ಅಪರಾಧ ಸುದ್ದಿ

ಅರಣ್ಯ ಲೂಟಿಕೋರರ ಸಂಚು ವಿಫಲ: ಅರಣ್ಯ ಇಲಾಖೆಯ ದಿಢೀರ್ ರೇಡ್‌ನಲ್ಲಿ ಸಿಕ್ಕಿಬಿದ್ದ ಬೆಲೆಬಾಳುವ ನಾಟಾ!

ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಿಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಾಗುವಾನಿ (ತೇಗ) ಮರಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.

Forest Department RPT

ರಿಪ್ಪನ್‌ಪೇಟೆ: ಬಾಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಬೆಳಂದೂರು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡಿದು ಸಂಗ್ರಹಿಸಿಡಲಾಗಿದ್ದ ಲಕ್ಷಾಂತರ ರೂಪಾಯಿ ಮೌಲ್ಯದ ಸಾಗುವಾನಿ (ತೇಗ) ಮರಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ವಶಪಡಿಸಿಕೊಂಡಿದ್ದಾರೆ.

WhatsApp Group Join Now
Telegram Group Join Now
Instagram Group Join Now

ಬೆಳಂದೂರು ಗ್ರಾಮದ ಸರ್ವೇ ನಂಬರ್ 51ರ ಅರಣ್ಯ ವ್ಯಾಪ್ತಿಯಲ್ಲಿ ಬೆಲೆಬಾಳುವ ಸಾಗುವಾನಿ ಮರಗಳನ್ನು ಅಕ್ರಮವಾಗಿ ಕಡಿದು ಸಾಗಿಸಲು ದಾಸ್ತಾನು ಮಾಡಲಾಗಿದೆ ಎಂಬ ಖಚಿತ ಸುಳಿವು ಅರಣ್ಯ ಇಲಾಖೆಗೆ ಲಭ್ಯವಾಗಿತ್ತು. ಈ ಮಾಹಿತಿಯ ಬೆನ್ನಲ್ಲೇ ಅರಸಾಳು ವಲಯ ಅರಣ್ಯಾಧಿಕಾರಿ ಶರಣಪ್ಪ ನೇತೃತ್ವದಲ್ಲಿ ಅಧಿಕಾರಿಗಳ ತಂಡವು ಸ್ಥಳಕ್ಕೆ ದಿಢೀರ್ ಭೇಟಿ ನೀಡಿ ಪರಿಶೀಲನೆ ನಡೆಸಿತು.

ಕಾರ್ಯಾಚರಣೆ ವೇಳೆ ಅಂದಾಜು ₹4 ಲಕ್ಷ ಮೌಲ್ಯದ ತೇಗದ ದಿಮ್ಮಿಗಳು ಪತ್ತೆಯಾಗಿದ್ದು, ಸಿಬ್ಬಂದಿ ಅವುಗಳನ್ನು ಸ್ಥಳದಲ್ಲೇ ಜಪ್ತಿ ಮಾಡಿದ್ದಾರೆ.

ದಾಳಿಯಲ್ಲಿ ಉಪವಲಯ ಅರಣ್ಯಾಧಿಕಾರಿಗಳಾದ ಸುನಿಲ್, ಕುಮಾರ್ ಮಾಂಗ್ ಹಾಗೂ ಇಲಾಖೆಯ ಸಿಬ್ಬಂದಿ ವರ್ಗ ಪಾಲ್ಗೊಂಡಿತ್ತು. ಅಕ್ರಮ ಮರ ಕಡಿತಲೆಗೆ ಸಂಬಂಧಿಸಿದಂತೆ ಅರಣ್ಯ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಳ್ಳಲಾಗಿದೆ.

Malnad Times App ಡೌನ್‌ಲೋಡ್ ಮಾಡಿಶಿವಮೊಗ್ಗ ಮತ್ತು ಮಲೆನಾಡಿನ ಸುದ್ದಿಗಳನ್ನು ತಕ್ಷಣ ಪಡೆಯಿರಿ.
GET IT ONGoogle Play
Mahesha Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ 'ಮಲ್ನಾಡ್ ಟೈಮ್ಸ್' ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ.

ಇ-ಮೇಲ್ : [email protected]

error: Content is protected !!