ಹೊಸನಗರ

ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಮತ್ತೊಬ್ಬ ಯುವಕ ಹೃದಯಾಘಾತಕ್ಕೆ ಬಲಿ !

ಹೊಸನಗರ ; ಕೊಡಚಾದ್ರಿ ಪ್ರವಾಸಕ್ಕೆ ಬಂದಿದ್ದ ಬೆಂಗಳೂರಿನ ಯುವಕನೊಬ್ಬ ಹೃದಯಾಘಾತದಿಂದ ಮೃತಪಟ್ಟ ಘಟನೆ ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಕೊಡಚಾದ್ರಿ ಸಮೀಪದ ಕಟ್ಟಿನಹೊಳೆಯಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೃತರನ್ನು ಬೆಂಗಳೂರಿನ ಶ್ರೀಕಾಂತ್ (28) ಎಂದು ಗುರುತಿಸಲಾಗಿದೆ. ಶ್ರೀಕಾಂತ್ ಅವರು ಸ್ನೇಹಿತರೊಂದಿಗೆ ಶುಕ್ರವಾರ ಕೊಡಚಾದ್ರಿ ಪ್ರವಾಸಕ್ಕೆ ಆಗಮಿಸಿ, ಸಂಪೇಕಟ್ಟೆ ಸಮೀಪದ ಕಟ್ಟಿನಹೊಳೆಯಲ್ಲಿರುವ ಸ್ನೇಹಿತರ ಮನೆಯಲ್ಲಿ ತಂಗಿದ್ದರು. ಶನಿವಾರ ಮುಂಜಾನೆ ಕೊಡಚಾದ್ರಿ ಶಿಖರ ವೀಕ್ಷಣೆಗೆ ತೆರಳಲು ಯೋಜನೆ ರೂಪಿಸಿದ್ದರು ಎನ್ನಲಾಗಿದೆ.

ಆದರೆ ರಾತ್ರಿ ವೇಳೆ ಅವರಿಗೆ ತೀವ್ರ ಅಸ್ವಸ್ಥತೆ ಉಂಟಾಗಿ ತಂಗಿದ್ದ ಮನೆಯಲ್ಲೇ ಕುಸಿದು ಬಿದ್ದಿದ್ದಾರೆ. ಕೂಡಲೇ ಅವರನ್ನು ಹೊಸನಗರ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ, ಹೃದಯಾಘಾತದಿಂದ ಮೃತಪಟ್ಟಿರುವುದಾಗಿ ವೈದ್ಯರು ಖಚಿತಪಡಿಸಿದ್ದಾರೆ ಎಂದು ತಿಳಿದುಬಂದಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಮೃತದೇಹವನ್ನು ಹೊಸನಗರ ಸರ್ಕಾರಿ ಆಸ್ಪತ್ರೆಯ ಶವಾಗಾರದಲ್ಲಿ ಇರಿಸಲಾಗಿದ್ದು, ಕುಟುಂಬಸ್ಥರು ಆಗಮಿಸಿದ ಬಳಿಕ ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಹಿಂದೆ ನಿರ್ಮಾಪಕ ಭಾ.ಮ. ಹರೀಶ್ ಅವರ ಮಗ ಕೊಡಚಾದ್ರಿ ಗಿರಿ ಪ್ರವಾಸಕ್ಕೆ ಬಂದು ಹೃದಯಾಘಾತದಿಂದ ನಿಧನ ಹೊಂದಿದ್ದರು. ಪ್ರವಾಸದ ಸಂದರ್ಭದಲ್ಲಿ ಸಂಭವಿಸಿರುವ ಇದು ಎರಡನೇ ಘಟನೆಯಾಗಿದೆ.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]