Hosanagara

ಹೊಸನಗರ ಶಾಸಕರ ಮಾದರಿ ಶಾಲೆಯ ವಿದ್ಯಾರ್ಥಿನಿಯರು ವಿಭಾಗ ಮಟ್ಟಕ್ಕೆ ಆಯ್ಕೆ

HOSANAGARA ; ಇಲ್ಲಿನ ಶಾಸಕರ ಮಾದರಿ ಸರ್ಕಾರಿ ಬಾಲಕಿಯರ ಪ್ರಾಥಮಿಕ ಪಾಠ ಶಾಲೆಯ ವಿದ್ಯಾರ್ಥಿನಿಯರು ವಾಲಿಬಾಲ್ ಪಂದ್ಯಾವಳಿಯಲ್ಲಿ ಜಿಲ್ಲಾ ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ವಿಭಾಗ ಮಟ್ಟದ ಪಂದ್ಯಾವಳಿಯು ಮಧುಗಿರಿಯಲ್ಲಿ ನಡೆಯಲಿದೆ.

WhatsApp Group Join Now
Telegram Group Join Now
Instagram Group Join Now

ಅಭಿನಂದನೆ :

📢 Stay Updated! Join our WhatsApp Channel Now →

ಸರ್ಕಾರಿ ಶಾಸಕರ ಮಾದರಿ ಶಾಲೆಯ ವಿದ್ಯಾರ್ಥಿಗಳು ವಿಭಾಗ ಮಟ್ಟಕ್ಕೆ ಆಯ್ಕೆಯಾಗಿರುವುದು ಸಂತೋಷದಾಯಕ ವಿಷಯವಾಗಿದೆ. ಇವರು ವಿಭಾಗ ಮಟ್ಟದಿಂದ ರಾಜ್ಯ ಮಟ್ಟಕ್ಕೂ ಆಯ್ಕೆಯಾಗಲಿ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಹೆಚ್.ಆರ್. ಕೃಷ್ಣಮೂರ್ತಿ, ಎಸ್‌ಡಿಎಂಸಿ ಅಧ್ಯಕ್ಷ ನೆರಲೆ ರಮೇಶ್, ಹಳೇ ವಿದ್ಯಾರ್ಥಿಗಳ ಸಂಘದ ಅಧ್ಯಕ್ಷೆ ವಾಸಂತಿ ರಾಜೇಂದ್ರ ಕೊತ್ವಾಲ್, ಮುಖ್ಯ ಶಿಕ್ಷಕ ಹರೀಶ್, ದೈಹಿಕ ಶಿಕ್ಷಕ ರಾಜುಶೆಟ್ಟಿ, ಉಪಾಧ್ಯಕ್ಷೆ ರೋಹಿಣಿ ಸ್ವರೂಪ್, ಗೌತಮ್ ಕುಮಾರಸ್ವಾಮಿ, ಪ್ರದೀಪ, ಪ್ರವೀಣ್, ಶೈಲಜಾ, ಲಕ್ಷ್ಮಿ, ಕವಿತ, ಜಯಲಕ್ಷ್ಮಿ, ರಾಘವೇಂದ್ರ, ಪವಿತ್ರಾ, ನೇತ್ರಾ, ಚಂದ್ರಶೇಖರ, ನಾಸೀರ್ ವಿಜಯಗೌಡ ಲತ ನಾಯ್ಕ್ ಈ ಶಾಲೆಯ ಎಲ್ಲ ಶಿಕ್ಷಕ ವೃಂದ ಹಾಗೂ ಎಸ್‌ಡಿಎಂಸಿ ಸದಸ್ಯರು ಹಾರೈಸಿದ್ದಾರೆ.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>