ಹೊಸನಗರ

ಎರಡು ಪ್ರತ್ಯೇಕ ಪ್ರಕರಣ ; ಹಾಡಹಗಲೇ ಮನೆ ಬೀಗ ಮುರಿದು ನಗ-ನಾಣ್ಯ ದೋಚಿ ಪರಾರಿ

RIPPONPETE ; ಇಲ್ಲಿನ ಪೊಲೀಸ್‌ ಠಾಣಾ ವ್ಯಾಪ್ತಿಯ ತಳಲೆ ಸಮೀಪದ ಕಗ್ಗಲಿ ಗ್ರಾಮದ ಅಶೋಕ ಎನ್.ಎಂಬುವರ ಮನೆಯ ಬೀಗ ಮುರಿದು ಬೀರುವಿನಲ್ಲಿದ್ದ 24 ಗ್ರಾಂ ಚಿನ್ನಾಭರರಣ, 15 ಸಾವಿರ ನಗದು, 85 ಗ್ರಾಂ ಬೆಳ್ಳಿಯನ್ನು ಹಾಡಹಗಲೇ ಕಳವು ಮಾಡಿಕೊಂಡು ಪರಾರಿಯಾದಯಾಗಿರುವ ಘಟನೆ ನಡೆದಿದೆ‌‌.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಗದ್ದೆ ಕೆಲಸಕ್ಕಾಗಿ ತೆರಳಿದ ಆಶೋಕನ ಪತ್ನಿ ಮಧ್ಯಾಹ್ನ ಊಟಕ್ಕಾಗಿ ಮನೆಗೆ ಬಂದು ನೋಡಿದಾಗ ಬಾಗಿಲ ಬೀಗ ಒಡೆದಿರುವುದು ಕಂಡು ಮನೆಯಲ್ಲಿ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಇದೇ ರೀತಿಯಲ್ಲಿ ಅದೇ ದಿನವೇ ಅರಸಾಳು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ತಂಗಳವಾಡಿ ಗ್ರಾಮದ ಶ್ರೀನಾಥ್ ಎಂಬುವರ ಮನೆ ಬೀಗ ಮುರಿದು ಹಗಲು ವೇಳೆ ಕಳ್ಳತನ ಮಾಡಿಕೊಂಡು ಪರಾರಿಯಾದ ಘಟನೆ ನಡೆದಿದ್ದು ಸಾರ್ವಜನಿಕರಲ್ಲಿ ಆತಂಕಕ್ಕೆ ಕಾರಣವಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ರಿಪ್ಪನ್‌ಪೇಟೆ ಠಾಣಾ ವ್ಯಾಪ್ತಿಯಲ್ಲಿ ಹಾಡಹಗಲೇ ಎರಡು ಕಡೆಯಲ್ಲಿ ಈ ರೀತಿ ಬೀಗ ಮುರಿದು ಸರಣಿ ಕಳ್ಳತನವಾಗಿರುವುದು ಇಲ್ಲಿನ ನಿವಾಸಿಗಳನ್ನು ಭಯಭೀತರನ್ನಾಗಿಸಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>