ಗೋಮಾಳ ಅಕ್ರಮ ಭೂ ಒತ್ತುವರಿ ತೆರವಿಗೆ ಗ್ರಾಮಸ್ಥರ ಆಗ್ರಹ

0 6,831


ಹೊಸನಗರ: ತಾಲೂಕಿನ ಹುಂಚ ಹೋಬಳಿ ಮೇಲಿನಬೆಸಿಗೆ ಗ್ರಾಮ ಪಂಚಾಯತಿ ವ್ಯಾಪ್ತಿಯ ವಸವೆ ಗ್ರಾಮದ ಸರ್ವೆ ನಂ 17ರ 38 ಎಕರೆ ಸರ್ಕಾರಿ ಗೋಮಾಳದಲ್ಲಿ, ಶ್ರೀಧರ್ ಬಿನ್ ರಾಜಪ್ಪಗೌಡ ಎಂಬಾತ ಅಕ್ರಮವಾಗಿ ಸುಮಾರು ನಾಲ್ಕೈದು ಎಕರೆಯಷ್ಟು ಭೂ ಒತ್ತುವರಿ ಮಾಡಿ ಕೃಷಿ ಚಟುವಟಿಕೆಯಲ್ಲಿ ನಿರತನಾಗಿದ್ದಾನೆ. ದಿನ ಕಳೆದಂತೆ ಭೂ ಒತ್ತುವರಿ ಮುಂದುವರೆಸಿ ತಾತ್ಕಾಲಿಕ ಗುಡಿಸಲು ನಿರ್ಮಿಸಿದ್ದಾನೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಸಮತಟ್ಟಾದ ಈ ಭೂ ಪ್ರದೇಶವು ಮುಂದೆ ಗ್ರಾಮದ ವಿವಿಧ ಸರ್ಕಾರಿ ಯೋಜನೆಗಳ ಅನುಷ್ಠಾನವು ಸೇರಿದಂತೆ ಶಾಲೆ-ಆರೋಗ್ಯ ಕೇಂದ್ರದ ಕಟ್ಟಡಗಳ ನಿರ್ಮಾಣಕ್ಕೆ ಸೂಕ್ತವಾಗಿದೆ. ಈ ಹಿಂದೆಯು ಒತ್ತುವರಿ ತೆರವಿಗಾಗಿ ತಹಶೀಲ್ದಾರ್ ಕಚೇರಿಗೆ ದೂರು ಸಲ್ಲಿಸಿದ್ದರೂ ಈವರೆಗೂ ಯಾವುದೇ ಕ್ರಮಕ್ಕೆ ಮುಂದಾಗಿಲ್ಲ ಎಂಬ ಆಕ್ರೋಶ ವ್ಯಕ್ತಪಡಿಸಿರುವ ಗ್ರಾಮಸ್ಥರು, ಈ ಕೂಡಲೇ ಅಕ್ರಮ ಭೂ ಒತ್ತುವರಿಯನ್ನು ತೆರವುಗೊಳಿಸುವಂತೆ ಗ್ರಾಮಸ್ಥರಾದ ಗ್ರಾ.ಪಂ. ಸದಸ್ಯ ಧರ್ಮಪ್ಪ, ಗಣೇಶ್, ಚಂದ್ರಶೇಖರ, ಪ್ರಕಾಶ್ ಮೊದಲಾದವರು ತಾಲೂಕು ಆಡಳಿತಕ್ಕೆ ಮನವಿ ಸಲ್ಲಿಸಿದ್ದಾರೆ.

ತಪ್ಪಿದಲ್ಲಿ ಸೂಕ್ತ ನ್ಯಾಯಕ್ಕಾಗಿ ಲೋಕಾಯುಕ್ತರ ಮೊರೆ ಹೋಗುವ ಇಂಗಿತ ವ್ಯಕ್ತಪಡಿಸಿದ್ದಾರೆ.

Leave A Reply

Your email address will not be published.

error: Content is protected !!