Crime News

ಹೊಸನಗರ ಅರಣ್ಯಾಧಿಕಾರಿಗಳ ದಾಳಿ ; ಅಕ್ರಮವಾಗಿ ದಾಸ್ತಾನು ಮಾಡಿದ್ದ ಬೀಟೆ ನಾಟ ವಶ !

ಹೊಸನಗರ : ತಾಲ್ಲೂಕಿನ ಕೆರೆಹಳ್ಳಿ ಹೋಬಳಿಯ ನಂದ್ರಿ ಗ್ರಾಮದ ಸ.ನಂ.15ರ ನಂದ್ರಿ ಮೀಸಲು ಅರಣ್ಯಕ್ಕೆ ಹೊಂದಿಕೊಂಡಿರುವ ವರ್ಗಾವಣೆಗೊಂಡ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ದಾಸ್ತಾನು ಇಡಲಾಗಿದ್ದ 2-3 ವರ್ಷ ಹಳೆಯ ಬೀಟೆ ಜಾತಿಯ ಮರದ ನಾಟ ತುಂಡುಗಳನ್ನು ಅರಣ್ಯ ಇಲಾಖೆ ಪತ್ತೆ ಹಚ್ಚಿದೆ.

WhatsApp Group Join Now
Telegram Group Join Now
Instagram Group Join Now
📢 Stay Updated! Join our WhatsApp Channel Now →

ಖಚಿತ ವರ್ತಮಾನದ ಮೇರೆಗೆ ದಾಳಿ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಒತ್ತುವರಿ ಜಮೀನಿನಲ್ಲಿನ ಕೃಷಿ ಹೊಂಡದ ಪಕ್ಕದಲ್ಲಿ ಮಣ್ಣಿನಲ್ಲಿ ಮುಚ್ಚಿ ಇಡಲಾಗಿದ್ದ 14 ಬೀಟೆ ಜಾತಿಯ ಮರದ ನಾಟ ತುಂಡುಗಳನ್ನು ವಶಕ್ಕೆ ಪಡೆದಿದ್ದಾರೆ.

ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ನಿವಾಸಿ ಎಂ. ಗಣೇಶ ಬಿನ್ ಬಾಬುಶೆಟ್ಟಿ (40) ವಿರುದ್ಧ ಕರ್ನಾಟಕ ಅರಣ್ಯ ಕಾಯ್ದೆ 1963 ಹಾಗೂ ಕರ್ನಾಟಕ ಅರಣ್ಯ ಕಾನೂನು 1969ರ ಅಡಿಯಲ್ಲಿ ಹೊಸನಗರ ವಲಯ ಕಚೇರಿಯಲ್ಲಿ ಪ್ರಕರಣ ದಾಖಲಿಸಲಾಗಿದ್ದು, ವಶಪಡಿಸಿಕೊಂಡಿರುವ ನಾಟ ತುಂಡುಗಳನ್ನು ಅಮಾನತುಪಡಿಸಲಾಗಿದೆ.

ಕಾರ್ಯಾಚರಣೆಯಲ್ಲಿ ವಲಯ ಅರಣ್ಯಾಧಿಕಾರಿ ಅನಿಲ್ ಕುಮಾರ್ ಎಸ್., ಉಪ ವಲಯ ಅರಣ್ಯಾಧಿಕಾರಿ ನವೀನ ಕುಮಾರ್ ಸಿ.ಎಂ., ಪ್ರಶಾಂತ್ ಜಿ., ಪುಟ್ಟಸ್ವಾಮಿ ಕೆ.ವಿ., ಗಿರೀಶ್ ಎಸ್. ಸೇರಿದಂತೆ ಗಸ್ತು ಅರಣ್ಯ ಪಾಲಕರು ಹಾಗೂ ಸಿಬ್ಬಂದಿಗಳಾದ ಸುರೇಶ್, ಪುನೀತ್, ಮಹೇಶ್ ಹೆಚ್.ಜಿ. ಮತ್ತು ಇತರರು ಭಾಗವಹಿಸಿದ್ದರು.

ಮಾಹಿತಿ ಮತ್ತು ಮೂಲ: ಈ ವರದಿಯ ಮಾಹಿತಿ ವರದಿಗಾರರು, ಅಧಿಕೃತ ಪ್ರಕಟಣೆಗಳು ಅಥವಾ ಸ್ಥಳದಲ್ಲಿನ ವಿಶ್ವಾಸಾರ್ಹ ಮೂಲಗಳಿಂದ ಪರಿಶೀಲಿಸಲಾಗಿದೆ.

Mahesh Hindlemane

ಮಲೆನಾಡಿನ ಹೆಬ್ಬಾಗಿಲು ಶಿವಮೊಗ್ಗದ ಸ್ಥಳೀಯ ನ್ಯೂಸ್ ವೆಬ್‌ಸೈಟ್‌ಗಳಲ್ಲಿ ಪ್ರತಿನಿಧಿಯಾಗಿ ವೃತ್ತಿ ಜೀವನ ಪ್ರಾರಂಭ. ಪತ್ರಿಕೋದ್ಯಮದಲ್ಲಿ 8 ವರ್ಷಗಳ ಅನುಭವ. ಜಿಲ್ಲಾ ಮಟ್ಟದ ದಿನಪತ್ರಿಕೆಗಳಲ್ಲಿ ಹಾಗೂ ವೆಬ್‌ಸೈಟ್‌ಗಳಲ್ಲಿ ಮಲೆನಾಡಿಗೆ ಸಂಬಂಧಿಸಿದ ವಿಷಯಗಳ ಲೇಖನಗಳನ್ನು ಬರೆದಿದ್ದೇನೆ. ಪ್ರಸ್ತುತ <strong>'ಮಲ್ನಾಡ್ ಟೈಮ್ಸ್'</strong> ಡಿಜಿಟಲ್ ನಲ್ಲಿ ಸಂಪಾದಕನಾಗಿ ಮುಂದುವರೆದಿದ್ದೇನೆ. <a href="mailto:[email protected]">[email protected]</a>