HOSANAGARA ; ಇದೇ ಅಕ್ಟೋಬರ್ 21 ರಿಂದ ನವೆಂಬರ್ 20ರ ವರೆಗೆ ತಾಲೂಕಿನಲ್ಲಿ ಪಶು ವೈದ್ಯ ಇಲಾಖೆ ವತಿಯಿಂದ ಕಾಲುಬಾಯಿ ಜ್ವರ ಲಸಿಕೆ ಅಭಿಯಾನ ಹಮ್ಮಿಕೊಳ್ಳಲಾಗಿದೆ.
ಹಸು, ಎತ್ತು, ಎಮ್ಮೆ, ಹೋರಿ ಮತ್ತು ಹಂದಿಗಳಲ್ಲಿ ಕಾಣಿಸಿಕೊಂಡು ಪಶು ಪಾಲಕರಿಗೆ ಆರ್ಥಿಕ ಸಂಕಷ್ಟ ಉಂಟು ಮಾಡುವ ಮಾರಕ ರೋಗ ಇದಾಗಿದೆ.
ಮೂರು ತಿಂಗಳ ವಯೋಮಿತಿ ಮೇಲ್ಪಟ್ಟ ಎಲ್ಲಾ ಜಾನುವಾರುಗಳಿಗೆ ಲಸಿಕೆಯನ್ನು ಉಚಿತವಾಗಿ ಇಲಾಖೆ ನೀಡಲಿದೆ. ಸೀಳು ಗೊರಸು ಉಳ್ಳ ಪ್ರಾಣಿಗಳಲ್ಲಿ ಬೇಗನೆ ಕಂಡುಬರುವ ಕಾಲುಬಾಯಿ ಜ್ವರಕ್ಕೆ ಲಸಿಕೆಯನ್ನು ಹಾಕಿಸಿಕೊಳ್ಳುವುದು ಅಗತ್ಯವಾಗಿದ್ದು ಇದರಿಂದ, ರೈತರಿಗೆ ಆಗುವ ಆರ್ಥಿಕ ಸಂಕಷ್ಟ ತಡೆಯಲು ಸಾಧ್ಯವಿದೆ.

ರೋಗ ಮುಕ್ತ ರಾಸುಗಳು ಸಹ ಅನೇಕ ತೊಂದರೆಗಳನ್ನು ಎದುರಿಸಬೇಕಿದ್ದು ಗರ್ಭಗಟ್ಟುವಿಕೆಯಲ್ಲಿ ವಿಳಂಬ, ಸಾಮರ್ಥ್ಯ ನಷ್ಟ ಮತ್ತು ಹಾಲಿನ ಇಳುವರಿ ಕಡಿಮೆ ತಡೆಯಲು ತಾಲೂಕಿನ ರೈತ ಬಾಂಧವರು ಕಾಲುಬಾಯಿ ಜ್ವರ ಲಸಿಕೆ ಅಭಿಯಾನದಲ್ಲಿ ಪಾಲ್ಗೊಂಡು ಜಾನುವಾರುಗಳಿಗೆ ಲಸಿಕೆ ಹಾಕಿಸಬೇಕೆಂದು ತಾಲೂಕು ಪಶುಪಾಲನಾ ಪಶುವೈದ್ಯ ಸೇವಾ ಇಲಾಖೆಯ ಆಡಳಿತಾಧಿಕಾರಿ ಪಶುವೈದ್ಯಾಧಿಕಾರಿ ಡಾ.ನಟರಾಜ್ ತಿಳಿಸಿದ್ದಾರೆ.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.