HOSANAGAR ; ಕರ್ನಾಟಕ ರಾಜ್ಯ ರಾಷ್ಟ್ರೀಯ ಜೀವನೋಪಾಯ ಅಭಿಯಾನ ಸಂಜೀವಿನಿ ಯೋಜನೆಯಡಿ ಕೃಷಿ ವಿಜ್ಞಾನ ಕೇಂದ್ರದಲ್ಲಿ ತರಬೇತಿ ಪಡೆದು ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಕೃಷಿ ಸಖಿಯರಾಗಿ ಕಳೆದ ಎರಡ್ಮೂರು ವರ್ಷಗಳಿಂದ ಕನಿಷ್ಠ ಗೌರವಧನದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು ಗ್ರಾಮ ಪಂಚಾಯಿತಿ ಮಟ್ಟದ ಗ್ರಾಮೀಣ ಪ್ರದೇಶದ ಉಗ್ರಮಗಳಿಗೂ ಭೇಟಿ ನೀಡಿ ಆನ್‌ಲೈನ್ ಆಫ್‌ಲೈನ್ ಸೇವೆ ಸಲ್ಲಿಸುತ್ತಿದ್ದು ಸರ್ಕಾರದ ಕಾರ್ಯಕ್ರಮಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಗ್ರಾಮೀಣ ಜನರಿಗೆ ತಲುಪಿಸಲು ಕೃಷಿ ಇಲಾಖೆ ವ್ಯಾಪ್ತಿಗೆ ಕೃಷಿ ಸಖಿಯರನ್ನು ಸೇರ್ಪಡೆಗೊಳಿಸುವ ಮೂಲಕ ಸರ್ಕಾರಿ ಸೌಲಭ್ಯಗಳನ್ನು ಎಲ್ಲ ವರ್ಗದವರಿಗೂ ಒದಗಿಸುವ ನಿಟ್ಟಿನಲ್ಲಿ ಈ ಕೆಳ ಕಾಣಿಸಿದ ನಮ್ಮ ಕನಿಷ್ಠ ಬೇಡಿಕೆಗಳನ್ನು ಕಲ್ಪಿಸಿ ಕೊಡಬೇಕೆಂದು ಹೊಸನಗರ ತಾಲೂಕು ಶರಾವತಿ ಕೃಷಿ ಸಖಿಯರ ಒಕ್ಕೂಟ ಇಂದು ಕೃಷಿ ಸಚಿವರಿಗೆ ಶಾಸಕರು ಅರಣ್ಯ ಮತ್ತು ಕೈಗಾರಿಕೆ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಬೇಳೂರು ಗೋಪಾಲಕೃಷ್ಣರಿಗೆ ಶಾಸಕ ಆರಗ ಜ್ಞಾನೇಂದ್ರರಿಗೆ ಲೋಕಸಭಾ ಸದಸ್ಯ ಬಿ.ವೈ. ರಾಘವೇಂದ್ರ, ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ, ಕೃಷಿ ಇಲಾಖೆಯ ಸಹಾಯಕ ಕೃಷಿ ನಿರ್ದೇಶಕರಿಗೆ, ಹೊಸನಗರ ತಾಲೂಕು ಶರಾವತಿ ಕೃಷಿ ಸಖಿಯರ ಒಕ್ಕೂಟದ ಗೌರವಾಧ್ಯಕ್ಷೆ ಹೆಚ್.ಜೆ ಜಯಲಕ್ಷ್ಮಿ, ಅಧ್ಯಕ್ಷೆ ಕೆ ಸುಪ್ರಿತಾ, ಪ್ರಧಾನ ಕಾರ್ಯದರ್ಶಿ ಎಚ್.ಎಂ ಗಾಯತ್ರಿ ಮತ್ತಿತರ ಪದಾಧಿಕಾರಿಗಳು ಮನವಿ ಸಲ್ಲಿಸಿದರು.
ಕೃಷಿ ಸಖಿಯರನ್ನು ಕೃಷಿ ಇಲಾಖೆಯ ವ್ಯಾಪ್ತಿಗೆ ಸೇರ್ಪಡೆಗೊಳಿಸಬೇಕು ಕೃಷಿ ಸಖಿಯರಿಗೆ ಗುರುತಿನ ಚೀಟಿ ಒದಗಿಸಬೇಕು ಸರ್ಕಾರ ಗೌರವಧನವನ್ನು ನೇರವಾಗಿ ಸಖಿಯರಿಗೆ ತಲುಪಿಸಬೇಕು ಹಾಗೂ ವೇತನವನ್ನು 25 ಸಾವಿರ ರೂ.ಗಳಿಗೆ ನಿಗದಿಗೊಳಿಸಬೇಕು ಸಖಿಯರಿಗೆ ವೇತನ ಸಹಿತ ಹೆರಿಗೆ ರಜೆ ನೀಡಬೇಕು ಪ್ರಯಾಣ ಭತ್ಯೆಯನ್ನು 3000 ರೂ.ಗಳಿಗೆ ಹೆಚ್ಚಿಸಬೇಕು. ಇಎಸ್ಐ ಹಾಗೂ ಪಿಎಫ್ ಸೌಲಭ್ಯ ಒದಗಿಸಬೇಕು ಆನ್‌ಲೈನ್‌ನಲ್ಲಿ ಕರ್ತವ್ಯ ನಿರ್ವಹಿಸಲು ಉತ್ತಮ ಗುಣಮಟ್ಟದ ಸ್ಮಾರ್ಟ್ ಫೋನ್ ಅಥವಾ ಲ್ಯಾಪ್‌ಟಾಪ್ ಒದಗಿಸಬೇಕು ಹಾಗೂ ಸಖಿಯರಿಗೆ ಸೇವಾ ಭದ್ರತೆ ನೀಡಬೇಕು ಸೇರಿದಂತೆ ಹಲವು ಬೇಡಿಕೆಗಳು ಮನವಿ ಪತ್ರದಲ್ಲಿದ್ದವು.