HOSANAGARA | ಮಲೆನಾಡಿನ ತವರೂರು ರಾಜ್ಯದ ಪ್ರಮುಖ ಜಲಾಶಯ ಲಿಂಗನಮಕ್ಕಿಗೆ ನೀರುಣಿಸುವ ಪ್ರಧಾನ ಜಲಾನಯನ ಪ್ರದೇಶವಾದ ಹೊಸನಗರ ತಾಲೂಕಿನಾದ್ಯಂತ ಕಳೆದ 24 ಗಂಟೆಗಳಲ್ಲಿ ದಾಖಲೆ ಮಳೆಯಾಗಿದ್ದು ಜಲಾಶಯಕ್ಕೆ ಒಂದೇ ದಿನ ದಾಖಲೆಯ 5 ಅಡಿಗಳಷ್ಟು ನೀರು ಸಂಗ್ರಹವಾಗಿದೆ.
ಶರಾವತಿ ನದಿಯ ಇಕ್ಕೆಲಗಳ ಹಳ್ಳ-ಕೊಳ್ಳಗಳು ಭರ್ತಿಯಾಗಿದ್ದು ಉಪನದಿಗಳು ರಭಸದಿಂದ ಹರಿಯುತ್ತಿದೆ.

ಗುರುವಾರ ಬೆಳಗ್ಗೆ 8:30ಕ್ಕೆ ಅಂತ್ಯಗೊಂಡಂತೆ ಕಳೆದ 24 ಗಂಟೆಗಳಲ್ಲಿ ತಾಲೂಕಿನ ಮಾಸ್ತಿಕಟ್ಟೆಯಲ್ಲಿ ರಾಜ್ಯದಲ್ಲೇ ಅತ್ಯಧಿಕ ದಾಖಲೆಯ 300 ಮಿಲಿ ಮೀಟರ್ ಮಳೆ ಬಿದ್ದಿದೆ.
ಮತ್ತೆಲ್ಲಿಲ್ಲಿ ಎಷ್ಟೆಷ್ಟು ?
- ಮಾಣಿ : 290
- ಬಿದನೂರುನಗರ : 273
- ಹುಲಿಕಲ್ : 267
- ಯಡೂರಿನಲ್ಲಿ : 206
- ಕಾರ್ಗಲ್ (ಸಾಗರ) : 192.8
- ಹುಂಚ : 120.2
- ಹೊಸನಗರ : 91
- ರಿಪ್ಪನ್ಪೇಟೆ : 44.2
- ಅರಸಾಳು : 37.8
ಲಿಂಗನಮಕ್ಕಿ ಒಂದೇ ದಿನ 5 ಅಡಿ ನೀರು !
1819 ಅಡಿ ಗರಿಷ್ಠ ಮಟ್ಟದ ಲಿಂಗನಮಕ್ಕಿ ಜಲಾಶಯದ ನೀರಿನ ಮಟ್ಟ ಗುರುವಾರ ಬೆಳಗ್ಗೆ ಎಂಟು ಗಂಟೆಗೆ 1760.10 ಅಡಿ ತಲುಪಿದ್ದು, ಜಲಾಶಯಕ್ಕೆ 60238 ಕ್ಯೂಸೆಕ್ ನೀರು ಹರಿದು ಬರುತ್ತಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಜಲಾಶಯದ ನೀರಿನ ಮಟ್ಟ 1741.70 ಅಡಿ ದಾಖಲಾಗಿತ್ತು.
Read More

ಅವರು MalnadTimes.com ನ ಸಂಪಾದಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಪತ್ರಿಕೋದ್ಯಮದ ಮೇಲಿನ ನಿಷ್ಠೆ ಮತ್ತು ಸಾಮಾಜಿಕ ಜವಾಬ್ದಾರಿಯೊಂದಿಗೆ, ಅವರು ಮಲ್ನಾಡು ಪ್ರದೇಶದ ಜನಜೀವನ, ಪರಿಸರ, ಕೃಷಿ, ಶಿಕ್ಷಣ ಮತ್ತು ಅಭಿವೃದ್ಧಿ ಸಂಬಂಧಿತ ವಿಷಯಗಳನ್ನು ಪ್ರಾಮಾಣಿಕವಾಗಿ ಹಾಗೂ ನಿರಂತರವಾಗಿ ಹಂಚಿಕೊಂಡು ಬರುತ್ತಿದ್ದಾರೆ. ನಿಖರತೆ, ನೈತಿಕತೆ ಮತ್ತು ಸಾರ್ವಜನಿಕ ಹಿತಚಿಂತನೆಯಾದರೂ ಅವರ ಸಂಪಾದಕೀಯ ನಿಲುವುಗಳ ಹತ್ತಿರ ಇರುತ್ತದೆ. Malnad Times ನ್ನು ವಿಶ್ವಾಸಾರ್ಹ ಸುದ್ದಿಮೂಲವಾಗಿಸಲು ಅವರು ನಿರಂತರ ಶ್ರಮಿಸುತ್ತಿದ್ದಾರೆ.