Hosanagara

ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಠಿಸಲು ನಾನು ಬದ್ದ ; ಶಾಸಕ ಗೋಪಾಲಕೃಷ್ಣ ಬೇಳೂರು ಇಂಗಿತ

ಹೊಸನಗರ ; ಮಕ್ಕಳ ಶೈಕ್ಷಣಿಕ ಪ್ರಗತಿಗೆ ಪೂರಕ ವಾತಾವರಣ ಸೃಷ್ಟಿಸುವ ಜವಾಬ್ದಾರಿ ಪೋಷಕರ ಮೇಲಿದೆ. ಈ ನಿಟ್ಟಿನಲ್ಲಿ  ಸರಕಾರಿ ಶಾಲೆಗಳ ಅಭಿವೃದ್ಧಿಗೆ ಸಂಪೂರ್ಣ ಸಹಕಾರ ನೀಡಲು ಶಾಸಕನಾಗಿ ಸದಾ ಬದ್ದನಿದ್ದೇನೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದರು.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಇಲ್ಲಿನ ನೆಹರು ಕ್ರೀಡಾಂಗಣದಲ್ಲಿ ಶಿಕ್ಷಣ ಇಲಾಖೆ, ಪಟ್ಟಣ ಪಂಚಾಯತಿ ಹಾಗೂ ಶಾಸಕರ ಸರ್ಕಾರಿ ಮಾದರಿ ಹಿರಿಯ ಪ್ರಾಥಮಿಕ ಹೆಣ್ಣುಮಕ್ಕಳ ಶಾಲೆಯ ಸಂಯುಕ್ತ ಆಶ್ರಯದಲ್ಲಿ 114ನೇ ಶಾಲಾ ವಾರ್ಷಿಕೋತ್ಸವದ ಪ್ರಯುಕ್ತ  ಹಮ್ಮಿಕೊಂಡಿದ್ದ ಚಿಣ್ಣರ‌ ಸಾಂಸ್ಕೃತಿಕ ಸಮ್ಮಿಲನ ಕಾರ್ಯಕ್ರಮ ಉದ್ಘಾಟಿಸಿ ‌ಅವರು ಮಾತನಾಡಿದರು. 

ಈ ಶಾಲೆಯೂ ಜಿಲ್ಲೆಯಲ್ಲೇ ಎರಡನೇ ಅತಿ ಹೆಚ್ಚು  ವಿದ್ಯಾರ್ಥಿಗಳು ವ್ಯಾಸಂಗ ನಿರತ ಸರ್ಕಾರಿ ಶಾಲೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ನುರಿತ ಶಿಕ್ಷಕರ ಭೋದನೆಯ ಸಹಕಾರದಿಂದ ಶಿಕ್ಷಣದ ಜೊತೆಯಲ್ಲಿ ಬೋಧಕೇತರ ಚಟುವಟಿಕೆಗಳಲ್ಲೂ ಪ್ರಗತಿ ಕಂಡಿದೆ. ಶಾಸಕನಾಗಿ ಶಾಲೆಯ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಈಗಾಗಲೇ ರೂ. 24 ಲಕ್ಷ ಅನುದಾನ ಮಂಜೂರು ಮಾಡಿದ್ದೇನೆ. ಶೌಚಾಲಯ, ಸುಸಜ್ಜಿತ ವೇದಿಕೆ, ಶಾಲಾ ಕೊಠಡಿಗಳಿಗೆ ಸುಣ್ಣ-ಬಣ್ಣದ ಕಾರ್ಯ ಪ್ರಗತಿಯಲ್ಲಿದೆ. ಮುಂಬರುವ ದಿನಗಳಲ್ಲಿ ಪಟ್ಟಣದಲ್ಲಿ ಸುಸಜ್ಜಿತ ಕೆ ಪಿ ಎಸ್ ಶಾಲೆಯೊಂದನ್ನು ಆರಂಭಿಸುವ ಇಂಗಿತವನ್ನು ಶಾಸಕ ಬೇಳೂರು ವ್ಯಕ್ತಪಡಿಸಿದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
ಲೇಖನವನ್ನು ಮುಂದುವರಿಸಿ ಓದಿ

