ಹೊಸನಗರ ; ತಾಲ್ಲೂಕಿನ ಹುಂಚ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹುಂಚ ಹಾಗೂ ನಾಗರಹಳ್ಳಿಗೆ ಸರ್ಕಾರದ ಕನ್ನಡ ಮಾಧ್ಯಮ ಶಾಲೆಯನ್ನು ಶಿಕ್ಷಣ ಸಚಿವ ಮಧು ಬಂಗಾರಪ್ಪ ಆಂಗ್ಲ ಮಾಧ್ಯಮ ಶಾಲೆಯಾಗಿ ಪರಿವರ್ತಿಸಿದ್ದು ಅಲ್ಲಿನ ಕಾಂಗ್ರೆಸ್ ಮುಖಂಡರು ಹಾಗೂ ಎಸ್.ಡಿಎಂ.ಸಿ ಸದಸ್ಯರು ಹಾಗೂ ಗ್ರಾಮಸ್ಥರು ಮಧು ಬಂಗಾರಪ್ಪನವರಿಗೆ ಅಭಿನಂದಿಸಿದ್ದಾರೆ.
ಗ್ರಾಮೀಣ ಪ್ರದೇಶದ ಸರ್ಕಾರಿ ಶಾಲೆಗಳಿಗೆ ಬಹು ದಿನಗಳ ಬೇಡಿಕೆಯಾಗಿದ್ದ ಆಂಗ್ಲ ಮಾಧ್ಯಮವನ್ನು ಮಾಡಬೇಕೆಂದು ಹುಂಚ ಭಾಗದ ಕಾಂಗ್ರೆಸ್ ಮುಖಂಡರುಗಳು ಶಿಕ್ಷಣ ಸಚಿವರಾದ ಮಧು ಬಂಗಾರಪ್ಪರಿಗೆ ಈ ಹಿಂದೆ ಮನವಿ ಮಾಡಿದ್ದು ಮನವಿಗೆ ಸ್ವಂದಿಸಿದ ಮಧುಬಂಗಾರಪ್ಪನವರು ಹುಂಚ ಗ್ರಾಮ ಪಂಚಾಯತಿ ವ್ಯಾಪ್ತಿಯ ನಾಗರಹಳ್ಳಿ ಮತ್ತು ಹುಂಚ ಶಾಲೆಗಳಿಗೆ ಆಂಗ್ಲ ಮಾಧ್ಯಮ ತರಗತಿಗಳನ್ನು ಆರಂಭಿಸಲು ಅನುಮತಿ ನೀಡಿದ್ದಾರೆ ಅದಕ್ಕೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಮತ್ತು ಎಸ್‌ಡಿಎಂಸಿ ಸದಸ್ಯರು ಹಾಗೂ ಗ್ರಾಮಸ್ಥರು ಶಾಲೆಯ ಆವರಣದಲ್ಲಿ ಸಭೆ ನಡೆಸಿ ಸಚಿವರಿಗೆ ಅಭಿನಂದಿಸಿ ಶಾಲೆಯ ಮಕ್ಕಳಿಗೆ ಸಿಹಿ ಹಂಚುವ ಮೂಲಕ ಅಭಿನಂದಿಸಿದರು.
ಈ ಸಂದರ್ಭದಲ್ಲಿ ಹುಂಚ ಹೋಬಳಿ ಕಾಂಗ್ರೆಸ್ ಅಧ್ಯಕ್ಷ ಹಾಗೂ ಕೆ.ಡಿ.ಪಿ ಸದಸ್ಯ ಗುರುರಾಜ್ ಸುಣಕಲ್ಲು, ಗ್ರಾಮ ಪಂಚಾಯತಿ ಸದಸ್ಯ ರಾಘವೇಂದ್ರ, ತೋಟದಕಟ್ಟು ಸರೋಜ, ನಾಗತಿಹಳ್ಳಿ ಯಶಸ್ವತಿ ಜೈನ್, ಕಾಂಗ್ರೆಸ್ ಮುಖಂಡರಾದ ಕೇಶವಮೂರ್ತಿ, ದಿನೇಶ್ ಎನ್.ಸಿ ಸತೀಶ್ ಭಟ್, ಗುರು ಭಂಡಾರಿ, ನಾಗರಾಜ್ ರೆಡ್ಡಿ, ಪ್ರವೀಣ್ ಜ್ಯೋತಿ ಶಾಲೆಯ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಸದಸ್ಯರುಗಳು ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್ಸೈಟ್ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 7 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್ಸೈಟ್ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ ‘ಮಲ್ನಾಡ್ ಟೈಮ್ಸ್’ ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.