ರಿಪ್ಪನ್‌ಪೇಟೆ ; ಕೋಡೂರು ಗ್ರಾಮ ಪಂಚಾಯಿತ್ ವ್ಯಾಪ್ತಿಯ ಕುಸುಗುಂಡಿ ಗ್ರಾಮದಲ್ಲಿ ಬುಧವಾರ ವಿದ್ಯುತ್ ಶಾರ್ಟ್‌ಸರ್ಕ್ಯೂಟ್ ನಿಂದಾಗಿ 8 ವರ್ಷದ ಸುಮಾರು 300 ಕ್ಕೂ ಅಧಿಕ ಅಡಿಕೆ ಗಿಡಗಳು ಸಂಪೂರ್ಣ ಸುಟ್ಟು ಭಸ್ಮವಾಗಿವೆ.
ವಿಡಿಯೋ ವೀಕ್ಷಿಸಲು ಈ ಲಿಂಕ್ ಮೇಲೆ ಕ್ಲಿಕ್ ಮಾಡಿ https://www.facebook.com/share/v/181niikoES/
ರೈತ ಚಂದ್ರಶೇಖರ ಅವರ ಸ.ನಂ. 26 ರ ಅಡಿಕೆ ತೋಟದ ಸಮೀಪ ಹಾದು ಹೋಗಿರುವ ವಿದ್ಯುತ್ ಲೈನ್ ತುಂಡಾಗಿ ಬಿದ್ದ ಪರಿಣಾಮ ಈ ಅವಘಡ ಸಂಭವಿಸಿದೆ. ಈ ದುರಂತದಲ್ಲಿ ಸುಮಾರು 8 ವರ್ಷದ ಅಡಿಕೆ ಗಿಡಗಳು ಸುಟ್ಟು ಭಸ್ಮವಾಗಿವೆ. ವಿದ್ಯುತ್ ಕಂಬ ಹಾಗೂ ಲೈನ್ ಅಪಾಯದ ಸ್ಥಿತಿಯಲ್ಲಿದ್ದು ಅಕ್ಕಪಕ್ಕದಲ್ಲಿ ಒಣಗಿದ ಮರಗಳ ಸಹಿತ ಲೈನ್ ಮೇಲೆ ಬೀಳುವ ಸ್ಥಿತಿಯಲ್ಲಿರುವ ಬಗ್ಗೆ ಮೆಸ್ಕಾಂ ಅಧಿಕಾರಿಗಳ ಗಮನಕ್ಕೆ ಈ ಹಿಂದೆ ತರಲಾದರೂ ಯಾವುದೇ ಪ್ರಯೋಜನವಾಗಿಲ್ಲ ಇಲಾಖೆಯ ನಿರ್ಲಕ್ಷ್ಯದಿಂದಾಗಿ ವಿದ್ಯುತ್ ಅವಘಡ ಸಂಭವಿಸಲು ಕಾರಣ ಎನ್ನಲಾಗಿದೆ.
ಸ್ಥಳಕ್ಕೆ ಭೇಟಿ ;
ಘಟನೆ ಸಂಭವಿಸಿದ ಸ್ಥಳಕ್ಕೆ ಹೊಸನಗರ ತಾಲ್ಲೂಕು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಚಂದ್ರಮೌಳಿ ಹಾಗೂ ಇನ್ನಿತರರು ಭೇಟಿ ನೀಡಿ ತುರ್ತು ಪರಿಹಾರ ಕೊಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ದೂರವಾಣಿ ಮೂಲಕ ಒತ್ತಾಯಿಸಿದ್ದಾರೆ.

