Accident

ಅಪಘಾತದಲ್ಲಿ ಸಾವನ್ನಪ್ಪಿದ ಪತಿ, ಮನನೊಂದು ನೇಣಿಗೆ ಶರಣಾದ ಪತ್ನಿ ; ಹೊಸ ವರ್ಷದ ದಿನವೇ ಹೊಸನಗರದಲೊಂದು ಹೃದಯ ವಿದ್ರಾವಕ ಘಟನೆ

HOSANAGARA ; ಅಪಘಾತದಲ್ಲಿ ಪತಿ ಮೃತಪಟ್ಟ ಸುದ್ದಿ ಕೇಳಿ ಮನನೊಂದು ಪತ್ನಿಯೂ ನೇಣಿಗೆ ಶರಣಾದ ಹೃದಯ ವಿದ್ರಾವಕ ಘಟನೆ ಹೊಸ ವರ್ಷದ ದಿನವಾದ ಇಂದು ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಸುತ್ತಾ ಗ್ರಾಮದಲ್ಲಿ ನಡೆದಿದೆ.

WhatsApp Group Join Now
Telegram Group Join Now
Instagram Group Join Now

ಮೇಲಿನಬೆಸಿಗೆ ಗ್ರಾಮ ಪಂಚಾಯತಿಯ ಸುತ್ತಾ ಗ್ರಾಮದ ಶಿಳ್ಳೆಕ್ಯಾತರ ಕ್ಯಾಂಪಿನ ಮಂಜುನಾಥ (25) ಡಿ. 31ರ ಸಂಜೆ ಬೈಕಿಲ್ಲಿ ಶಿಕಾರಿಪುರಕ್ಕೆ ಹೋಗಿದ್ದು ಶಿಕಾರಿಪುರದ ಬಳಿ ಬೈಕ್ ಅಪಘಾತವಾಗಿದ್ದು ಆಸ್ಪತ್ರೆಗೆ ದಾಖಲಾಗಿದ್ದರು. ಇಂದು ಬೆಳಿಗ್ಗೆ 9:30ರ ವೇಳೆಗೆ ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಮಂಜುನಾಥ ಮೃತಪಟ್ಟಿದ್ದು ಸುದ್ದಿ ತಿಳಿದ ಆತನ ಪತ್ನಿ ಅಮೃತ (21) ಮನೆಯ ಶೆಡ್ಡಿನ ಜಂತಿಗೆ ತನ್ನ ವೇಲಿನಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ.

ಮೂಲತಃ ಮೈಸೂರು ವಾಸಿಯಾಗಿದ್ದ ಅಮೃತರನ್ನು ಕಳೆದ 03 ವರ್ಷದ ಹಿಂದೆ ಮಂಜುನಾಥ ಪ್ರೀತಿಸಿ ಕೊಲ್ಲೂರಿನಲ್ಲಿ ವಿವಾಹವಾಗಿದ್ದರು.

ಸುದ್ದಿ ತಿಳಿದಾಕ್ಷಣ ಹೊಸನಗರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಗೊಂಡಿದ್ದಾರೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!