ರಿಪ್ಪನ್‌ಪೇಟೆ ; ಕೆಂಚನಾಲ ಗ್ರಾಪಂ ವ್ಯಾಪ್ತಿಯ ಆಲವಳ್ಳಿ, ಕೊರಗಿ ಗ್ರಾಮಗಳಲ್ಲಿ ಕಳೆದೊಂದು ವಾರದಿಂದ ಕಾಡಾನೆಗಳು ಬಾಳೆ, ಅಡಿಕೆ ಫಸಲು ಸಂಪೂರ್ಣ ಧ್ವಂಸಗೊಳಿಸಿ ರೈತ ಸಮೂಹವನ್ನು ದಿಕ್ಕು ತೋಚದವರಂತೆ ಮಾಡಿವೆ ಎಂದು ಮಾಜಿ ಶಾಸಕ ಹರತಾಳು ಹಾಲಪ್ಪ ಹೇಳಿದರು.

ಆಲವಳ್ಳಿ-ಕೊರಗಿ ಗ್ರಾಮದಲ್ಲಿನ ರೈತರ ಅಡಿಕೆ ತೋಟಕ್ಕೆ ಕಾಡಾನೆ ದಾಳಿ ನಡೆಸಿ ಧ್ವಂಸ ಮಾಡಲಾದ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ರೈತರಿಗೆ ಸಾಂತ್ವನ ಹೇಳಿ, ತಕ್ಷಣ ಸರ್ಕಾರ ಅರಣ್ಯ ಇಲಾಖೆ ಈ ವ್ಯಾಪ್ತಿಯಲ್ಲಿರುವ ಆನೆಗಳನ್ನು ಸ್ಥಳಾಂತರ ಮಾಡುವ ಮೂಲಕ ರೈತರ ರಕ್ಷಣೆಗೆ ಮುಂದಾಗಬೇಕು ಎಂದು ಆಗ್ರಹಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪಂಚಾಯ್ತಿ ಮಾಜಿ ಸದಸ್ಯ ಎ.ಟಿ.ನಾಗರತ್ನ, ತಾಲ್ಲೂಕು ಪಂಚಾಯ್ತಿ ಮಾಜಿ ಅಧ್ಯಕ್ಷ ವೀರೇಶ್ ಆಲವಳ್ಳಿ, ಬಿಜೆಪಿ ಮಹಾಶಕ್ತಿಕೇಂದ್ರದ ಅಧ್ಯಕ್ಷ ಎನ್.ಸತೀಶ್, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯೆ ಸರಸ್ವತಿ
ದೇವೇಂದ್ರಪ್ಪಗೌಡ, ನಾಗಾರ್ಜುನಸ್ವಾಮಿ, ಇನ್ನಿತರರು, ಗ್ರಾಮಸ್ಥರು ಹಾಜರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.