ರಿಪ್ಪನ್‌ಪೇಟೆ : ಕೆಂಚನಾಲ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಟಾಟಾ ಏಸ್ ವಾಹನದಲ್ಲಿ ಅಕ್ರಮವಾಗಿ ಗೋವು ಕಳ್ಳ ಸಾಗಾಣಿಕೆ ಮಾಡಿ ಕಸಾಯಿಖಾನೆಗೆ ಸಾಗಿಸುತ್ತಿದ್ದ ಎರಡು ಗೋವುಗಳನ್ನು ರಕ್ಷಣೆ ಮಾಡಿ, ಆರೋಪಿಯನ್ನು ಬಂಧಿಸಿದ ಘಟನೆ ಗುರುವಾರ ನಡೆದಿದೆ.
ಪಿಎಸ್‌ಐ ರಾಜು ರೆಡ್ಡಿ ಹಾಗೂ ಅವರ ತಂಡ ಖಚಿತ ಮಾಹಿತಿ ಆಧರಿಸಿ KA 15 7997 ಸಂಖ್ಯೆಯ ಟಾಟಾ ಏಸ್ ವಾಹನ ಪರಿಶೀಲನೆ ನಡೆಸಿದಾಗ ಹಿಂಸಾತ್ಮಕವಾಗಿ ಎರಡು ಗೋವುಗಳನ್ನು ಅಕ್ರಮವಾಗಿ ಕಸಾಯಿಖಾನೆಗೆ ಸಾಗಿಸುತ್ತಿದ್ದನ್ನು ಪತ್ತೆ ಹಚ್ಚಿದ್ದಾರೆ.
ಈ ಕುರಿತು ವಾಹನ ಚಾಲಕ ಕೆಂಚನಾಲ ಗ್ರಾಮದ ಜಿಯಾವುಲ್ಲಾ (45) ಎಂಬಾತನನ್ನು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ.

