Categories: Hosanagara

ವಿದ್ಯಾರ್ಥಿಗಳಿಗೆ ಮಾನವೀಯ ಗುಣಗಳೇ ಶಾಶ್ವತ

ರಿಪ್ಪನ್‌ಪೇಟೆ: ಸುದ್ದಿಗಾಗಿ ಬದುಕುವುದು ಬೇಡ ಶುದ್ದವಾಗಿ ಬದುಕಿರಿ ಎಂದು ಮಳಲಿಮಠದ ಡಾ.ಗುರುನಾಗಭೂಷಣ ಶಿವಾಚಾರ್ಯ ಮಹಾಸ್ವಾಮಿಜಿ ಹೇಳಿದರು.

ರಿಪ್ಪನ್‌ಪೇಟೆಯ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದವರು ಏರ್ಪಡಿಸಲಾದ ಪ್ರತಿಭಾ ಪುರಸ್ಕಾರ ಮತ್ತು ಪ್ರತಿಭಾ ಪ್ರದರ್ಶನ ಕಾರ್ಯಕ್ರಮದ ದಿವ್ಯಸಾನಿಧ್ಯವನ್ನು ವಹಿಸಿ ಆಶೀರ್ವಚನ ನೀಡಿ, ನಿಂದಿಸುವವರಿಗೆಲ್ಲ ಉತ್ತರಿಸುತ್ತ ಕುಳಿತರೆ ನೀವು ಅದೇ ಕೆಲಸ ಮಾಡುತ್ತಿರಬೇಕು. ನಿಂದಕರನ್ನು ಹಿಂದೆ ಬಿಡಿ ನೀವು ಮುಂದೆ ನಡೆಯಿರಿ ಎಂದು ತಿಳಿ ಹೇಳಿದರು.

ಜಗತ್ತಿನ ಯಾವ ವಿಶ್ವವಿದ್ಯಾಲಯ ಕಲಿಸದ ಪಾಠವನ್ನು ಹಸಿವು ಬಡತನ ಸೋಲು ನಮಗೆ ಕಲಿಸುತ್ತದೆ. ಆದ್ದರಿಂದ ತಿಳಿದು ಬದುಕು ಬಡತನ ಸಿರಿತನ ಇವೆರಡು ಶಾಶ್ವತವಲ್ಲ ನಿನ್ನಲ್ಲಿರುವಂತಹ ಮಾನವೀಯ ಗುಣಗಳೇ ಶಾಶ್ವತ. ವಿದ್ಯಾರ್ಥಿ ಜೀವನವು ಅಮೂಲ್ಯವಾದದ್ದು ಹಾಗಾಗಿ ಶುದ್ದವಾದ ವಿದ್ಯೆಯನ್ನು ಗಳಿಸಿ ಗುರು ಹಿರಿಯರಿಗೆ ಮಾತಾಪಿತೃಗಳಿಗೆ ಗೌರವ ಪೂರ್ವವಕ ಜೀವನ ಸಾಗಿಸುವುದೇ ನಿಜವಾದ ಜೀವನ ಎಂದರು.

