ಹೊಸನಗರ

ಅಕ್ರಮ ಮರಳು ಸಂಗ್ರಹ ; ಪ್ರಕರಣ ದಾಖಲು

ಹೊಸನಗರ ; ತಾಲ್ಲೂಕಿನಲ್ಲಿ ಅಕ್ರಮ ಮರಳು ದಂಧೆ ಹಾಗೂ ಕಲ್ಲು ಗಣಿಗಾರಿಕೆ ನಡೆಯುತ್ತಿದೆ ಎಂದು ಮಾಧ್ಯಮಗಳಲ್ಲಿ ಮತ್ತು ಸಾರ್ವಜನಿಕರಿಂದ ಸಾಕಷ್ಟು ದೂರುಗಳು ಬರುತ್ತಿದ್ದು ತಕ್ಷಣದಿಂದ ತಾಲ್ಲೂಕಿನಲ್ಲಿ ಅಕ್ರಮ ಮರಳು ಹಾಗೂ ಕಲ್ಲು ಗಣಿಗಾರಿಕೆಗೆ ಬ್ರೇಕ್ ಹಾಕುವುದಾಗಿ ಇಲ್ಲಿನ ಸರ್ಕಲ್ ಇನ್ಸ್‌ಪೆಕ್ಟರ್ ಗುರಣ್ಣ ಎಸ್ ಹೆಬ್ಬಾಳ್‌ ಹೇಳಿದರು.

WhatsApp Group Join Now
Telegram Group Join Now
Instagram Group Join Now

ಶರಾವತಿ ಹಿನ್ನೀರು ಪ್ರದೇಶದಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಮರಳನ್ನು ಗಣಿ ಮತ್ತು ಭೂ ವಿಜ್ಞಾನ ಇಲಾಖೆ ತಂಡ ಹಾಗೂ ಪೊಲೀಸ್ ಅಧಿಕಾರಿಗಳು ಜಂಟಿ ಕಾರ್ಯಾಚರಣೆ ನಡೆಸಿ ತಾಲೂಕಿನ ತೊಗರೆ, ಇಟ್ಟಕ್ಕಿ ಗ್ರಾಮದ ನದಿ ಪಾತ್ರದಲ್ಲಿ ಸುಮಾರು 2 ಟ್ರ್ಯಾಕ್ಟರ್ ಲೋಡ್ ಮರಳನ್ನು ಸಂಗ್ರಹಿಸಿಟ್ಟಿದ್ದು, ಅದನ್ನು ವಶಪಡಿಸಿಕೊಂಡರು.

ತಾಲ್ಲೂಕಿನ ಸುತ್ತ-ಮುತ್ತ ಹೊಳೆದಂಡೆಯ ಪಕ್ಕದಲ್ಲಿ ಅಕ್ರಮ ಮರಳು ದಂಧೆ ನಡೆಯುತ್ತಿದೆ ಎಂದು ಸಾಕಷ್ಟು ದೂರುಗಳು ಬರುತ್ತಿದ್ದು 2 ಟ್ರ್ಯಾಕ್ಟರ್ ಲೋಡ್ ಮರಳನ್ನು ಈಗಾಗಲೇ ವಶಪಡಿಸಿಕೊಳ್ಳಲಾಗಿದ್ದು ಆರೋಪಿಗಳು ಪತ್ತೆಯಾಗಿಲ್ಲ. ಅಕ್ರಮ ಮರಳು ಗಣಿಗಾರಿಕೆ ತಡೆಯುವ ಸಂಬಂಧ ಸಂಬಧಪಟ್ಟ ಅಧಿಕಾರಿಗಳ ಸಭೆಯನ್ನು ತುರ್ತು ಕರೆದು ಅಕ್ರಮ ಮರಳುಗಾರಿಕೆ ತಡೆಯಲಾಗುವುದು ಎಂದರು.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play

ಈ ದಾಳಿಯ ಸಂದರ್ಭದಲ್ಲಿ ಗಣಿ ಮತ್ತು ಭೂವಿಜ್ಞಾನ ಇಲಾಖೆಯ ಜ್ಯೋತಿ ಹಾಗೂ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯನ್ನು Malnad Times ಸಂಪಾದಕೀಯ ತಂಡವು ಲಭ್ಯ ಮಾಹಿತಿಯ ಆಧಾರದಲ್ಲಿ ಪರಿಶೀಲಿಸಿದೆ.

Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. ಇ-ಮೇಲ್ : [email protected]