HOSANAGARA ; ಸೋಮವಾರ ಬೆಳಗ್ಗೆ ಉಪವಿಭಾಗಾಧಿಕಾರಿಗಳ ನೇತೃತ್ವದಲ್ಲಿ ಹೊಸನಗರ ತಾಲ್ಲೂಕು ಮಟ್ಟದ ಮರಳು ಉಸ್ತುವಾರಿ ಸಮಿತಿಯ ಸಭೆಯನ್ನು ಕರೆಯಲಾಗಿದ್ದು ಈ ಸಭೆಯಲ್ಲಿ ಹೊಸನಗರ ತಾಲ್ಲೂಕು ತಹಶೀಲ್ದಾರ್ ರಶ್ಮಿ ಹಾಲೇಶ್, ಕಾರ್ಯನಿರ್ವಹಣಾಧಿಕಾರಿ ನರೇಂದ್ರಕುಮಾರ್, ಇಂಜಿನಿಯರ್ ಸುನೀಲ್, ವಲಯ ಅರಣ್ಯಾಧಿಕಾರಿಗಳು, ಭೂವಿಜ್ಞಾನಿ ಇಲಾಖೆಯ ಪ್ರಿಯಾ, ಪಿಡ್ಲ್ಯೂಡಿ ಇಂಜಿನಿಯರ್‌ಗಳು, ರಾಜಸ್ವ ನಿರೀಕ್ಷಕರು ಭಾಗವಹಿಸಿದರು.
ಅಕ್ರಮ ಮರಳುಗಾರಿಕೆ ಬ್ರೇಕ್ ಹಾಕಿ ಹೊರ ರಾಜ್ಯದ ಕಾರ್ಮಿಕರನ್ನು ಮನೆಗೆ ಕಳುಹಿಸಿ.
ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ. ರಾತ್ರಿ ಹಗಲು ಎನ್ನದೇ ಅಕ್ರಮ ಮರಳು ಸಾಗಾಟ ನಡೆಯುತ್ತಿದೆ ಎಂದು ಪ್ರತಿದಿನ ದೂರು ಬರುತ್ತಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂಬ ಉದ್ದೇಶದಿಂದ ಈ ಸಭೆಯನ್ನು ಆಯೋಜಿಸಲಾಗಿದ್ದು ತಕ್ಷಣದಿಂದಲೇ ಅಕ್ರಮವಾಗಿ ಮರಳು ಸಾಗಿಸುವ ವಾಹನಗಳನ್ನು ವಶಪಡಿಸಿಕೊಂಡು ಹೆಚ್ಚಿನ ದಂಡ ಹಾಕಬೇಕು. ಹೊರ ರಾಜ್ಯದ ಕೂಲಿ ಕಾರ್ಮಿಕರು ಹೊಳೆಯ ಬದಿಯಲ್ಲಿ ಗುಡಿಸಲು ಹಾಕಿಕೊಂಡಿರುವ ಬಗ್ಗೆ ದೂರುಗಳು ಬರುತ್ತಿದ್ದು ಜಿಲ್ಲಾಧಿಕಾರಿಗಳ ಹಾಗೂ ಜಿಲ್ಲಾ ರಕ್ಷಣಾಧಿಕಾರಿಗಳ ಗಮನಕ್ಕೆ ತರುವುದರ ಜೊತೆಗೆ ಅವರನ್ನು ಗಡಿಪಾರು ಮಾಡಬೇಕೆಂದು ಕಟ್ಟು ನಿಟ್ಟಿನ ಆದೇಶವನ್ನು ಉಫವಿಭಾಗಾಧಿಕಾರಿ ಯತೀಶ್ ಆದೇಶಿದ್ದಾರೆ ಎಂದು ಹೇಳಲಾಗಿದೆ.
ಅಕ್ರಮ ಮರಳು ದಂಧೆಕೋರರಿಗೆ ಎಚ್ಚರಿಕೆ ;
ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆ ನಡೆಯುತ್ತಿದೆ ಹಾಗೂ ಹೊರ ರಾಜ್ಯದ ಕೂಲಿ ಕಾರ್ಮಿಕರು ಅಕ್ರಮ ಮರಳುಗಾರಿಕೆ ಬೆಂಬಲಿಸುತ್ತಿದ್ದಾರೆ. ಹೊರ ರಾಜ್ಯದ ಕೂಲಿ ಕಾರ್ಮಿಕರನ್ನು ಹೊಳೆಯಿಂದ ಮರಳು ಎತ್ತಲು ಉಪಯೋಗಿಸಿಕೊಳ್ಳುತ್ತಿದ್ದಾರೆ ಎಂಬ ದೂರುಗಳು ಆಗಾಗ ಬರುತ್ತಿದ್ದು ತಕ್ಷಣದಿಂದಲೇ ಹೊಸನಗರ ತಾಲ್ಲೂಕಿನಲ್ಲಿ ಅಕ್ರಮ ಮರಳುಗಾರಿಕೆಗೆ ಕಡಿವಾಣ ಹಾಕಬೇಕಾಗಿದ್ದು ಮರಳು ಉಸ್ತುವಾರಿ ಸಭೆಯನ್ನು ಕರೆದು ಎಲ್ಲ ಅಧಿಕಾರಿಗಳಿಗೆ ಅಕ್ರಮವಾಗಿ ಮರಳು ದಂಧೆ ಹಾಗೂ ಸಾಗಿಸಲು ಉಪಯೋಗಿಸುವ ವಾಹನವನ್ನು ಜಪ್ತಿ ಮಾಡಿ ಇದರ ಜೊತೆಗೆ ಹೆಚ್ಚುವರಿ ದಂಡ ಹಾಗೂ ಕೇಸ್ ಹಾಕಲಾಗುವುದು ಎಂದು ತಿಳಿಸಿದ್ದು ಮುಂದಿನ ದಿನದಲ್ಲಿ ಅಕ್ರಮ ಮರಳು ದಂಧೆಗೆ ಸಂಪೂರ್ಣ ಬ್ರೇಕ್ ಬೀಳಲಿದೆ. ಹೊರ ರಾಜ್ಯದ ಕೂಲಿ ಕಾರ್ಮಿಕರನ್ನು ಗಡಿಪಾರು ಮಾಡಲಾಗುವುದು ಎಂದು ತಿಳಿಸಿದ್ದಾರೆ.