ತೀರ್ಥಹಳ್ಳಿ ಕ್ಷೇತ್ರದ ಶಾಸಕ ಮಾಜಿ ಸಚಿವ ಆರಗ ಜ್ಞಾನೇಂದ್ರ ರಾಷ್ಟ್ರೀಯ ಮತ್ತು ರಾಜ್ಯಮಟ್ಟದ ಕ್ರೀಡಾ ಮತ್ತು ಪ್ರತಿಭಾ ಕಾರಂಜಿಯಲ್ಲಿ ಭಾಗವಹಿಸಿ ಕ್ರೀಡಾ ಸಾಧನೆ ಮಾಡಿದ ಪ್ರತಿಭಾನ್ವಿತರನ್ನು ಗೌರವಿಸಿ, ವಿದ್ಯಾರ್ಥಿಗಲು ತಮ್ಮ ವಿದ್ಯಾರ್ಥಿ ದೆಸೆಯಲ್ಲಿ ಮಾಡುವ ಸಾಧನೆಗಳು ಎಂದಿಗೂ ಶಾಶ್ವತವಾಗಿ ಉಳಿಯುವುರೊಂದಿಗೆ ಮುಂದೆ ಬರುವ ವಿದ್ಯಾರ್ಥಿಗಳಿಗೆ ಪ್ರೇರಣೆ ನೀಡುವ ಮೂಲಕ ಅವರಲ್ಲಿ ಕ್ರೀಡೆಯೊಂದಿಗೆ ತಮ್ಮಲ್ಲಿರುವ ಪ್ರತಿಭೆಯನ್ನು ಗುರುತಿಸಿಕೊಳ್ಳಲು ಉತ್ತಮ ವೇದಿಕೆಯಾಗಲಿ ಎಂದು ಹೇಳಿ, ತಮ್ಮ ವ್ಯಾಸಂಗದೊಂದಿಗೆ ಸುಸಂಸ್ಕೃತ ಶಿಕ್ಷಣವನ್ನು ಪಡೆದು ಉತ್ತಮರಾಗಿ ಎಂದು ವಿದ್ಯಾರ್ಥಿ ಸಮೂಹಕ್ಕೆ ಕರೆ ನೀಡಿದರು.

ಶಾರದಾ ರಾಮಕೃಷ್ಣ ಶಾಲೆಯ ಸಂಸ್ಥಾಪಕ ಅಧ್ಯಕ್ಷ ದೇವರಾಜ್ ಅಧ್ಯಕ್ಷತೆ ವಹಿಸಿದ್ದ ಸಮಾರಂಭದಲ್ಲಿ ಸಾಮಾಜಿಕ ಕಾರ್ಯಕರ್ತ ಟಿ.ಆರ್.ಕೃಷ್ಣಪ್ಪ, ನರಸಿಂಹ, ಇನ್ನಿತರರು ಹಾಜರಿದ್ದರು.

ಇದೇ ಸಂದರ್ಭದಲ್ಲಿ ಕ್ರೀಡೆ ಮತ್ತು ಪ್ರತಿಭಾ ಕಾರಂಜಿಯಲ್ಲಿ ಸಾಧನೆ ಮಾಡಿರುವ ಮಕ್ಕಳ ಪೋಷಕ ವರ್ಗವನ್ನು ಸನ್ಮಾನಿಸಿ ಗೌರವಿಸಲಾಯಿತು.

ಉತ್ತಮ ಜೀವನ ರೂಪಿಸಿಕೊಳ್ಳಲು ಶಾಲೆಯಲ್ಲಿ ಸಾಕಷ್ಟು ಅವಕಾಶಗಳಿವೆ

ಮಕ್ಕಳು ಶಾಲೆಯಲ್ಲಿ ಉತ್ತಮವಾದ ಜೀವನ ರೂಪಿಸಿಕೊಳ್ಳಲು ಅವಕಾಶವಿರುತ್ತದೆ. ಈ ಸಂದರ್ಭವನ್ನು ಸದುಪಯೋಗಪಡಿಸಿಕೊಂಡು ಜೀವನದಲ್ಲಿ ಪ್ರಗತಿ ಹೊಂದಲು ಪ್ರಯತ್ನ ಮಾಡಬೇಕು ಎಂದು ಕೋಣಂದೂರು ಬೃಹನ್ಮಠದ ಶ್ರೀಪತಿ ಪಂಡಿತರಾಧ್ಯ ಶಿವಾಚಾರ್ಯ ಸ್ವಾಮಿಜಿ ಹೇಳಿದರು.

