SHIVAMOGGA ; ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಪತ್ನಿಯನ್ನೇ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ಶಿವಮೊಗ್ಗದ ವಾದಿ ಎ ಹುದಾ ಎರಡನೇ ಮುಖ್ಯ ರಸ್ತೆ 5ನೇ ಕ್ರಾಸ್ ಮನೆಯಲ್ಲಿ ನಡೆದಿದೆ.
ರುಕ್ಸಾನಾ (38) ಕೊಲೆಯಾದ ಮಹಿಳೆ. ಪತಿ ಯೂಸುಫ್ ಪತ್ನಿ ಕೊಲೆ ಮಾಡಿದ ಆರೋಪಿಯಾಗಿದ್ದಾನೆ. 12 ವರ್ಷಗಳ ಹಿಂದೆ ಮದುವೆಯಾಗಿದ್ದು, ದಂಪತಿಗೆ ಮೂವರು ಮಕ್ಕಳಿದ್ದಾರೆ. ಎಸಿ ಮೆಕಾನಿಕ್ ಆಗಿರುವ ಯೂಸುಫ್ ಕೌಟುಂಬಿಕ ಕಾರಣಕ್ಕೆ ಪತ್ನಿಯೊಂದಿಗೆ ಜಗಳವಾಡಿದ್ದು, ಜಗಳದ ವೇಳೆ ಚಾಕುವಿನಿಂದ ಇರಿದು ಕೊಲೆ ಮಾಡಿದ್ದಾನೆ.
ಆರೋಪಿ ಯೂಸುಫ್ ನನ್ನು ಬಂಧಿಸಿದ
ತುಂಗಾನಗರ ಠಾಣೆ ಪೋಲೀಸರು, ಘಟನಾ ಸ್ಥಳ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಜರುಗಿಸಿದ್ದಾರೆ.
Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

