ತೀರ್ಥಹಳ್ಳಿ: ಗೂಡ್ಸ್ ಆಟೋದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಿಸುತ್ತಿದ್ದ ಮೂವರನ್ನು ತೀರ್ಥಹಳ್ಳಿ ಪೊಲೀಸರು ವಾಹನ ಸಮೇತ ವಶಕ್ಕೆ ಪಡೆದಿದ್ದಾರೆ. ಗುಡ್ಡೆಕೊಪ್ಪ ಬಳಿ ಬುಧವಾರ ಈ ಘಟನೆ ನಡೆದಿದೆ.
ಗುಡ್ಡೆಕೊಪ್ಪದಿಂದ ಗೋವುಗಳನ್ನು ತುಂಬಿಕೊಂಡು ಮಾಳೂರು ವ್ಯಾಪ್ತಿಯ ಬಿಸಿಲುಮನೆ ಕಡೆಗೆ ಸಾಗಿಸಲಾಗುತ್ತಿತ್ತು. ಈ ವೇಳೆ ಅನುಮಾನಗೊಂಡ ಸ್ಥಳೀಯ ಗ್ರಾಮಸ್ಥರು ವಾಹನವನ್ನು ತಡೆದು ನಿಲ್ಲಿಸಿ, ತಕ್ಷಣ ಪೊಲೀಸರಿಗೆ ಮಾಹಿತಿ ನೀಡಿದ್ದಾರೆ.
ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಶೀಲನೆ ನಡೆಸಿದಾಗ ಅಕ್ರಮ ಸಾಗಾಟ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಗೂಡ್ಸ್ ಆಟೋವನ್ನು ಜಪ್ತಿ ಮಾಡಿರುವ ಪೊಲೀಸರು, ಆರೋಪಿಗಳ ವಿರುದ್ಧ ತೀರ್ಥಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.
Malnad Times App ಡೌನ್ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.