ರಿಪ್ಪನ್‌ಪೇಟೆಯ ಶ್ರೀ ಶಾರದ ರಾಮಕೃಷ್ಣ ವಿದ್ಯಾಲಯದ 2023-24 ನೇ ಸಾಲಿನ ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮ ಮತ್ತು ಶ್ರೀಮಾತೆ ಶಾರದಾದೇವಿ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಆಶಿರ್ವಚನ ನೀಡಿ, ಪ್ರತಿಯೊಬ್ಬ ವಿದ್ಯಾರ್ಥಿಯು ಒಳ್ಳೆಯ ಗುಣಬೆಳೆಸಿಕೊಂಡು ಉತ್ತಮವಾದ ಸಾಧನೆ ಮಾಡುವ ಮೂಲಕ ಊರಿನ ರಾಜ್ಯದ ದೇಶದ ಭವಿಷ್ಯವನ್ನು ಉಜ್ವಲಗೊಳಿಸುವ ಜವಾಬ್ದಾರಿ ಹೊತ್ತುಕೊಳ್ಳಬೇಕು. ಮಕ್ಕಳು ಈ ದೇಶದ ಭವಿಷ್ಯ ಅವರು ಸರಿಯಾದ ಪಥದಲ್ಲಿ ನಡೆದಿದ್ದೇ ಆದಲ್ಲಿ ನಮ್ಮ ದೇಶ ಸುಂದರ ಹಾಗೂ ಸದೃಢವಾಗಲು ಸಾಧ್ಯವೆಂದರು.

ಸಾಗರ ರಾಮಕೃಷ್ಣ ಆಶ್ರಮದ ಶ್ರೀಗಳು ಸಾನಿಧ್ಯ ವಹಿಸಿ ಅಶೀರ್ವಚನ ನೀಡಿ, ಮಕ್ಕಳಲ್ಲಿರುವ ಪ್ರತಿಭೆಯನ್ನು ಗುರುತಿಸುವ ಮೂಲಕ ಅವರ ಆಸಕ್ತಿಗೆ ಅನುಗುಣವಾಗಿ ಪ್ರೋತ್ಸಾಹಿಸುವ ಕಾರ್ಯ ಶಿಕ್ಷಕರದಾಗಬೇಕು ಎಂದರು. ಶಾರದಾ ರಾಮಕೃಷ್ಣ ವಿದ್ಯಾಲಯದ ವಿದ್ಯಾರ್ಥಿಗಳು ರಾಷ್ಟ್ರೀಯ ಮಟ್ಟದ ಕ್ರೀಡಾಕೂಟದಲ್ಲಿ ಭಾಗವಹಿಸುವ ಮೂಲಕ ಶಾಲೆಯ ಕೀರ್ತಿಯನ್ನು ಉತ್ತುಂಗಕ್ಕೇರಿಸಿದ್ದಾರೆ ಅಲ್ಲದೆ ಈ ಶಾಲೆಯಲ್ಲಿ ವ್ಯಾಸಂಗ ಮಾಡುವ ಮೂಲಕ ಇಂದು ಉನ್ನತ ಶಿಕ್ಷಣದ ಎಂ.ಬಿ.ಬಿ.ಎಸ್. ಹಾಗೂ ಇಂಜಿನಿಯರಿಂಗ್ ಇನ್ನಿತರ ಶಿಕ್ಷಣ ಕ್ಷೇತ್ರದ ಆದ್ವಿತೀಯ ಸಾಧನೆಗೈದಿರುವ ವಿದ್ಯಾರ್ಥಿಗಳ ಸಾಧನೆಗೆ ಶ್ರೀಗಳು ಪ್ರಶಂಸೆ ವ್ಯಕ್ತಪಡಿಸಿದರು.

ಶಾರದಾ ರಾಮಕೃಷ್ಣ ಶಾಲೆಯ ಸಂಸ್ಥಾಪಕ ಅಧ್ಯಕ್ಷ ದೇವರಾಜ್ ಆಧ್ಯಕ್ಷತೆ ವಹಿಸಿದ್ದರು. ಶಾರದಾ ರಾಮಕೃಷ್ಣ ಶಾಲೆಯ ಮುಖ್ಯೋಪಾಧ್ಯಾಯರಾದ ಸರಿತಾ ದೇವರಾಜ್ ಮತ್ತು ರವಿ ಇನ್ನಿತರರು ಪಾಲ್ಗೊಂಡಿದ್ದರು.