ಎಸ್ ಡಿಎಂಸಿ ಮಾಜಿ ಅಧ್ಯಕ್ಷ, ಪಟ್ಟಣ ಪಂಚಾಯತಿ ಸದಸ್ಯ ಕೆ.ಕೆ.ಅಶ್ವಿನಿ ಕುಮಾರ್ ಮಾತನಾಡಿ, ಶಾಸಕ ಗೋಪಾಲಕೃಷ್ಣ ಅವರ ನಿರಂತರ ಸಹಕಾರವೇ ಶಾಲೆಯ ಸಮಗ್ರ ಅಭಿವೃದ್ಧಿ ಕಾರಣವಾಗಿದ್ದು, ಕಳೆದ 11 ವರ್ಷಗಳ  ತಮ್ಮ ಅಧ್ಯಕ್ಷ ಅವಧಿಯಲ್ಲಿ ಮಕ್ಕಳ ಪ್ರಗತಿ ಪೂರಕ ವಾತಾವರಣ ಸೃಷ್ಠಿಸಲು ಪ್ರಾಮಾಣಿಕ ಪ್ರಯತ್ನ ಮಾಡಿದ್ದು, ಶಾಲಾಭಿವೃದ್ದಿ ಕುರಿತು ತಮ್ಮ ಕನಸು ಸಕಾರಗೊಳ್ಳಲು ಸಹಕರಿಸಿದ ದಾನಿಗಳಿಗೆ ಅವರು ಕೃತಜ್ಞತೆ ಸಲ್ಲಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಎಸ್ಡಿಎಂಸಿ ಅಧ್ಯಕ್ಷ ನೇರ್ಲೆ ರಮೇಶ್ ಮಾತನಾಡಿ, ಶಾಲಾ ಹಲವು ಚಟುವಟಿಕೆಗಳ ಅನುಷ್ಠಾನದಲ್ಲಿ ರಾಜಕೀಯ ಸಲ್ಲದು. ಶಾಲೆ ಯಾರೋಬ್ಬರ ಸೊತ್ತಲ್ಲ. ಶಾಲೆಗೆ ನೀಡಿದ ಸಹಕಾರದಿಂದ ವ್ಯಕ್ತಿಯನ್ನು ಗುರುತಿಸಬೇಕು ವಿನಃ ವ್ಯಕ್ತಿಯಿಂದ ಶಾಲೆಯನ್ನು ಸಮಾಜದಲ್ಲಿ ಗುರುತಿಸುವ ಪರಿಪಾಠಕ್ಕೆ ಇತಿಶ್ರೀ ಹಾಡಬೇಕಿದೆ ಎಂಬ ಅಭಿಪ್ರಾಯ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಮಕ್ಕಳ ಹಸ್ತ ಪ್ರತಿ ಪುಸ್ತಕವನ್ನು ಶಾಸಕ ಗೋಪಾಲಕೃಷ್ಣ ಬಿಡುಗಡೆಗೊಳಿಸಿದರು.

ವೇದಿಕೆಯಲ್ಲಿ ಪಟ್ಟಣ ಪಂಚಾಯತಿ ಅಧ್ಯಕ್ಷ ನಾಗಪ್ಪ, ಉಪಾಧ್ಯಕ್ಷೆ ಚಂದ್ರಕಲಾ, ಸದಸ್ಯರಾದ ಕೃಷ್ಣವೇಣಿ, ಗುಲಾಬಿ, ಶಾಹೀನ, ಗುರುರಾಜ್ ಬಜಾಜ್, ನಾಮ ನಿರ್ದೇಶನ ಸದಸ್ಯರಾದ ಕೆ.ಎಸ್.ಗುರುರಾಜ್, ನೇತ್ರಾವತಿ ಭಟ್, ಹೆಚ್.ಎಂ.ನಿತ್ಯಾನಂದ, ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ವಾಸಂತಿ ಕೊತ್ವಲ್, ವಿದ್ಯಾರ್ಥಿ ಪ್ರತಿನಿಧಿ ಚಿಂತನ್,  ಬಿಇಒ ಕೃಷ್ಣಮೂರ್ತಿ, ಶಾಲಾಭಿವೃದ್ದಿ ಸಮಿತಿಯ ಹಲವು ಸದಸ್ಯರು ಉಪಸ್ಥಿತರಿದ್ದರು.

ಹಿರಿಯ ವೈದ್ಯ ಡಾ. ರಾಮಚಂದ್ರ, ಅರ್ಚಕ ರಾಘವೇಂದ್ರ, ನಾಟಿ ವೈದ್ಯೆ ಮುಮ್ತಾಜ್, ಯೂತ್ ಫಾರ್ ಸೇವಾ ಕು. ಆಶ್ರಿತ್, ಪ್ರತಿಭಾವಂತ ಹಳೇ ವಿದ್ಯಾರ್ಥಿ ಎಂ.ಆರ್. ಪ್ರಣತಾ ಸೇರಿದಂತೆ ಹಲವು ಸಾಧಕರನ್ನು ಆತ್ಮೀಯವಾಗಿ ಇದೇ ವೇಳೆ ಸಮಿತಿ ಸನ್ಮಾನಿಸಿತು.

ಮಕ್ಕಳಿಂದ ವಿವಿಧ ಸಾಂಸ್ಕೃತಿಕ ಮನೋರಂಜನಾ ಕಾರ್ಯಕ್ರಮಗಳು ಜರುಗಿತು. ಶಿಕ್ಷಕಿ ಲತಾ ನಾಯಕ್ ಸ್ವಾಗತಿಸಿ,

ಮುಖ್ಯ ಶಿಕ್ಷಕ ಎಂ.ಎನ್.ಹರೀಶ್  ಪ್ರಾಸ್ತಾವಿಕ ಮಾತನಾಡಿದರು. ಶಿಕ್ಷಕಿ ಗಾಯತ್ರಿ ಪಟಗಾರ್, ತಾರಾ ಪಟಗಾರ್ ನಿರೂಪಿಸಿದರು.ಶಿಕ್ಷಕ ರಾಮಾ ನಾಯಕ್ ವಂದಿಸಿದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>