ಹೊಸನಗರ ; ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು ತಕ್ಷಣದಿಂದ ತಾಲ್ಲೂಕಿನಲ್ಲಿ ಅಕ್ರಮ ಮರಳು ಹಾಗೂ ಕಲ್ಲು ಗಣಿಗಾರಿಕೆಗೆ ಬ್ರೇಕ್ ಹಾಕುವುದಾಗಿ ಇಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್ ಹೇಳಿದರು.
ಶರಾವತಿ ಹಿನ್ನೀರು ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ತಂಡ ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತಾಲೂಕಿನ ತೊಗರೆ, ಇಟ್ಟಕ್ಕಿ ಗ್ರಾಮದ ನದಿ ಪಾತ್ರದಲ್ಲಿ ಸುಮಾರು 2 ಟ್ರ್ಯಾಕ್ಟರ್ ಲೋಡ್ ಮರಳನ್ನು ಸಂಗ್ರಹಿಸಿಟ್ಟಿದ್ದು, ಅದನ್ನು ವಶಪಡಿಸಿಕೊಂಡರು.
ತಾಲ್ಲೂಕಿನ ಸುತ್ತ-ಮುತ್ತ ಹೊಳೆದಂಡೆಯ ಪಕ್ಕದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ಸಾಕಷ್ಟು ದೂರುಗಳು ಬರುತ್ತಿದ್ದು 2 ಟ್ರ್ಯಾಕ್ಟರ್ ಲೋಡ್ ಮರಳನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದ್ದು ಆರೋಪಿಗಳು ಪತ್ತೆಯಾಗಿಲ್ಲ. ಅಕ್ರಮ ಮರಳು ಗಣಿಗಾರಿಕೆ ತಡೆಯುವ ಸಂಬಂಧ ಸಂಬಧಪಟ್ಟ ಅಧಿಕಾರಿಗಳ ಸಭೆಯನ್ನು ತುರ್ತು ಕರೆದು ಅಕ್ರಮ ಮರಳುಗಾರಿಕೆ ತಡೆಯಲಾಗುವುದು ಎಂದರು.
ಈ ದಾಳಿಯ ಸಂದರ್ಭದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಜ್ಯೋತಿ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.