿಂಗನಮಕ್ಕಿ ಜಲಾಶಯ :

1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಮಂಗಳವಾರ ಬೆಳಿಗ್ಗೆ 8:00 ಗಂಟೆಗೆ 1753.20 ಅಡಿ ತಲುಪಿದ್ದು ಜಲಾಶಯಕ್ಕೆ 20951 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಗೆ ಜಲಾಶಯ ನೀರಿನ ಮಟ್ಟ 1740.65 ಅಡಿ ದಾಖಲಾಗಿತ್ತು.

Read More

Gruhalakshmi | 11 & 12ನೇ ಕಂತಿನ ಹಣ ಕೂಡಲೇ ಬರಲಿದೆ ನಿಮ್ಮ ಅಕೌಂಟ್ ಚೆಕ್ ಮಾಡಿ

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಗುಡ್ ನ್ಯೂಸ್ ! ಏನದು ?

RIPPONPETE | ಸೊಳ್ಳೆ ಸಂತತಿ ನಾಶಕ್ಕೆ ಫಾಗಿಂಗ್ ಕಾರ್ಯಾಚರಣೆ

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]