Ripponpete

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ವಾರ್ಷಿಕ ಮಹಾಸಭೆ ಯಶಸ್ವಿ

ರಿಪ್ಪನ್‌ಪೇಟೆ : ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ 2023-24 ಮತ್ತು 2024-25 ನೇ ಸಾಲಿನ ವಾರ್ಷಿಕ ಸರ್ವ ಸದಸ್ಯರ ಮಹಾಸಭೆಯು ಯಶಸ್ವಿಯಾಗಿ ನೆರವೇರಿತು.

WhatsApp Group Join Now
Telegram Group Join Now
Instagram Group Join Now

ಹುಂಚ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ರಾಘವೇಂದ್ರ ತೋಟದಕಟ್ಟು ಸಭೆಯ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿ, ಸಹಕಾರ ಸಂಘದಲ್ಲಿ ಈ ಹಿಂದಿನ ಅವಧಿಯಲ್ಲಿ ನಡೆದಿರುವ ನಷ್ಟದ ಕುರಿತು ಸಂಘದ ಸದಸ್ಯರ ಸಮ್ಮುಖದಲ್ಲಿ ಸಾಕಷ್ಟು ಚರ್ಚೆಗಳು ನಡೆದು ಇನ್ನೂ ಮುಂದೆ ಸಂಘದ ಪ್ರಗತಿಯೊಂದಿಗೆ ಲಾಭ ಗಳಿಕೆಯತ್ತ ತರಲು ಸಂಘದ ಸದಸ್ಯರು ಸಹಕರಿಸುವಂತೆ ಮತ್ತು ರೈತರು ಸಂಘದಲ್ಲಿ ಪಡೆಯಲಾದ ಬೆಳೆ ಸಾಲ ಹಾಗೂ ಮಧ್ಯಮಾವಧಿ ಸಾಲವನ್ನು ಸಕಾಲದಲ್ಲಿ ಮರುಪಾವತಿಸಿ ಸಂಘದ ಬೆಳವಣಿಗೆಗೆ ಕೈಜೋಡಿಸುವಂತಾಗಬೇಕು ಎಂದರು.

ಈ ಸಭೆಯಲ್ಲಿ ಕೃಷಿ ಪತ್ತಿನ ಸಹಕಾರ ಸಂಘದ ಆಡಳಿತ ಮಂಡಳಿಯ ನಿರ್ದೇಶಕರು ಹಾಗೂ ಷೇರುದಾರರು ಹಾಜರಿದ್ದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಿವಕುಮಾರ್ ಎಸ್ ಮತ್ತು ಸಿಬ್ಬಂದಿವರ್ಗ ಪಾಲ್ಗೊಂಡಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]

error: Content is protected !!