Malnad Times

Share
Published by
Malnad Times

Recent Posts

Rain Alert | ಮುಂದಿನ 5 ದಿನಗಳ ಕಾಲ ರಾಜ್ಯದಲ್ಲಿ ಭಾರಿ ಮಳೆ ಸಾಧ್ಯತೆ

ಬೆಂಗಳೂರು : ಬಂಗಾಳ ಕೊಲ್ಲಿಯಲ್ಲಿ ಸುಳಿಗಾಳಿ ಸೃಷ್ಟಿಯಾಗಿರುವ ಕಾರಣ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ 5 ದಿನಗಳ ಕಾಲ ಬಿರುಗಾಳಿ…

6 days ago

Shivamogga Loksabha Constituency | ಮತದಾನಕ್ಕೆ ಸಕಲ ಸಿದ್ಧತೆ, ಮತಗಟ್ಟೆ ತಲುಪಿದ ಮತಯಂತ್ರಗಳು

ಶಿವಮೊಗ್ಗ : ಮಂಗಳವಾರ ನಡೆಯುವ ಲೋಕಸಭಾ ಚುನಾವಣೆಗೆ ಸಕಲ ಸಿದ್ದತೆಗಳು ನಡೆದಿದ್ದು, ಮತಗಟ್ಟೆ ಅಧಿಕಾರಿ, ಸಿಬ್ಬಂದಿಗಳು ಇಂದು ಮತಗಟ್ಟೆಗಳಿಗೆ ಅಗತ್ಯವಾದ…

7 days ago

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು !

ವಿದ್ಯುತ್ ಕಂಬಕ್ಕೆ ಬೈಕ್ ಡಿಕ್ಕಿ, ಇಬ್ಬರು ಯುವಕರು ಸ್ಥಳದಲ್ಲೇ ಸಾವು ! ಎನ್.ಆರ್.ಪುರ : ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

7 days ago

ಮತದಾನಕ್ಕೆ ಕೌಂಟ್‌ಡೌನ್ | ಮತಗಟ್ಟೆಗಳಿಗೆ ಮತಯಂತ್ರ ಇತರ ಪರಿಕರಗಳೊಂದಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

ಶಿವಮೊಗ್ಗ :ನಾಳೆ ನಡೆಯಲಿರುವ ಲೋಕಸಭೆ ಚುನಾವಣೆ ಮತದಾನಕ್ಕೆ ಸಕಲ ಸಿದ್ಧತೆ ಪೂರ್ಣಗೊಂಡಿದ್ದು, ಇಂದು ನಿಗದಿಪಡಿಸಲಾದ ಮತಗಟ್ಟೆಗಳಿಗೆ ಅಧಿಕಾರಿಗಳು, ಸಿಬ್ಬಂದಿಗಳು ಮತಯಂತ್ರ…

7 days ago

Arecanut Today Price | ಮೇ 5ರ ಅಡಿಕೆ ರೇಟ್

ತೀರ್ಥಹಳ್ಳಿ: ಮೇ 5 ಭಾನುವಾರ ನಡೆದ ತೀರ್ಥಹಳ್ಳಿ ಮಾರುಕಟ್ಟೆಯ ಅಡಿಕೆ (Arecanut) ವಹಿವಾಟು ವಿವರ ಇಲ್ಲಿದೆ.

1 week ago

ಕಾಂಗ್ರೆಸ್ ಮೀಸಲಾತಿ ಜಾರಿಗೊಳಿಸಿದ್ದರಿಂದ ಕೆಳ ವರ್ಗದವರಿಗೂ ಸರ್ಕಾರಿ ಉದ್ಯೋಗ ಲಭಿಸಿದೆ ; ಬೇಳೂರು ಗೋಪಾಲಕೃಷ್ಣ

ಹೊಸನಗರ : ಕಾಂಗ್ರೆಸ್ ಪಕ್ಷದೇಶದ ಪ್ರಗತಿಯಾಗಿ ಹಲವು ಯೋಜನೆಗಳನ್ನು ಜಾರಿಗೊಳಿಸಿದೆ. ಮೀಸಲಾತಿ ಜಾರಿಗೊಳಿಸಿದ ಪರಿಣಾಮ ಇಂದು ಕೆಳಜಾತಿಯವರು ಸರ್ಕಾರಿ ಉದ್ಯೋಗ…

1 week ago