RIPPONPETE ; ಸಿರಿಗೆರೆ ವನ್ಯಜೀವಿ ವಲಯ ವ್ಯಾಪ್ತಿಯ ಹಾರೋಹಿತ್ತಲು ಗ್ರಾಮದ ಸರ್ವೇ ನಂ 7 ರಲ್ಲಿ ವನ್ಯಜೀವಿ ಅಭಯಾರಣ್ಯ ಪ್ರದೇಶದ ಮತ್ತಲಿಜಡ್ಡು ಬಳಿ ಸಂಪರ್ಕ ರಸ್ತೆ ನಿರ್ಮಾಣದ ನೆಪದಲ್ಲಿ ಅಕ್ರಮವಾಗಿ ಲಕ್ಷಾಂತರ ರೂ. ಮೌಲ್ಯದ ಸಾಗುವಾನಿ ಮರಗಳನ್ನು ಕಡಿಯಲಾಗಿದ್ದು ಆರೋಪಿಗಳ ವಿರುದ್ದ ಸಿರಿಗೆರೆ ವಲಯ ಅರಣ್ಯಾಧಿಕಾರಿಗಳು ದೂರು ದಾಖಲಿಸಿರುವ ಪ್ರಕರಣ ವರದಿಯಾಗಿದೆ.
ಅಡ್ಡೇರಿಯಿಂದ ಮತ್ತಲಿಜಡ್ಡು ಗ್ರಾಮಕ್ಕೆ ಸಂಪರ್ಕಿಸುವ ಮಾರ್ಗದಲ್ಲಿದ್ದ ಸುಮಾರು 17 ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿಯಲಾಗಿದ್ದು ಈ ಸಂಬಂಧ ನಾಲ್ವರ ವಿರುದ್ದ ಕೇಸ್ ದಾಖಲಿಸಿರುವುದಾಗಿ ಆರ್.ಎಫ್.ಓ ಅರವಿಂದ್ ತಿಳಿಸಿದ್ದಾರೆ.