ದಿನಸಿ ಅಂಗಡಿಗಳಲ್ಲಿ ಅಕ್ರಮ ಮದ್ಯ ಮಾರಾಟ, ಪ್ರಕರಣ ದಾಖಲು

Written by Mahesha Hindlemane

Updated on:

HOSANAGARA ; ದಿನಸಿ ಅಂಗಡಿಯಲ್ಲಿ ಕಾನೂನು ಬಾಹಿರವಾಗಿ ಮದ್ಯ ಮಾರಾಟ ಮಾಡುತ್ತಿದ್ದ ಪ್ರಕರಣಗಳಿಗೆ ಸಂಬಂಧಿಸಿದಂತೆ ಪಟ್ಟಣದ ಪೊಲೀಸ್‌ ಠಾಣೆಯಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿವೆ.

WhatsApp Group Join Now
Telegram Group Join Now
Instagram Group Join Now

ಹೊಸನಗರದ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ರವರ ಮಾರ್ಗದರ್ಶನದಲ್ಲಿ ಸಬ್ ಇನ್ಸ್‌ಪೆಕ್ಟರ್ ಶಂಕರಗೌಡ ಪಾಟೀಲ್ ಸಿಬ್ಬಂದಿಗಳಾದ ಸಂತೋಷ್, ಮಾಯಪ್ಪ, ರಂಜಿತ್‌ಕುಮಾರ್, ಸುನೀಲ್, ಶಿವರಾಜ್, ಗಂಗಪ್ಪ ಹಾಗೂ ಇತರರು ಮಾರುತಿಪುರ ಗ್ರಾಮದ ರಾಘವೇಂದ್ರ ಎಂ.ಎನ್. ಎಂಬಾತ ತನ್ನ ಅಂಗಡಿಯಲ್ಲಿ ಅಕ್ರಮವಾಗಿ ಮದ್ಯ ದಾಸ್ತಾನು ಮಾಡಿಕೊಂಡು ಗಿರಾಕಿಗಳಿಗೆ ಮದ್ಯ ಸೇವನೆಗೆ ಅವಕಾಶ ಮಾಡಿಕೊಡುತ್ತಿದ್ದ. ಇದನ್ನು ಪತ್ತೆ ಹಚ್ಚಿದ ಪೊಲೀಸರು ಅಂಗಡಿಯಲ್ಲಿಟ್ಟಿದ್ದ 600 ರೂ. ಮೌಲ್ಯದ ಮದ್ಯದ ಪ್ಯಾಕೇಟ್‌ಗಳನ್ನು ಹಾಗೂ ಆರೋಪಿಯನ್ನು ವಶಕ್ಕೆ ಪಡೆದಿದ್ದಾರೆ.

ಇನ್ನೊಂದು ಪ್ರಕರಣದಲ್ಲಿ ಗೊರಗೋಡು ಗ್ರಾಮದ ಆನಂದ ಶೆಟ್ಟಿ ಎಂಬಾತನು ಅಕ್ರಮ ಮದ್ಯ ಮಾರಾಟದ ಜೊತೆಗೆ ತನ್ನ ಅಂಗಡಿ ಮುಂಭಾಗದಲ್ಲಿ ಮದ್ಯ ಸೇವನೆಗೆ ಅನುವು ಮಾಡಿಕೊಡುತ್ತಿದ್ದ. ಈತನಿಂದ 440 ರೂ. ಮೌಲ್ಯದ ಅಕ್ರಮ ಮದ್ಯವನ್ನು ವಶಕ್ಕೆ ಪಡೆದು ಆರೋಪಿ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ.

Leave a Comment